ದ.ಕ. ಜಿಲ್ಲೆಯ ಮೂವರಿಗೆ ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ರಾಷ್ಟ್ರೀಯ ಪ್ರಶಸ್ತಿ...ಪ್ರಧಾನ ಮಂತ್ರಿ ಯೋಜನೆಗಳಿಗೆ ಮರುನಾಮಕರಣ ಮಾಡದಂತೆ ರಾಜ್ಯಗಳಿಗೆ ಕೇಂದ್ರ ಸರಕಾರದ ಆಗ್ರಹ...VHP ಕಾರ್ಯಕ್ರಮದಲ್ಲಿ ವಿವಾದಾತ್ಮಕ ಹೇಳಿಕೆ: ಸುಪ್ರೀಂಕೋರ್ಟ್ ಕೊಲಿಜಿಯಂ ಮುಂದೆ ನ್ಯಾ. ಶೇಖರ್ ಯಾದವ್ ಹಾಜರಾಗುವ ಸಾಧ್ಯತೆ

ಲೋಕಸಭೆ ಚುನಾವಣೆಯಲ್ಲಿ ಹೆಚ್ಚಿನ ಸೀಟು ಗೆಲ್ಲುವ ಟಾಸ್ಕ್: ವಿಫಲರಾದ ಸಚಿವರಿಗೆ ಸಿದ್ದು ಸಂಪುಟದಿಂದ ಗೇಟ್ ಪಾಸ್!

ಬೆಂಗಳೂರು:  2024 ರ ಲೋಕಸಭಾ ಚುನಾವಣೆ ಫಲಿತಾಂಶವು ಕರ್ನಾಟಕದ ಕಾಂಗ್ರೆಸ್ ಸರ್ಕಾರದ ಮೇಲೆ ಪ್ರಭಾವ ಬೀರುವ ಸಾಧ್ಯತೆಯಿದೆ, ಏಕೆಂದರೆ ಪಕ್ಷದ ಹೈಕಮಾಂಡ್ ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್‌ಗೆ ಮಾತ್ರವಲ್ಲದೆ ಸಚಿವರಿಗೂ ಸಹ ಗೆಲುವಿಗೆ ಟಾಸ್ಕ್ ನೀಡಿದೆ. ಆಯಾ ಲೋಕಸಭಾ ಕ್ಷೇತ್ರಗಳಲ್ಲಿ ಪಕ್ಷದ ಅಭ್ಯರ್ಥಿಗಳನ್ನು ಗೆಲ್ಲಿಸುವ ಹೊಣೆಗಾರಿಕೆ ನೀಡಲಾಗಿದ  ಎಂದು ಮೂಲಗಳು ತಿಳಿಸಿವೆ.

ಒಂದು ವೇಳೆ ತಮ್ಮ ಪ್ರಯತ್ನದಲ್ಲಿ ವಿಫಲರಾದವರಿಗೆ ಸಚಿವ ಸಂಪುಟದಿಂದ ಗೇಟ್ ಪಾಸ್ ಕೊಡುವ  ಸಾಧ್ಯತೆಯಿದೆ, ಟಾಸ್ಕ್ ಗೆಲ್ಲಲು ವಿಫಲರಾದವರನ್ನು ಸಚಿವ ಸ್ಥಾನದಿಂದ ಕೆಳಗಿಳಿಸಿ ಹೊಸ ಮುಖಗಳಿಗೆ ಅವಕಾಶ ನೀಡಲಾಗುವುದು. ಪಕ್ಷವು ಗಮನಾರ್ಹ ಸುಧಾರಣೆ ಮಾಡಲು ವಿಫಲವಾದರೆ ಕೆಲವು ಮಂತ್ರಿಗಳನ್ನು ಬಲಿಪಶು ಮಾಡುವ ಸಾಧ್ಯತೆಗಳನ್ನು ತಳ್ಳಿಹಾಕಲಾಗುವುದಿಲ್ಲ ಎಂದು ಕಾಂಗ್ರೆಸ್ ನಾಯಕರೊಬ್ಬರು ಹೇಳಿದ್ದಾರೆ.

2019 ರ ಸಾರ್ವತ್ರಿಕ ಚುನಾವಣೆಯಲ್ಲಿ ಪಕ್ಷವು ಒಂದೇ ಸ್ಥಾನವನ್ನು ಗೆದ್ದಿತ್ತು.  ಡಿಕೆ ಸುರೇಶ್ ಮೂಲಕ ಬೆಂಗಳೂರು ಗ್ರಾಮಾಂತರ ಲೋಕಸಭೆಯಿಂದ ಗೆಲುವು ಸಾಧಿಸಿದ್ದರು.

ಕೆಲವು ನಾಯಕರನ್ನು ಕಣಕ್ಕಿಳಿಸಲು ಪಕ್ಷ ನಿರ್ಧರಿಸಿದೆ, ಸ್ಪರ್ಧಿಸಿದ ಅಭ್ಯರ್ಥಿಗಳ ಸೋಲಿಗೆ ಕೆಲವರನ್ನು ಹರಕೆಯ ಕುರಿ ಮಾಡುವ ಸಾಧ್ಯತೆಯಿದೆ ಎಂದು ಮತ್ತೊಬ್ಬ ಕಾಂಗ್ರೆಸ್ ನಾಯಕರೊಬ್ಬರು ಅಭಿಪ್ರಾ ಯ ಪಟ್ಟಿದ್ದಾರೆ.

ಈ ಮಧ್ಯೆ, ಹಳೇ ಮೈಸೂರಿನಲ್ಲಿ ಬಿಜೆಪಿ ಮತ್ತು ಜೆಡಿಎಸ್ ನಡುವಿನ ಮೈತ್ರಿ ಬೆಂಗಳೂರು ಗ್ರಾಮಾಂತರ ಸೇರಿದಂತೆ ಕೆಲವು ಕ್ಷೇತ್ರಗಳಲ್ಲಿ ಕಾಂಗ್ರೆಸ್‌ ಗೆ ಸಮಸ್ಯೆಯಾಗಬಹುದು. ಹಾಗಾಗಿ, ಕೆಲವು ತಲೆಗಳು ರಾಜಕೀಯವಾಗಿ ಉರುಳಬೇಕಾಗಬಹುದು, ಲೋಕಸಭಾ ಚುನಾವಣೆಯ ನಂತರ ಹೊಸ ಮುಖಗಳಿಗೆ ದಾರಿ ಮಾಡಿಕೊಡಬಹುದು ಎಂಬುದು ರಾಜಕೀಯ ಪಂಡಿತರ ಅಭಿಪ್ರಾಯವಾಗಿದೆಯ

ಪುನಾರಚನೆಗೆ ಹೈಕಮಾಂಡ್ ಮುಂದಾಗಿರುವ ಹಿನ್ನೆಲೆಯಲ್ಲಿ ಸಿದ್ದರಾಮಯ್ಯ ಸಂಪುಟಕ್ಕೂ ಹಿನ್ನಡೆಯಾಗಲಿದೆ ಎಂದು  ಆಡಳಿತಾರೂಢ ಕಾಂಗ್ರೆಸ್‌ನ ಕೆಲವು ನಾಯಕರು ಭವಿಷ್ಯ ನುಡಿದಿದ್ದಾರೆ. ಲೋಕಸಭೆ ಚುನಾವಣೆ ನಂತರ ಖಂಡಿತ ಬದಲಾವಣೆ ಆಗಲಿದ್ದು, ಹೆಚ್ಚಿನ ಲೋಕಸಭೆ ಸ್ಥಾನ ಗೆಲ್ಲಲು ಕಾಂಗ್ರೆಸ್ ಗೆ ಸಾಧ್ಯವಾಗದಿದ್ದರೆ ಸಚಿವರಾಗಿ ಏಕೆ ಮುಂದುವರಿಯಬೇಕು ಎಂದು ಸಿದ್ದರಾಮಯ್ಯನವರ ನಿಷ್ಠಾವಂತ ಸಹಕಾರ ಸಚಿವ ಕೆ.ಎನ್.ರಾಜಣ್ಣ ಪ್ರಶ್ನಿಸಿದ್ದಾರೆ.

ಆದರೆ ಅವರು ಸಿಎಂ ಹುದ್ದೆ ಬದಲಾವಣೆಗೆ ಸಂಬಂಧಿಸಿದಂತೆ ಪ್ರತಿಕ್ರಿಯಿಸಿದ ಅವರು ಸಿಎಂ ಬದಲಾವಣೆ ಇಲ್ಲ ಎಂದು ಸ್ಪಷ್ಟ ಪಡಿಸಿದರು. ಪಕ್ಷವು ಕನಿಷ್ಠ 20 ಸ್ಥಾನಗಳನ್ನು ಗೆಲ್ಲುವತ್ತ ಗಮನಹರಿಸಿದೆ ಎಂದು ಸಿದ್ದರಾಮಯ್ಯ ಹೇಳುತ್ತಿದ್ದರೆ, ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಸಚಿವ ಎಚ್‌ಕೆ ಪಾಟೀಲ್ ತಮ್ಮ ಪಕ್ಷ 25 ಸ್ಥಾನಗಳನ್ನು ಗೆಲ್ಲುತ್ತದೆ ಎಂದು ಹೇಳಿದ್ದಾರೆ.

No Comments

Leave A Comment