Log In
BREAKING NEWS >
ಕರಾವಳಿಯಲ್ಲಿ ಹೆಚ್ಚಿದ ಬಿಸಿಲಿನ ತಾಪಮಾನ-ಸಾವು ಸ೦ಭವಿಸುವ ಸಾಧ್ಯತೆ-ಎಚ್ಚರ ಬಿಸಿಲಿನಲ್ಲಿ ಹೊರಗೆ ಬರಲೇ ಬೇಡಿ....

ಕೋಲಾರ: ಕಾಂಗ್ರೆಸ್ ಮುಖಂಡನ ಭೀಕರ ಹತ್ಯೆ, ಸುಪಾರಿ ಕೊಲೆ ಶಂಕೆ

ಕೋಲಾರ: ರಾಜ್ಯದಲ್ಲಿ ಕಾಂಗ್ರೆಸ್ ಮುಖಂಡನ ಭೀಕರ ಹತ್ಯೆ ಪ್ರಕರಣ ಬೆಳಕಿಗೆ ಬಂದಿದ್ದು, ಕೋಲಾರದಲ್ಲಿ ದುಷ್ಕರ್ಮಿಗಳು ಸುಪಾರಿ ಪಡೆದು ಹತ್ಯೆ ಮಾಡಿರುವ ಶಂಕೆ ವ್ಯಕ್ತವಾಗಿದೆ.

ಮಾಜಿ ಸ್ಟೀಕರ್‌ ರಮೇಶ್‌ ಕುಮಾರ್‌ ಬೆಂಬಲಿಗನನ್ನು ಹಾಡಹಗಲೇ ದುಷ್ಕರ್ಮಿಗಳು ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆ (Murder Case) ಮಾಡಿದ್ದು, ಕೋಲಾರ ಜಿಲ್ಲೆಯ ಶ್ರೀನಿವಾಸಪುರ ತಾಲೂಕಿನ ಕಾಂಗ್ರೆಸ್ ಮುಖಂಡ ಕೌನ್ಸಿಲರ್ ಸೀನಪ್ಪ ಅಲಿಯಾಸ್ ಶ್ರೀನಿವಾಸ್ ಎಂಬುವವರನ್ನು ದುಷ್ಕರ್ಮಿಗಳು ಕೊಲೆಗೈದಿದ್ದಾರೆ.

ಮುಳಬಾಗಿಲು ರಸ್ತೆಯ ನಿರ್ಮಾಣ ಹಂತದ ರೆಸ್ಟೋರೆಂಟ್ ಬಳಿ ಆರು ಮಂದಿ ಅಪರಿಚಿತರು ದಾಳಿ ಮಾಡಿ ಹಲ್ಲೆ ನಡೆಸಿ ಪರಾರಿಯಾಗಿದ್ದಾರೆ. ತೀವ್ರ ರಕ್ತದ ಮಡುವಿನಲ್ಲಿ ಬಿದ್ದಿದ್ದ ಶ್ರೀನಿವಾಸ್‌ ಅವರನ್ನು ಸ್ಥಳೀಯರು ಕೂಡಲೇ ಆರ್‌ಜೆ ಜಾಲಪ್ಪ ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು. ಆದರೆ ಚಿಕಿತ್ಸೆ ಫಲಿಸದೇ ಶ್ರೀನಿವಾಸ್‌ ಮೃತಪಟ್ಟಿದ್ದಾರೆ.

ಸ್ಥಳಕ್ಕೆ ಶ್ರೀನಿವಾಸಪುರ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಆರೋಪಿಗಳಿಗೆ ಪೊಲೀಸರು ಹುಡುಕಾಟವನ್ನು ನಡೆಸಿದ್ದಾರೆ. ಸುಪಾರಿ ಪಡೆದು ಕೊಲೆಗೆ ಯತ್ನಿಸಿರುವ ಆರೋಪವಿದೆ. ಶ್ರೀನಿವಾಸ್‌ ಮುಂದಿನ ಲೋಕಸಭಾ ಚುನಾವಣೆ ಆಕಾಂಕ್ಷಿಯಾಗಿದ್ದರು. ಮಾಜಿ ಸ್ಪೀಕರ್ ರಮೇಶ್ ಕುಮಾರ್ , ಗೃಹ ಸಚಿವ ಪರಮೇಶ್ವರ್‌ ಅವರಿಗೂ ಆಪ್ತರಾಗಿದ್ದರು.

ಶ್ರೀನಿವಾಸ್ ಸಾವಿಗೆ ಸ್ಥಳೀಯ ಕಾಂಗ್ರೆಸ್ ಮುಖಂಡರು ಸಂತಾಪ ಸೂಚಿಸಿದ್ದು, ಕೊಲೆಗೈದ ಆರೋಪಿಗಳನ್ನು ಕೂಡಲೇ ಬಂಧಿಸುವಂತೆ ಆಗ್ರಹಿಸಿದ್ದಾರೆ.

No Comments

Leave A Comment