ದ.ಕ. ಜಿಲ್ಲೆಯ ಮೂವರಿಗೆ ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ರಾಷ್ಟ್ರೀಯ ಪ್ರಶಸ್ತಿ...ಪ್ರಧಾನ ಮಂತ್ರಿ ಯೋಜನೆಗಳಿಗೆ ಮರುನಾಮಕರಣ ಮಾಡದಂತೆ ರಾಜ್ಯಗಳಿಗೆ ಕೇಂದ್ರ ಸರಕಾರದ ಆಗ್ರಹ...VHP ಕಾರ್ಯಕ್ರಮದಲ್ಲಿ ವಿವಾದಾತ್ಮಕ ಹೇಳಿಕೆ: ಸುಪ್ರೀಂಕೋರ್ಟ್ ಕೊಲಿಜಿಯಂ ಮುಂದೆ ನ್ಯಾ. ಶೇಖರ್ ಯಾದವ್ ಹಾಜರಾಗುವ ಸಾಧ್ಯತೆ

ಕಾರ್ಕಳ: ನಾಪತ್ತೆಯಾಗಿದ್ದ ಹೆಡ್‌ಕಾನ್‌ಸ್ಟೇಬಲ್‌ ಮೃತದೇಹ ಬಾವಿಯಲ್ಲಿ ಪತ್ತೆ

ಕಾರ್ಕಳ:ಅ. 23, ಅಕ್ಟೋಬರ್ 19ರಂದು ಕಾಣೆಯಾಗಿದ್ದ ಕಾರ್ಕಳ ನಗರ ಪೊಲೀಸ್ ಠಾಣೆಯ ಹೆಡ್‌ಕಾನ್‌ಸ್ಟೇಬಲ್‌ ಅವರ ಮೃತದೇಹ ಕಾರ್ಕಳ ಪುಲ್ಕೇರಿ ಸಮೀಪದ ಬಾವಿಯಲ್ಲಿ ಇಂದು ಪತ್ತೆಯಾಗಿದೆ. ಕಾರ್ಕಳ ನಗರ ಠಾಣೆಯ ಹೆಡ್‌ಕಾನ್‌ಸ್ಟೇಬಲ್‌ ಶೃತಿನ್ ಶೆಟ್ಟಿ (35) ಮೃತದೇಹ ಪತ್ತೆ.

ಕಾಪು ಜನಾರ್ದನ ದೇವಸ್ಥಾನ ಬಳಿಯಿರುವ ಅಂಗಡಿಮನೆ ನಿವಾಸಿ ಶೃತಿನ್ ಶೆಟ್ಟಿ ಅ.19ರಂದು ಕಾಣೆಯಾಗಿದ್ದು, ಅಂದು ರಾತ್ರಿ 7.30ಕ್ಕೆ ಪತ್ನಿಗೆ ಫೋನ್ ಮಾಡಿ ನಾನು ನಂದಿಕೂರಿನಲ್ಲಿದ್ದು ಮನೆಗೆ ಬರುತ್ತಿರುವುದಾಗಿ ಹೇಳಿದ್ದರು. ಅನಂತರ ಅವರ ಫೋನ್ ಸ್ವಿಚ್ ಆಫ್ ಆಗಿತ್ತು. ಶುಕ್ರವಾರ ಪಡುಬಿದ್ರಿ ಪೊಲೀಸ್ ಠಾಣೆಯಲ್ಲಿ ಶೃತಿನ್ ಪತ್ನಿ ನಾಪತ್ತೆ ದೂರು ದಾಖಲಿಸಿದ್ದರು.

ಇನ್ನು 2008ರ ಬ್ಯಾಚಿನಲ್ಲಿ ಪೊಲೀಸ್ ಇಲಾಖೆಗೆ ಸೇರ್ಪಡೆಯಾಗಿದ್ದ ಇವರು ಎರಡು ತಿಂಗಳ ಹಿಂದೆಯಷ್ಟೇ ಬಡ್ತಿಯಾಗಿ ಕಾರ್ಕಳ ನಗರ ಪೊಲೀಸ್ ಠಾಣೆಯ ಹೆಡ್‌ಕಾನ್‌ಸ್ಟೆಬಲ್ ಆಗಿ ಕರ್ತವ್ಯಕ್ಕೆ ಹಾಜರಾಗಿದ್ದರು.

ಈ ಕುರಿತು ಪೊಲೀಸರು ಅಸಹಜ ಸಾವು ಪ್ರಕರಣ ದಾಖಲು ಮಾಡಿಕೊಂಡಿದ್ದಾರೆ.

No Comments

Leave A Comment