``````````````ನಾಡಿನ ಸಮಸ್ತ ಜನತೆಗೆ,ನಮ್ಮ ಎಲ್ಲಾ ಜಾಹೀರಾತುದಾರರಿಗೆ,ಓದುಗರಿಗೆ ,ಅಭಿಮಾನಿಗಳಿಗೆ "ಶ್ರೀಅನ೦ತವೃತದ"ಶುಭಾಶಯಗಳು......

ತಮಿಳುನಾಡಿನಲ್ಲಿ ಭೀಕರ ಅಪಘಾತ: ಬಸ್‌- ಟಾಟಾ ಸುಮೋ ಢಿಕ್ಕಿ, 7 ಸಾವು, 14 ಜನರಿಗೆ ಗಾಯ

ಚೆನ್ನೈ: ತಮಿಳುನಾಡಿನಲ್ಲಿ ಭೀಕರ ರಸ್ತೆ ಅಪಘಾತ ಸಂಭವಿಸಿದ್ದು, ಪ್ರಯಾಣಿಕರ ಬಸ್ ಹಾಗೂ ಟಾಟಾ ಸುಮೋ ಮುಖಾಮುಖಿ ಢಿಕ್ಕಿಯಾದ ಪರಿಣಾಮ 7 ಮಂದಿ ಸಾವನ್ನಪ್ಪಿ, 14 ಜನರು ಗಾಯಗೊಂಡಿದ್ದಾರೆ ಎಂದು ತಿಳಿದುಬಂದಿದೆ.

ತಮಿಳುನಾಡಿನ ತಿರುವಣ್ಣಾಮಲೈ ಜಿಲ್ಲೆಯ ಚೆಂಗಂನಲ್ಲಿ ಈ ಘಟನೆ ನಡೆದಿದ್ದು, ಸರ್ಕಾರಿ ಬಸ್ ಮತ್ತು ಟಾಟಾ ಸುಮೋ ಮುಖಾಮುಖಿ ಡಿಕ್ಕಿಯಾಗಿದೆ. ಮೂಲಗಳ ಪ್ರಕಾರ ಬಸ್ ಬೆಂಗಳೂರಿನಿಂದ ತಿರುವಣ್ಣಾಮಲೈಗೆ ತೆರಳುತ್ತಿತ್ತು. ಕರುಮಂಕುಲಂ ಪ್ರದೇಶದಲ್ಲಿ ಎರಡು ವಾಹನಗಳು ಮುಖಾಮುಖಿ ಡಿಕ್ಕಿಯಾಗಿವೆ. ಇದರಿಂದ 7 ಮಂದಿ ಸ್ಥಳದಲ್ಲೇ ಮೃತಪಟ್ಟಿದ್ದಾರೆ.

ತಿರುವಣ್ಣಾಮಲೈ ಜಿಲ್ಲಾ ಪೊಲೀಸರು ಟಾಟಾ ಸುಮೋದಲ್ಲಿ ಬಂದ ಪ್ರಯಾಣಿಕರ ಬಗ್ಗೆ ಮಾಹಿತಿ ಸಂಗ್ರಹಿಸುತ್ತಿದ್ದು, ಮೃತರ ಶವಗಳನ್ನು ಹೊರತೆಗೆದು ಮರಣೋತ್ತರ ಪರೀಕ್ಷೆಗೆ ಕಳುಹಿಸುವ ಪ್ರಕ್ರಿಯೆ ನಡೆಸಲಾಗುತ್ತಿದೆ. ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

No Comments

Leave A Comment