Log In
BREAKING NEWS >
ಡಿ.7ರ ಗುರುವಾರದ೦ದು ಸಾಯಂಕಾಲ 4.00 ಘಂಟೆಗೆ ಕಲ್ಯಾಣಪುರ ಶ್ರೀವೆ೦ಕಟರಮಣ ದೇವಸ್ಥಾನ ಗೋಕರ್ಣಮಠಾಧೀಶರ ಪ್ರಥಮ ಭೇಟಿ....

ರೇಷನ್ ಹಗರಣ: ಪಶ್ಚಿಮ ಬಂಗಾಳ ಸಚಿವ ಜ್ಯೋತಿಪ್ರಿಯೋ ಮಲ್ಲಿಕ್ ಬಂಧಿಸಿದ ಇಡಿ

ಕೋಲ್ಕತ್ತಾ: ಪಶ್ಚಿಮ ಬಂಗಾಳದ ಬಹು-ಕೋಟಿ ಪಡಿತರ ವಿತರಣೆ ಹಗರಣಕ್ಕೆ ಸಂಬಂಧಿಸಿದ ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಪಶ್ಚಿಮ ಬಂಗಾಳ ಸಚಿವ ಜ್ಯೋತಿಪ್ರಿಯೋ ಮಲ್ಲಿಕ್ ಅವರನ್ನು ಜಾರಿ ನಿರ್ದೇಶನಾಲಯ(ಇಡಿ) ಶುಕ್ರವಾರ ಬಂಧಿಸಿದೆ ಎಂದು ಅಧಿಕೃತ ಮೂಲಗಳು ತಿಳಿಸಿವೆ.

ಸುಮಾರು 17-18 ಗಂಟೆಗಳ ವಿಚಾರಣೆಯ ನಂತರ ಇಂದು ಬೆಳಗಿನ ಜಾವ ಹಣ ವರ್ಗಾವಣೆ ತಡೆ ಕಾಯ್ದೆಯಡಿ ಸಚಿವ ಮಲ್ಲಿಕ್ ಅವರನ್ನು ಬಂಧಿಸಲಾಯಿತು ಎಂದು ಅವರು ಹೇಳಿದ್ದಾರೆ.

ಮಲ್ಲಿಕ್ ಅವರನ್ನು ಸ್ಥಳೀಯ ನ್ಯಾಯಾಲಯಕ್ಕೆ ಹಾಜರುಪಡಿಸಲಾಗುವುದು ಮತ್ತು ಹೆಚ್ಚಿನ ವಿಚಾರಣೆಗಾಗಿ ಇಡಿ ಅವರನ್ನು ತನ್ನ ಕಸ್ಟಡಿಗೆ ಕೇಳಲಿದೆ ಎಂದು ಅವರು ಹೇಳಿದ್ದಾರೆ.

“ನಾನು ದೊಡ್ಡ ಪಿತೂರಿಯ ಬಲಿಪಶು”. ಬಿಜೆಪಿ ನಾಯಕ ಹಾಗೂ ಟಿಎಂಸಿ ಪಕ್ಷದ ಮಾಜಿ ಸಹೋದ್ಯೋಗಿ ಸುವೇಂದು ಅಧಿಕಾರಿ ಈ ಸಂಚು ರೂಪಿಸಿದ್ದಾರೆ ಎಂದು ಎಂದು ಬಂಧನದ ಬಳಿಕ ಸಚಿವ ಮಲ್ಲಿಕ್ ಅವರು ಆರೋಪಿಸಿದ್ದಾರೆ.

ಇಡಿ ಅಧಿಕಾರಿಗಳು ನಿನ್ನೆ ಮಲ್ಲಿಕ್ ಅವರ ಮನೆ ಮೇಲೆ ದಾಳಿ ನಡೆಸಿತ್ತು. ಕೇಂದ್ರ ಕೋಲ್ಕತ್ತಾದ ಅಮ್ಹೆರ್ಸ್ಟ್ ಸ್ಟ್ರೀಟ್‌ನಲ್ಲಿರುವ ಅವರ ಪೂರ್ವಜರ ಮನೆಯನ್ನೂ ಇಡಿ ಶೋಧಿಸಿತ್ತು.

No Comments

Leave A Comment