ಉಡುಪಿ :ವಿಶ್ವ ಬಂಟರ ಸಮ್ಮೇಳನ-2023ಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯರಿ೦ದ ಚಾಲನೆ-ಮು೦ದಿನ ಬಜೆಟ್ ನಲ್ಲಿ ನಿಗಮ ಘೋಷಣೆ
ಉಡುಪಿ : ಅ.28, ಉಡುಪಿಯ ಅಜ್ಜರಕಾಡಿನ ಮಹಾತ್ಮ ಗಾಂಧಿ ಮೈದಾನದಲ್ಲಿ ಜಾಗತಿಕ ಬಂಟರ ಸಂಘಗಳ ಒಕ್ಕೂಟದ ವತಿಯಿಂದ ಆಯೋಜಿಸಲಾಗಿದ್ದ ‘ವಿಶ್ವ ಬಂಟರ ಸಮ್ಮೇಳನ-2023ಕ್ಕೆ ಶನಿವಾರದ೦ದು ರಾಜ್ಯದ ಮುಖ್ಯಮಂತ್ರಿ ಸಿದ್ದರಾಮಯ್ಯರವರು ವಿದ್ಯುಕ್ತ ಚಾಲನೆ ನೀಡಿದರು.
ಸಮಾರ೦ಭದಲ್ಲಿ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ, ವಿಕಲಚೇತನರ ಹಾಗೂ ಹಿರಿಯನಾಗರೀಕರ ಸಬಲೀಕರಣ ಸಚಿವರು ಹಾಗೂ ಉಡುಪಿ ಜಿಲ್ಲಾ ಉಸ್ತುವಾರಿ ಸಚಿವರಾದ ಲಕ್ಷ್ಮೀ ಆರ್ ಹೆಬ್ಬಾಳ್ಕರ್, ಉಡುಪಿಯ ಪುತ್ತಿಗೆ ಮಠದ ಶ್ರೀ ಶ್ರೀ ಸುಗುಣೇಂದ್ರ ತೀರ್ಥ ಶ್ರೀಪಾದರು, ಪಲಿಮಾರು ಮಠದ ಶ್ರೀಶ್ರೀವಿದ್ಯಾಧೀಶ ತೀರ್ಥ ಶ್ರೀಪಾದರು, ವಿಧಾನಸಭೆಯ ಸಭಾಪತಿ ಯು.ಟಿ.ಖಾದರ್, ಜಾಗತಿಕ ಬಂಟರ ಸಂಘಗಳ ಒಕ್ಕೂಟದ ಅಧ್ಯಕ್ಷರಾದ ಐಕಳ ಹರೀಶ್ ಶೆಟ್ಟಿ, ಶಾಸಕರಾದ ಗಣೇಶ್ ಹುಕ್ಕೇರಿ, ಯಶ್ಪಾಲ್ ಸುವರ್ಣ, ಅಶೋಕ್ ಕುಮಾರ್ ರೈ, ಮಂಜುನಾಥ್ ಭಂಡಾರಿ, ಮಾಜಿ ಸಚಿವ ರಮಾನಾಥ್ ರೈ, ವಿಶೇಷ ಅತಿಥಿಗಳಾಗಿ ಕನ್ಯಾನ ಸದಾಶಿವ ಶೆಟ್ಟಿ, ತೋನ್ಸೆ ಆನಂದ ಶೆಟ್ಟಿ, ಶಶಿರೇಖಾ ಆನಂದ ಶೆಟ್ಟಿ, ಎಂ.ಆರ್.ಜಿ ಗ್ರೂಪ್ ನ ಕೆ.ಪ್ರಕಾಶ್ ಶೆಟ್ಟಿ, ಮಾಜಿ ಸಭಾಪತಿ ಕೆ.ಪ್ರತಾಪಚಂದ್ರ ಶೆಟ್ಟಿ, ಕಾಂಗ್ರೆಸ್ ಮುಖಂಡ ಐವನ್ ಡಿಸೋಜಾ, ಅಭಯ ಚಂದ್ರ ಜೈನ್, ಜಿ.ಎ.ಭಾವ ಸೇರಿದಂತೆ ಹಲವು ಮುಖಂಡರು, ಬಂಟರ ಸಮುದಾಯದ ಹಲವು ಗಣ್ಯರು ಉಪಸ್ಥಿತರಿದ್ದರು.