ಉಡುಪಿ ಶ್ರೀಲಕ್ಷ್ಮೀವೆ೦ಕಟೇಶ ದೇವಸ್ಥಾನದಲ್ಲಿ ಜನವರಿ 29ರಿ೦ದ 125 ದಿನಗಳಕಾಲ ನಿರ೦ತರ ಅಹೋರಾತ್ರೆ ಭಜನಾ ಕಾರ್ಯಕ್ರಮವು ಜರಗಲಿದೆ. ಭಜನಾ ಕಾರ್ಯಕ್ರಮವನ್ನು ಕಾಶೀಮಠ ಶ್ರೀಶ್ರೀಸ೦ಯಮೀ೦ದ್ರ ತೀರ್ಥಶ್ರೀಪಾದರು ದೀಪಪ್ರಜ್ವಲನೆ ಮಾಡುವುದರೊ೦ದಿಗೆ ಭಜನಾ ಕಾರ್ಯಕ್ರಮಕ್ಕೆ ಚಾಲನೆ ನೀಡಲಿದ್ದಾರೆ.
ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರಿಗೆ ಪುತ್ತಿಗೆ ಪರ್ಯಾಯಕ್ಕೆ ಆಹ್ವಾನ
ಉಡುಪಿ: ಉಡುಪಿ ಶ್ರೀ ಪುತ್ತಿಗೆ ಮಠಾಧೀಶರಾದ ಶ್ರೀ ಸುಗುಣೇಂದ್ರತೀರ್ಥ ಶ್ರೀಪಾದರ ಚತುರ್ಥ ಪರ್ಯಾಯ ಮಹೋತ್ಸವಕ್ಕೆ ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರನ್ನು ಪರ್ಯಾಯ ಸ್ವಾಗತ ಸಮಿತಿಯ ಪರವಾಗಿ ಪುತ್ತಿಗೆ ಮಠದ ಸಂತೋಷ್ ಪಿ. ಶೆಟ್ಟಿ ತೆಂಕರಗುತ್ತು ಆಹ್ವಾನಿಸಿದರು.
ಕೆಪಿಸಿಸಿ ಕೋ ಆರ್ಡಿನೇಟರ್ ಮತ್ತು ಬಳ್ಳಾರಿ ಜಿಲ್ಲಾ ಉಸ್ತುವಾರಿ ಜಿ. ಕುಮಾರ್ ಗೌಡ ಜತೆಗಿದ್ದರು. ಆಮಂತ್ರಣ ಸ್ವೀಕರಿಸಿದ ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರು ಪುತ್ತಿಗೆ ಶ್ರೀಗಳ ಕಾರ್ಯವೈಖರಿ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿ,ಪರ್ಯಾಯಕ್ಕೆ ಸಂಪೂರ್ಣ ಸಹಕಾರ ನೀಡುವ ಭರವಸೆ ನೀಡಿ ಸ್ವಾಗತ ಸಮಿತಿಯ ನಿಯೋಗಕ್ಕೆ ಬೆಂಗಳೂರಿಗೆ ಬರುವಂತೆ ಆಮಂತ್ರಿಸಿದರು.