ದ.ಕ. ಜಿಲ್ಲೆಯ ಮೂವರಿಗೆ ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ರಾಷ್ಟ್ರೀಯ ಪ್ರಶಸ್ತಿ...ಪ್ರಧಾನ ಮಂತ್ರಿ ಯೋಜನೆಗಳಿಗೆ ಮರುನಾಮಕರಣ ಮಾಡದಂತೆ ರಾಜ್ಯಗಳಿಗೆ ಕೇಂದ್ರ ಸರಕಾರದ ಆಗ್ರಹ...VHP ಕಾರ್ಯಕ್ರಮದಲ್ಲಿ ವಿವಾದಾತ್ಮಕ ಹೇಳಿಕೆ: ಸುಪ್ರೀಂಕೋರ್ಟ್ ಕೊಲಿಜಿಯಂ ಮುಂದೆ ನ್ಯಾ. ಶೇಖರ್ ಯಾದವ್ ಹಾಜರಾಗುವ ಸಾಧ್ಯತೆ

ಕೇರಳದಲ್ಲಿ ಸರಣಿ ಸ್ಫೋಟ: NIA ತನಿಖೆ ಆರಂಭ; ಎರಡು ಬಾಕ್ಸ್‌ಗಳಲ್ಲಿ ಎರಡು IED ಮುಚ್ಚಿಡಲಾಗಿತ್ತು

ಕೊಚ್ಚಿ: ಕೇರಳದ ಕೊಚ್ಚಿಯ ಕಲಮಸ್ಸೆರಿಯ ಕನ್ವೆನ್ಷನ್ ಸೆಂಟರ್‌ನಲ್ಲಿ ಭಾನುವಾರ ಆಯೋಜಿಸಿದ್ದ ಪ್ರಾರ್ಥನಾ ಸಭೆಯಲ್ಲಿ ಸಂಭವಿಸಿದ ಸರಣಿ ಸ್ಫೋಟಕ್ಕೆ ಸಂಬಂಧಿಸಿದಂತೆ ರಾಷ್ಟ್ರೀಯ ತನಿಖಾ ಸಂಸ್ಥೆ(ಎನ್‌ಐಎ) ಅಧಿಕಾರಿಗಳು ತನಿಖೆ ಆರಂಭಿಸಿದ್ದು, ಎರಡು ಬಾಕ್ಸ್‌ಗಳಲ್ಲಿ ಅಥವಾ ಬ್ಯಾಗ್‌ಗಳಲ್ಲಿ ಮುಚ್ಚಿಟ್ಟಿದ್ದ ಎರಡು ಐಇಡಿಗಳು ಸ್ಫೋಟಗೊಂಡಿವೆ ಎಂದು ತಿಳಿದುಬಂದಿದೆ.

ಸ್ಫೋಟದಲ್ಲಿ ಒಬ್ಬ ವ್ಯಕ್ತಿ ಸಾವನ್ನಪ್ಪಿದ್ದು, ಕನಿಷ್ಠ ಐವರು ಗಂಭೀರವಾಗಿ ಗಾಯಗೊಂಡಿದ್ದಾರೆ. ಪ್ರಾರ್ಥನಾ ಸಭೆಯಲ್ಲಿ ಸುಮಾರು 2,200-2,500 ಜನ ಭಾಗವಹಿಸಿದ್ದರು ಎನ್ನಲಾಗಿದೆ.

ಕೃತ್ಯದಲ್ಲಿ ಭಾಗಿಯಾಗಿರುವ ದುಷ್ಕರ್ಮಿಗಳ ಬಗ್ಗೆ ಮಾಹಿತಿ ಪಡೆಯಲು ಪೊಲೀಸರು ಮತ್ತು ಎನ್ಐಎ ಅಧಿಕಾರಿಗಳು ಜಮ್ರಾ ಇಂಟರ್ನ್ಯಾಷನಲ್ ಕನ್ವೆನ್ಷನ್ ಸೆಂಟರ್ ಪ್ರದೇಶದಲ್ಲಿನ ಸಿಸಿಟಿವಿ ಕ್ಯಾಮೆರಾಗಳನ್ನು ಪರಿಶೀಲಿಸುತ್ತಿದ್ದಾರೆ.

ಎನ್‌ಐಎ ಕೊಚ್ಚಿ ಘಟಕ, ಕೇರಳ ಪೊಲೀಸರ ಸಮನ್ವಯದೊಂದಿಗೆ ತನಿಖೆ ಆರಂಭಿಸಿದೆ ಎಂದು ಮೂಲಗಳು ತಿಳಿಸಿದ್ದು, ಎರಡು ಐಇಡಿಗಳನ್ನು ಎರಡು ಚೀಲಗಳಲ್ಲಿ ಅಥವಾ ಪೆಟ್ಟಿಗೆಗಳಲ್ಲಿ ಮುಚ್ಚಿಡಲಾಗಿತ್ತು ಎಂದು ಪ್ರಾಥಮಿಕ ತನಿಖೆಯಿಂದ ತಿಳಿದು ಬಂದಿದೆ.

ಸ್ಫೋಟಕಗಳನ್ನು ತಂದವರು ಯಾರು ಹಾಗೂ ಯಾರೆಲ್ಲ ಈ ಕೃತ್ಯದಲ್ಲಿ ಭಾಗಿಯಾಗಿರಬಹುದು ಎಂಬ ಬಗ್ಗೆ ತನಿಖೆಗೆ ಸುಳಿವು ಸಿಗುವ ಆಶಯದೊಂದಿಗೆ ಪೊಲೀಸರು ಸಿಸಿಟಿವಿ ಕ್ಯಾಮೆರಾಗಳನ್ನು ಪರಿಶೀಲಿಸುತ್ತಿದ್ದಾರೆ.

ಸರಣಿ ಸ್ಫೋಟದ ಬಗ್ಗೆ ಮೊದಲು ಕಲಮಸ್ಸೆರಿಯ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಿಸಿ, ನಂತರ ತನಿಖೆಯನ್ನು ಎನ್‌ಐಎಗೆ ಹಸ್ತಾಂತರಿಸಲಾಗುತ್ತಿದೆ.

No Comments

Leave A Comment