ದ.ಕ. ಜಿಲ್ಲೆಯ ಮೂವರಿಗೆ ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ರಾಷ್ಟ್ರೀಯ ಪ್ರಶಸ್ತಿ...ಪ್ರಧಾನ ಮಂತ್ರಿ ಯೋಜನೆಗಳಿಗೆ ಮರುನಾಮಕರಣ ಮಾಡದಂತೆ ರಾಜ್ಯಗಳಿಗೆ ಕೇಂದ್ರ ಸರಕಾರದ ಆಗ್ರಹ...VHP ಕಾರ್ಯಕ್ರಮದಲ್ಲಿ ವಿವಾದಾತ್ಮಕ ಹೇಳಿಕೆ: ಸುಪ್ರೀಂಕೋರ್ಟ್ ಕೊಲಿಜಿಯಂ ಮುಂದೆ ನ್ಯಾ. ಶೇಖರ್ ಯಾದವ್ ಹಾಜರಾಗುವ ಸಾಧ್ಯತೆ
ಬೆಂಗಳೂರಿನಲ್ಲಿ ಮತ್ತೊಂದು ಅಗ್ನಿ ಅವಘಡ: ವರ್ಕ್ ಶಾಪ್ ನಲ್ಲಿ ಬೆಂಕಿ; ಹೊತ್ತಿ ಉರಿದ ಖಾಸಗಿ ಬಸ್ಗಳು!
ಬೆಂಗಳೂರು: ನಗರದ ವೀರಭದ್ರ ನಗರದಲ್ಲಿ ಬೆಂಕಿ ಅನಾಹುತ ಉಂಟಾಗಿದ್ದು, ಹಲವು ಖಾಸಗಿ ಬಸ್ ಗಳು ಬೆಂಕಿಗಾಹುತಿಯಾಗಿರುವ ಬಗ್ಗೆ ವರದಿಯಾಗಿದೆ. ವೀರಭದ್ರನಗರದ ಬಸ್ ಗಳ ಬಾಡಿ ಬಿಲ್ಡಿಂಗ್ ಮತ್ತು ವೆಲ್ಡಿಂಗ್ ಮಾಡುವ ವರ್ಕ್ ಶಾಪ್ ನಲ್ಲಿ ಬೆಂಕಿ ಕಾಣಿಸಿಕೊಂಡಿದೆ.
ಈ ಬೆಂಕಿ ವರ್ಕ್ಶಾಪ್ ನಲ್ಲಿರೋ ಇತರೆ ವಾಹನಗಳಿಗೆ ಬೆಂಕಿ ವ್ಯಾಪಿಸುತ್ತಿದೆ. ಸ್ಥಳಕ್ಕೆ ಅಗ್ನಿಶಾಮಕ ದಳದ ಸಿಬ್ಬಂದಿ ಧಾವಿಸಿದ್ದು, ಬೆಂಕಿ ನಂದಿಸುವ ಕಾರ್ಯಾಚರಣೆ ನಡೆಯುತ್ತಿದೆ. ಯಾವುದೇ ಪ್ರಾಣ ಹಾನಿ ನಡೆದಿರುವ ಬಗ್ಗೆ ವರದಿಯಾಗಿಲ್ಲ.
ಖಾಸಗಿ ಬಸ್ಗಳನ್ನು ನಿಲ್ಲಿಸಿದ್ದ ಜಾಗ ಇದಾಗಿತ್ತು. ನೋಡ ನೋಡುತ್ತಲೇ ಒಂದರ ನಂತರ ಮತ್ತೊಂದು ಬಸ್ಗೆ ಬೆಂಕಿ ಹೊತ್ತಿಕೊಂಡಿದೆ. ಒಳಗೆ 10 ಬಸ್ ಗಳನ್ನು ನಿಲ್ಲಿಸಲಾಗಿದೆ. ಇವು ಬೇರೆ ಬೇರೆ ಸಂಸ್ಥೆಗಳಿಗೆ ಸೇರಿರುವ ಬಸ್ ಗಳಾಗಿವೆ.
ಈ ಪೈಕಿ ಸದ್ಯ ಆರು ಬಸ್ ಗಳಿಗೆ ಬೆಂಕಿ ತಗುಲಿದೆ. ಬೆಂಕಿಯ ತೀವ್ರತೆ ಹೆಚ್ಚಾಗುತ್ತಿದ್ದು, ಸ್ಥಳದಲ್ಲಿ ಆತಂಕದ ವಾತಾವರಣ ನಿರ್ಮಾಣವಾಗಿದೆ. ವರ್ಕ್ಶಾಪ್ ನಿಂದ ಜನರನ್ನು ದೂರ ಕಳುಹಿಸಲಾಗುತ್ತಿದೆ.