ಉಡುಪಿಯಲ್ಲಿ ಎನ್ ಕೌಂಟರ್: ಮೋಸ್ಟ್ ವಾಂಟೆಡ್ ನಕ್ಸಲ್ ನಾಯಕ ವಿಕ್ರಮ್ ಗೌಡ ಸಾವು....ಮಹಾ ಚುನಾವಣೆ: ಮತದಾರರು ಬೂತ್‌ಗಳಿಗೆ ತೆರಳಲು QR ಕೋಡ್ ಪರಿಚಯ...ನವೆಂಬರ್ 25ರಿಂದ ಸಂಸತ್ ಚಳಿಗಾಲದ ಅಧಿವೇಶನ: ಭಾನುವಾರ ಸರ್ವಪಕ್ಷ ಸಭೆ...
ಕರ್ನಾಟಕಕ್ಕೆ ಮತ್ತೆ ಸಂಕಷ್ಟ: ತಮಿಳುನಾಡಿಗೆ ನಿತ್ಯ 2,600 ಕ್ಯೂಸೆಕ್ ಕಾವೇರಿ ನೀರು ಹರಿಸುವಂತೆ CWRC ಸೂಚನೆ
ನವದೆಹಲಿ: ಕಾವೇರಿ ನೀರು ನಿಯಂತ್ರಣ ಸಮಿತಿ (CWRC) ಮತ್ತೆ ತಮಿಳುನಾಡಿಗೆ ನಿತ್ಯ 2,600 ಕ್ಯೂಸೆಕ್ ಕಾವೇರಿ ನೀರು ಹರಿಸುವಂತೆ ಕರ್ನಾಟಕಕ್ಕೆ ಇಂದು ಸೂಚನೆ ನೀಡಿದೆ.
ಇಂದು ದೆಹಲಿಯಲ್ಲಿ ನಡೆದ ಕಾವೇರಿ ನೀರು ನಿಯಂತ್ರಣ ಸಮಿತಿಯ ಸಭೆಯಲ್ಲಿ ಈ ಸೂಚನೆ ನೀಡಲಾಗಿದೆ. ಮುಂದಿನ 15 ದಿನಗಳ ಕಾಲ 2,600 ಕ್ಯೂಸೆಕ್ ನೀರು ಹರಿಸುವಂತೆ ಸೂಚನೆ ನೀಡಿದೆ.
ಎಸಿಎಸ್ ರಾಕೇಶ್ ಸಿಂಗ್ ಅವರು ಕಾವೇರಿ ನೀರು ನಿಯಂತ್ರಣ ಸಮಿತಿ ಸಭೆಯಲ್ಲಿ ಕರ್ನಾಟಕದ ಪರ ಭಾಗವಹಿಸಿ ವಾದ ಮಂಡಿಸಿದರು. ಆದರೆ ಸಮಿತಿ ಮುಂದಿನ 15 ದಿನಗಳ ಕಾಲ ನೀರು ಹರಿಸುವಂತೆ ಆದೇಶಿಸಿದೆ.
ರಾಜ್ಯ ಸರ್ಕಾರ ತಮಿಳುನಾಡಿಗೆ ಕಾವೇರಿ ನೀರು ಹರಿಸುತ್ತಿರುವುದನ್ನು ವಿರೋಧಿಸಿ ಕಾವೇರಿ ಜಲಾನಯನ ಪ್ರದೇಶಗಳಾದ ಮೈಸೂರು, ಮಂಡ್ಯ ಮತ್ತಿತರ ಕಡೆಗಳಲ್ಲಿ ರೈತರು ಹಾಗೂ ವಿವಿಧ ಸಂಘಟನೆಗಳು ಪ್ರತಿಭಟನೆ, ಧರಣಿ ನಡೆಸುತ್ತಿವೆ. ಆದರೂ ತಮಿಳುನಾಡಿಗೆ ನೀರು ಹರಿಯುವುದು ನಿಂತಿಲ್ಲ.