Log In
BREAKING NEWS >
````````````ನಾಡಿನ ಸಮಸ್ತ ಜನತೆಗೆ,ನಮ್ಮ ಎಲ್ಲಾ ಜಾಹೀರಾತುದಾರರಿಗೆ,ಅಭಿಮಾನಿಗಳಿಗೆ ಹಾಗೂ ಓದುಗರಿಗೆ ಶ್ರೀ ಗೌರಿ-ಗಣೇಶನ ಹಬ್ಬದ ಶುಭಾಶಯಗಳು```````

ಕರಾವಳಿಯ ಹಲವು ಕಡೆ ಐಟಿ ದಾಳಿ; ಬೆಳ್ಳಂಬೆಳಗ್ಗೆ ಚಿನ್ನದಂಗಡಿ ಮಾಲೀಕರಿಗೆ ಶಾಕ್‌

ಬೆಂಗಳೂರು: ಬೆಳ್ಳಂಬೆಳಗ್ಗೆ ಚಿನ್ನದಂಗಡಿ ಮಾಲೀಕರಿಗೆ ಶಾಕ್‌ ನೀಡಿದ ಆದಾಯ ತೆರಿಗೆ ಅಧಿಕಾರಿಗಳು, ಕರಾವಳಿ ಜಿಲ್ಲೆಗಳಾದ ದಕ್ಷಿಣ ಕನ್ನಡ ಮತ್ತು ಉಡುಪಿಯಲ್ಲಿ ಮಂಗಳವಾರ ಏಕಕಾಲದಲ್ಲಿ ಹಲವು ಜ್ಯುವೆಲರ್‌ಗಳ ಮೇಲ ದಾಳಿ ನಡೆಸಿದ್ದಾರೆ.

ಉಡುಪಿ ನಗರ, ಕಾರ್ಕಳ, ಕುಂದಾಪುರ, ಪಡುಬಿದ್ರಿ, ಬ್ರಹ್ಮಾವರ, ಪುತ್ತೂರು ಮತ್ತಿತರ ಕಡೆಗಳಲ್ಲಿ ಐಟಿ ದಾಳಿ ನಡೆದಿದೆ ಎಂದು ಮೂಲಗಳು ತಿಳಿಸಿವೆ.

ಕರಾವಳಿ ಕರ್ನಾಟಕದ ಜಿಲ್ಲೆಗಳಲ್ಲಿ ಹಲವು ಶಾಖೆಗಳನ್ನು ಹೊಂದಿರುವ ಪ್ರತಿಷ್ಠಿತ ಚಿನ್ನಾಭರಣ ಅಂಗಡಿಗಳ ಮೇಲೆ ಐಟಿ ಅಧಿಕಾರಿಗಳು ದಾಳಿ ನಡೆಸಿದ್ದಾರೆ.

ಮಂಗಳೂರಿನ ಕದ್ರಿಯ ಆಭರಣ ಜ್ಯುವೆಲ್ಲರಿ ಮೇಲೆ ಐಟಿ ದಾಳಿ ನಡೆದಿದೆ. ಮಂಗಳೂರಿನ ಕದ್ರಿ ಬಳಿಯ ಶಿವಭಾಗ್ ನಲ್ಲಿರುವ ಆಭರಣ ಜ್ಯುವೆಲ್ಲರಿ ಮಳಿಗೆಯಲ್ಲಿ ಬೆಳಿಗ್ಗಿನಿಂದಲೂ ಐಟಿ ತಪಾಸಣೆ ನಡೆಯುತ್ತಿದೆ.

ಬೆಳಗ್ಗೆ ಏಕಕಾಲಕ್ಕೆ ದಾಳಿ ನಡೆಸಲಾಗಿದ್ದು, ಅಧಿಕಾರಿಗಳು ಬಿಲ್ಲಿಂಗ್ ವಿವರ, ಚಿನ್ನ ಖರೀದಿಯ ಬೇರೆ ಬೇರೆ ದಾಖಲೆಗಳನ್ನು ವಶಕ್ಕೆ ಪಡೆದು ಪರಿಶೀಲಿಸುತ್ತಿದ್ದಾರೆ.

No Comments

Leave A Comment