ಉಡುಪಿ ಶ್ರೀಲಕ್ಷ್ಮೀವೆ೦ಕಟೇಶ ದೇವಸ್ಥಾನದಲ್ಲಿ ನವೆ೦ಬರ್ 13ರ೦ದು ವಿಶ್ವರೂಪದರ್ಶನ ಕಾರ್ಯಕ್ರಮವು ಬೆಳಿಗ್ಗೆ 5ಗ೦ಟೆಗೆ ಜರಗಿತು.ನವೆ೦ಬರ್ 18ಹಾಗೂ 19ರ೦ದು ಲಕ್ಷ ದೀಪೋತ್ಸವವು ಜರಗಲಿದೆ.
ಮರಾಠ ಮೀಸಲಾತಿ ಹೋರಾಟ: ಬೀಡ್ ಜಿಲ್ಲೆಯಲ್ಲಿ ಪರಿಸ್ಥಿತಿ ನಿಯಂತ್ರಣಕ್ಕೆ, 49 ಮಂದಿ ಬಂಧನ
ಛತ್ರಪತಿ ಸಂಭಾಜಿನಗರ: ಮರಾಠ ಸಮುದಾಯಕ್ಕೆ ಮೀಸಲಾತಿ ನೀಡುವಂತೆ ಆಗ್ರಹಿಸಿ ನಡೆಯುತ್ತಿರುವ ಹೋರಾಟ ಹಿಂಸಾಚಾರಕ್ಕೆ ತಿರುಗಿದ್ದು, ಈ ಸಂಬಂಧ ಬೀಡ್ ಜಿಲ್ಲೆಯಲ್ಲಿ ಪೊಲೀಸರು 49 ಜನರನ್ನು ಬಂಧಿಸಿದ್ದಾರೆ ಎಂದು ಅಧಿಕಾರಿಯೊಬ್ಬರು ಮಂಗಳವಾರ ತಿಳಿಸಿದ್ದಾರೆ.
ರಾಜಕಾರಣಿಗಳ ಆಸ್ತಿಗಳನ್ನು ಗುರಿಯಾಗಿಸಿಕೊಂಡು ನಡೆದ ಹಿಂಸಾಚಾರ ಮತ್ತು ಬೆಂಕಿ ಹಚ್ಚಿದ ಸರಣಿ ಘಟನೆಗಳ ನಂತರ ಸೋಮವಾರ ಸಂಜೆ ಬೀಡ್ ಜಿಲ್ಲೆಯ ಕೆಲವು ಭಾಗಗಳಲ್ಲಿ ಕರ್ಫ್ಯೂ ವಿಧಿಸಲಾಗಿದೆ. ಅಲ್ಲದೆ, ಇಂಟರ್ನೆಟ್ ಸೇವೆಯನ್ನು ಸ್ಥಗಿತಗೊಳಿಸಲಾಗಿದೆ.
ಸದ್ಯ ಪರಿಸ್ಥಿತಿ ನಿಯಂತ್ರಣದಲ್ಲಿದೆ ಎಂದು ಬೀಡ್ ಪೊಲೀಸ್ ವರಿಷ್ಠಾಧಿಕಾರಿ ನಂದಕುಮಾರ್ ಠಾಕೂರ್ ಸುದ್ದಿಸಂಸ್ಥೆ ಪಿಟಿಐಗೆ ತಿಳಿಸಿದ್ದಾರೆ.
‘ಆರೋಪಿಗಳ ವಿರುದ್ಧ ಗಲಭೆ ಮತ್ತು ಜೀವಕ್ಕೆ ಅಪಾಯವನ್ನುಂಟುಮಾಡುವ ಅಪರಾಧಗಳ ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ. ಇದುವರೆಗೆ 49 ಮಂದಿಯನ್ನು ಬಂಧಿಸಲಾಗಿದೆ. ರಾತ್ರಿ ಯಾವುದೇ ಅಹಿತಕರ ಘಟನೆ ನಡೆದಿಲ್ಲ ಮತ್ತು ಪರಿಸ್ಥಿತಿ ನಿಯಂತ್ರಣದಲ್ಲಿದೆ’ ಎಂದು ಅವರು ಹೇಳಿದರು.
ಜಿಲ್ಲೆಯಲ್ಲಿ ಕಾನೂನು ಸುವ್ಯವಸ್ಥೆಯನ್ನು ಕಾಪಾಡಲು ಹೆಚ್ಚುವರಿ ಪೊಲೀಸ್ ಪಡೆಯನ್ನು ನಿಯೋಜಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಬೀಡ್ ಜಿಲ್ಲಾಧಿಕಾರಿ ದೀಪಾ ಮುಧೋಳ ಮುಂಡೆ ಅವರು ಹೊರಡಿಸಿರುವ ಆದೇಶದಂತೆ, ಜಿಲ್ಲೆಯಾದ್ಯಂತ ಹಾದು ಹೋಗುವ ಎಲ್ಲಾ ರಾಷ್ಟ್ರೀಯ ಹೆದ್ದಾರಿಗಳ ಜೊತೆಗೆ ಜಿಲ್ಲಾಧಿಕಾರಿ ಕಚೇರಿ, ತಾಲೂಕು ಕೇಂದ್ರ ಕಚೇರಿಗಳಿಂದ 5 ಕಿಲೋಮೀಟರ್ ವ್ಯಾಪ್ತಿಯಲ್ಲಿ ಕರ್ಫ್ಯೂ ಜಾರಿಗೊಳಿಸಲಾಗಿದೆ ಎಂದು ಮತ್ತೊಬ್ಬ ಅಧಿಕಾರಿ ತಿಳಿಸಿದ್ದಾರೆ.
ಸೋಮವಾರ ಬೆಳಗ್ಗೆ ಬೀಡ್ ಜಿಲ್ಲೆಯ ಮಜಲಗಾಂವ್ ಪಟ್ಟಣದಲ್ಲಿರುವ ಎನ್‌ಸಿಪಿ (ಅಜಿತ್ ಪವಾರ್ ಗುಂಪು) ಶಾಸಕ ಪ್ರಕಾಶ್ ಸೋಲಂಕೆ ಅವರ ನಿವಾಸಕ್ಕೆ ಬೆಂಕಿ ಹಚ್ಚಲಾಯಿತು ಮತ್ತು ಪ್ರತಿಭಟನಾಕಾರರ ಗುಂಪೊಂದು ಮನೆ ಮೇಲೆ ಕಲ್ಲು ತೂರಾಟ ನಡೆಸಿತು ಎಂದು ಪೊಲೀಸರು ಮೊದಲು ತಿಳಿಸಿದ್ದಾರೆ.
ಮರಾಠ ಮೀಸಲಾತಿ ಹೋರಾಟದ ಕುರಿತು ಮತ್ತು ಮೀಸಲು ಹೋರಾಟದ ಕಾರ್ಯಕರ್ತ ಮನೋಜ್ ಜಾರಂಜ್ ಅವರ ಬಗ್ಗೆ ಮಾಡಿದ್ದ ಕಾಮೆಂಟ್ ಮಾಡಿದ ಶಾಸಕರ ಆಡಿಯೋ ಕ್ಲಿಪ್ ವೈರಲ್ ಆದ ನಂತರ, ಸೋಲಂಕೆ ಅವರ ನಿವಾಸದ ಮುಂದೆ ನಿಲ್ಲಿಸಿದ್ದ ಕಾರನ್ನು ಗುಂಪು ಸುಟ್ಟು ಹಾಕಿತು.