Log In
BREAKING NEWS >
``````````````ನಾಡಿನ ಸಮಸ್ತ ಜನತೆಗೆ,ನಮ್ಮ ಎಲ್ಲಾ ಜಾಹೀರಾತುದಾರರಿಗೆ,ಓದುಗರಿಗೆ ,ಅಭಿಮಾನಿಗಳಿಗೆ "ಶ್ರೀಅನ೦ತವೃತದ"ಶುಭಾಶಯಗಳು......

ಹಿರಿಯಪತ್ರಕರ್ತ, ಸಾಹಿತಿ ಶೇಖರ ಅಜೆಕಾರು ಇನ್ನಿಲ್ಲ

ಮೂಡುಬಿದಿರೆ : ಅ.31.ಹಿರಿಯ ಪತ್ರಕರ್ತ, ಸಾಹಿತಿ, ಸಂಘಟಕ ಶೇಖರ ಅಜೆಕಾರು (54) ಅವರು ಹೃದಯಾಘಾತದಿಂದ ಮಂಗಳವಾರ ಬೆಳಿಗ್ಗೆ ನಿಧನರಾಗಿದ್ದಾರೆ.

ಕಾರ್ಕಳ ತಾಲೂಕಿನ ಅಜೆಕಾರು ಗ್ರಾಮದ ನಿವಾಸಿಯಾಗಿರುವ ಶೇಖರ ಅಜೆಕಾರು ಅವರು ಮಕ್ಕಳ ಸಾಹಿತ್ಯದ ಕುರಿತು ಹೆಚ್ಚು ಆಸಕ್ತಿ ವಹಿಸಿ ಮಕ್ಕಳ ಸಾಹಿತ್ಯ ಸಮ್ಮೇಳನ ಹಮ್ಮಿಕೊಳ್ಳುತ್ತಿದ್ದರು. ಅಲ್ಲದೆ ಗ್ರಾಮೋತ್ಸವದ ಮೂಲಕ ವಿವಿಧ ಕ್ಷೇತ್ರದಲ್ಲಿ ಸಾಧನೆ ಮಾಡಿರುವ ಸಾಧಕರನ್ನು ಗುರುತಿಸುವ ಮೂಲಕ ಸಾಹಿತ್ಯ ಕ್ಷೇತ್ರಕ್ಕೆ ವಿಶೇಷ ಕೊಡುಗೆ ನೀಡಿದ್ದರು.

ಶೇಖರ್ ಅವರು ಕುಂದಪ್ರಭ ವಾರಪತ್ರಿಕೆಯಲ್ಲಿ ಬರಹಗಾರರಾಗಿ ತಮ್ಮ ಪ್ರಯಾಣ ಪ್ರಾರಂಭಿಸಿದರು. ಮುಂಬೈನ ‘ಕರ್ನಾಟಕ ಮಲ್ಲ, ಜನವಾಹಿನಿ, ಡೈಜಿವರ್ಲ್ಡ್, ಕನ್ನಡಪ್ರಭ ಮತ್ತು ಉಷಾ ಕಿರಣಗಳಲ್ಲೂ ಸೇವೆ ಸಲ್ಲಿಸಿದ್ದಾರೆ.

10 ವರ್ಷಗಳ ಕಾಲ ಪತ್ರಕರ್ತರ ವೇದಿಕೆ ಬೆಂಗಳೂರಿನ ಉಡುಪಿ ಶಾಖೆಯ ಉಪಾಧ್ಯಕ್ಷರೂ ಆಗಿದ್ದರು. ಇವರು ಪತ್ನಿ, ಓರ್ವ ಪುತ್ರ ಮತ್ತು ಪುತ್ರಿಯನ್ನು ಅಗಲಿದ್ದಾರೆ.

ಇವರ ನಿಧನಕ್ಕೆ ಕರಾವಳಿಕಿರಣ ಡಾಟ್ ಕಾ೦ ಬಳಗವು ತೀವ್ರ ಸ೦ತಾಪವನ್ನು ಸೂಚಿಸಿದೆ.

No Comments

Leave A Comment