ದ.ಕ. ಜಿಲ್ಲೆಯ ಮೂವರಿಗೆ ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ರಾಷ್ಟ್ರೀಯ ಪ್ರಶಸ್ತಿ...ಪ್ರಧಾನ ಮಂತ್ರಿ ಯೋಜನೆಗಳಿಗೆ ಮರುನಾಮಕರಣ ಮಾಡದಂತೆ ರಾಜ್ಯಗಳಿಗೆ ಕೇಂದ್ರ ಸರಕಾರದ ಆಗ್ರಹ...VHP ಕಾರ್ಯಕ್ರಮದಲ್ಲಿ ವಿವಾದಾತ್ಮಕ ಹೇಳಿಕೆ: ಸುಪ್ರೀಂಕೋರ್ಟ್ ಕೊಲಿಜಿಯಂ ಮುಂದೆ ನ್ಯಾ. ಶೇಖರ್ ಯಾದವ್ ಹಾಜರಾಗುವ ಸಾಧ್ಯತೆ

ಗಣಪತಿ ಸಚ್ಚಿದಾನಂದ ಸ್ವಾಮೀಜಿಗೆ ರಾಜ್ಯಪಾಲರಿಂದ ಗೌರವ ಡಾಕ್ಟರೇಟ್ ಪ್ರದಾನ

ಬೆಂಗಳೂರು: ಕರ್ನಾಟಕ ರಾಜ್ಯ ಡಾ.ಗಂಗೂಬಾಯಿ ಹಾನಗಲ್ ಸಂಗೀತ ಮತ್ತು ಪ್ರದರ್ಶಕ ಕಲೆಗಳ ವಿಶ್ವವಿದ್ಯಾಲಯದ 6ನೇ ಘಟಿಕೋತ್ಸವದ ಅಂಗವಾಗಿ ಗಣಪತಿ ಸಚ್ಚಿದಾನಂದ ಸ್ವಾಮೀಜಿ ಅವರಿಗೆ ಗೌರವ ಡಾಕ್ಟರೇಟ್ ಪ್ರದಾನ ಮಾಡಲಾಯಿತು. ರಾಜಭವನದಲ್ಲಿ ನಡೆದ ಸರಳ ಸಮಾರಂಭದಲ್ಲಿ ರಾಜ್ಯಪಾಲ  ಥಾವರ್ ಚಂದ್ ಗೆಹ್ಲೋಟ್ ಗೌರವ ಡಾಕ್ಟರೇಟ್ ಪದವಿ ಪ್ರದಾನ ಮಾಡಿದರು.

ನಂತರ ಕಾರ್ಯಕ್ರಮವನ್ನ ಉದ್ದೇಶಿಸಿ ಮಾತನಾಡಿದ ರಾಜ್ಯಪಾಲರು, ಭಾರತೀಯ ಸಂಸ್ಕೃತಿಯು ಜ್ಞಾನ, ವಿಜ್ಞಾನ, ಕಲೆ ಮತ್ತು ಸಂಗೀತದ ಅಮೂಲ್ಯ ಪರಂಪರೆಯನ್ನು ಒಳಗೊಂಡಿದೆ. ಹೆಸರಾಂತ ಶಾಸ್ತ್ರೀಯ ಸಂಗೀತ ಗಾಯಕಿ, ಗೌರವಾನ್ವಿತ ಗಂಗೂಬಾಯಿ ಹಾನಗಲ್ ಅವರ ಹೆಸರಿನಲ್ಲಿ ಸ್ಥಾಪಿಸಲಾದ ಈ ವಿಶ್ವವಿದ್ಯಾಲಯವು ಸಂಸ್ಕೃತಿ, ಕಲೆ ಮತ್ತು ಸಂಗೀತದ ಅಮೂಲ್ಯ ಪರಂಪರೆಯನ್ನು ಮುನ್ನಡೆಸುವಲ್ಲಿ ಶ್ಲಾಘನೀಯ ಕೆಲಸ ಮಾಡುತ್ತಿದೆ ಎಂದರು.

ಕರ್ನಾಟಕ ರಾಜ್ಯ ಡಾ.ಗಂಗೂಬಾಯಿ ಹಾನಗಲ್ ಸಂಗೀತ ಮತ್ತು ಪ್ರದರ್ಶಕ ಕಲೆಗಳ ವಿಶ್ವವಿದ್ಯಾಲಯ ಶಿಕ್ಷಣ, ಕಲೆ, ಸಂಗೀತ ಮತ್ತು ಸಾಹಿತ್ಯ ಮತ್ತು ಸಾಮಾಜಿಕ ಕ್ಷೇತ್ರಗಳಲ್ಲಿ ಅತ್ಯುತ್ತಮ ಕೆಲಸ ಮಾಡಿದ ಮಹನೀಯರಿಗೆ ಗೌರವ ಡಾಕ್ಟರೇಟ್ ಪದವಿ ನೀಡಿ ಗೌರವಿಸಿದೆ. ಅದರಂತೆ ಈ ದಿನ ಸಂಗೀತ ಕ್ಷೇತ್ರದಲ್ಲಿ ಸಾಧನೆ ಮಾಡಿರುವ  ಸಚ್ಚಿದಾನಂದ ಸ್ವಾಮೀಜಿ ಅವರಿಗೆ ಗೌರವ ಡಾಕ್ಟರೇಟ್ ಪ್ರದಾನ ಮಾಡಿರುವುದು ಧನ್ಯತಾ ಭಾವವನ್ನು ತುಂಬಿದೆ ಎಂದರು.

ಸ್ವಾಮೀಜಿಯವರು ತಮ್ಮ ಚಿಕಿತ್ಸಕ ಮತ್ತು ಧ್ಯಾನ ಸಂಗೀತದ ಜೊತೆಗೆ ಪ್ರಾಚೀನ ವೈದಿಕ ಸಂಪ್ರದಾಯಗಳನ್ನು ಉತ್ತೇಜಿಸುವ ದಿವ್ಯ ಕೆಲಸವನ್ನು ಮಾಡುತ್ತಿದ್ದಾರೆ. ದತ್ತಪೀಠವು ಇಂದು ವೇದಗಳ ಅಧ್ಯಯನದ ಪ್ರಮುಖ ಕೇಂದ್ರವಾಗಿದೆ. ಇಷ್ಟೇ ಅಲ್ಲ, ನಮ್ಮ ಪೂರ್ವಜರು ನಮಗೆ ನೀಡಿದ ಹಾಡು, ಸಂಗೀತ, ಕಂಠದ ಶಕ್ತಿಯನ್ನು ಜನರ ಆರೋಗ್ಯಕ್ಕೆ ಹೇಗೆ ಬಳಸಿಕೊಳ್ಳಬೇಕು ಎಂಬ ಬಗ್ಗೆ ಸ್ವಾಮೀಜಿಯವರ ಮಾರ್ಗದರ್ಶನದಲ್ಲಿ ಪರಿಣಾಮಕಾರಿ ಆವಿಷ್ಕಾರಗಳನ್ನು ಮಾಡಲಾಗುತ್ತಿದೆ ಎಂದು ಮಾಹಿತಿ ನೀಡಿದರು.

ಕಾರ್ಯಕ್ರಮದಲ್ಲಿ ಕುಲಪತಿ, ಪ್ರಾಧ್ಯಾಪಕ ನಾಗೇಶ್ ವಿ.ಬೆಟ್ಟಕೋಟೆ ಮತ್ತಿತರ ಗಣ್ಯರು ಉಪಸ್ಥಿತರಿದ್ದರು.

No Comments

Leave A Comment