Log In
BREAKING NEWS >
ಉಡುಪಿ ಜಿಲ್ಲೆಯ ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿಯಾಗಿ ಪರಮೇಶ್ವರ್ ಅನಂತ್ ಹೆಗ್ಡೆ ನೇಮಕ...

ಮೂಡಬಿದಿರೆ : ಡಾ. ಮೋಹನ್ ಆಳ್ವರಿಗೆ ಪಿತೃವಿಯೋಗ- ಮಿಜಾರುಗುತ್ತು ಆನಂದ ಆಳ್ವ ನಿಧನ

ಮೂಡಬಿದಿರೆ:ಅ.31. ಮೂಡಬಿದಿರೆ ಆಳ್ವಾಸ್ ಶಿಕ್ಷಣ ಸಂಸ್ಥೆಯ ಆಧ್ಯಕ್ಷ ಡಾ. ಮೋಹನ್ ಆಳ್ವರ ತಂದೆ ಮಿಜಾರುಗುತ್ತು ಆನಂದ ಆಳ್ವ ಇಂದು ಮ೦ಗಳವಾರದ೦ದು ನಿಧನ ಹೊಂದಿದ್ದಾರೆ.

106 ವರ್ಷ ಪ್ರಾಯದ ಆನಂದ ಆಳ್ವ ಇಳಿ ವಯಸ್ಸಿನಲ್ಲೂ ಅತ್ಯಂತ ಕ್ರಿಯಾಶೀಲರಾಗಿ ಗುರುತಿಸಿಕೊಂಡಿದ್ದರು. ಕೆಲ ದಿನಗಳಿಂದ ವಯೋಸಹಜ ಅನಾರೋಗ್ಯದಿಂದ ಬಳಲುತ್ತಿದ್ದ ಅವರು ಆಳ್ವಾಸ್ ಆಸ್ಪತ್ರೆಯಲ್ಲಿ ಚಿಕಿತ್ಸೆಗಾಗಿ ದಾಖಲಾಗಿದ್ದರು. ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟಿದ್ದಾರೆ.

ಪ್ರಗತಿಪರ ರೈತರೂ ಆಗಿದ್ದ ಅವರು, ಡಾ. ಮೋಹನ್ ಆಳ್ವ ಸಹಿತ ಮೂವರು ಪುತ್ರರು ಮತ್ತು ಓರ್ವ ಪುತ್ರಿಯನ್ನು ಅಗಲಿದ್ದಾರೆ.

No Comments

Leave A Comment