ದ.ಕ. ಜಿಲ್ಲೆಯ ಮೂವರಿಗೆ ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ರಾಷ್ಟ್ರೀಯ ಪ್ರಶಸ್ತಿ...ಪ್ರಧಾನ ಮಂತ್ರಿ ಯೋಜನೆಗಳಿಗೆ ಮರುನಾಮಕರಣ ಮಾಡದಂತೆ ರಾಜ್ಯಗಳಿಗೆ ಕೇಂದ್ರ ಸರಕಾರದ ಆಗ್ರಹ...VHP ಕಾರ್ಯಕ್ರಮದಲ್ಲಿ ವಿವಾದಾತ್ಮಕ ಹೇಳಿಕೆ: ಸುಪ್ರೀಂಕೋರ್ಟ್ ಕೊಲಿಜಿಯಂ ಮುಂದೆ ನ್ಯಾ. ಶೇಖರ್ ಯಾದವ್ ಹಾಜರಾಗುವ ಸಾಧ್ಯತೆ

ಕೇಜ್ರಿವಾಲ್ ಗೆ ಸಮನ್ಸ್‌ ಬೆನ್ನಲ್ಲೇ ದೆಹಲಿ ಸಚಿವ ರಾಜ್ ಕುಮಾರ್ ಆನಂದ್ ಮನೆ ಮೇಲೆ ಇಡಿ ದಾಳಿ

ನವದೆಹಲಿ: ಅಕ್ರಮ ಹಣ ವರ್ಗಾವಣೆ ತನಿಖೆಯ ಭಾಗವಾಗಿ ಜಾರಿ ನಿರ್ದೇಶನಾಲಯ ಗುರುವಾರ ದೆಹಲಿ ಕ್ಯಾಬಿನೆಟ್ ಸಚಿವ ಮತ್ತು ಆಪ್ ನಾಯಕ ರಾಜ್ ಕುಮಾರ್ ಆನಂದ್ ಅವರ ನಿವಾಸದ ಮೇಲೆ ದಾಳಿ ನಡೆಸಿದೆ ಎಂದು ಅಧಿಕೃತ ಮೂಲಗಳು ತಿಳಿಸಿವೆ.

ಸಿವಿಲ್ ಲೈನ್ಸ್ ಪ್ರದೇಶದಲ್ಲಿರುವ ಸಚಿವರ ನಿವೇಶನ ಮತ್ತು ಇತರ ಕೆಲವು ಸ್ಥಳಗಳಲ್ಲಿ ಇಡಿ ಅಧಿಕಾರಿಗಳು ಶೋಧ ನಡೆಸತ್ತಿದ್ದಾರೆ ಎಂದು ಅವರು ಹೇಳಿದ್ದಾರೆ.

ಇಡಿ ಅಧಿಕಾರಿಗಳ ಶೋಧ ತಂಡಕ್ಕೆ ಸಿಆರ್‌ಪಿಎಫ್‌ ಸಿಬ್ಬಂದಿ ಭದ್ರತೆ ಒಗಿಸಿದ್ದಾರೆ.

57 ವರ್ಷದ ಆನಂದ್ ಅವರು ಅರವಿಂದ್ ಕೇಜ್ರಿವಾಲ್ ನೇತೃತ್ವದ ಸರ್ಕಾರದಲ್ಲಿ ಸಮಾಜ ಕಲ್ಯಾಣ ಮತ್ತು SC/ST ಕಲ್ಯಾಣ ಸಚಿವರಾಗಿದ್ದಾರೆ. ಅವರು ಪಟೇಲ್ ನಗರದ ಶಾಸಕರಾಗಿದ್ದಾರೆ.

ಅಬಕಾರಿ ನೀತಿ ಹಗರಣಕ್ಕೆ ಸಂಬಂಧಿಸಿದ ಪ್ರಕರಣದಲ್ಲಿ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರು ಇಂದು ಜಾರಿ ನಿರ್ದೇಶನಾಲಯದ ಮುಂದೆ ವಿಚಾರಣೆಗೆ ಹಾಜರಾಗಲು ಇಡಿ ಸಮನ್ಸ್ ನೀಡಿದೆ. ಆದರೆ ದೆಹಲಿ ಸಿಎಂ ಇದುವರೆಗೂ ವಿಚಾರಣೆಗೆ ಹಾಜರಾಗಿಲ್ಲ ಮತ್ತು ವಿಚಾರಣೆಗೆ ಗೈರು ಆಗುವ ಸಾಧ್ಯತೆ ಇದೆ ಎಂದು ಎಎಪಿ ಮೂಲಗಳು ತಿಳಿಸಿವೆ.

No Comments

Leave A Comment