Log In
BREAKING NEWS >
ಡಿ.7ರ ಗುರುವಾರದ೦ದು ಸಾಯಂಕಾಲ 4.00 ಘಂಟೆಗೆ ಕಲ್ಯಾಣಪುರ ಶ್ರೀವೆ೦ಕಟರಮಣ ದೇವಸ್ಥಾನ ಗೋಕರ್ಣಮಠಾಧೀಶರ ಪ್ರಥಮ ಭೇಟಿ....

ನ. 23ರವರೆಗೂ ತಮಿಳುನಾಡಿಗೆ ನಿತ್ಯ 2,600 ಕ್ಯೂಸೆಕ್ಸ್ ನೀರು ಬಿಡುಗಡೆಗೆ ಕರ್ನಾಟಕಕ್ಕೆ CWMA ಆದೇಶ

ಬೆಂಗಳೂರು: ತಮಿಳುನಾಡಿಗೆ ಮತ್ತೆ ನೀರು ಬಿಡುಗಡೆ ಮಾಡುವಂತೆ ಕಾವೇರಿ ನದಿ ನೀರು ನಿರ್ವಹಣಾ ಪ್ರಾಧಿಕಾರ ಕರ್ನಾಟಕಕ್ಕೆ ಆದೇಶಿಸಿದೆ.

ದೆಹಲಿಯಲ್ಲಿಂದು ನಡೆದ ಸಭೆಯಲ್ಲಿ ನವೆಂಬರ್ 1ರಿಂದ 15ರ ತನಕ ನಿತ್ಯ 2,600 ಕ್ಯೂಸೆಕ್‌ ಕಾವೇರಿ ನದಿ ನೀರನ್ನು ತಮಿಳುನಾಡಿಗೆ ಹರಿಸಬೇಕು ಎಂಬ ಕಾವೇರಿ ನೀರು ನಿಯಂತ್ರಣಾ ಸಮಿತಿ ಆದೇಶವನ್ನು ಒಪ್ಪದ ಕರ್ನಾಟಕ, ತಮಿಳುನಾಡಿಗೆ ನೀರು ಬಿಡುಗಡೆ ಸಾಧ್ಯವಿಲ್ಲ ಎಂದು ವಾದಿಸಿತು.

ಕೆಆರ್‌ಎಸ್‌ ಒಳಹರಿವು ಶೂನ್ಯವಾಗಿದೆ. ಎಲ್ಲ ಜಲಾಶಯಗಳು ಸೇರಿ 51 ಟಿಎಂಸಿ ನೀರು ಮಾತ್ರ ಲಭ್ಯವಿದೆ. ಕುಡಿಯುವುದಕ್ಕೂ ನೀರಿನ ಕೊರತೆ ಉಂಟಾಗಲಿರುವುದರಿಂದ ಮಿಕ್ಕಿರುವ ನೀರನ್ನು ಸಂರಕ್ಷಣೆ ಮಾಡಿಕೊಳ್ಳಲೇಬೇಕಾಗಿದ್ದು, ನೀರು ಬಿಡುಗಡೆ ಸಾಧ್ಯವಿಲ್ಲ ಎಂದು ಕರ್ನಾಟಕ ಅಧಿಕಾರಿಗಳು ವಾದಿಸಿದರು.

 

ಆದರೆ, ಈ ವಾದವನ್ನು ಪರಿಗಣಿಸದ ಪ್ರಾಧಿಕಾರ ನವೆಂಬರ್ 1 ರಿಂದ ನವೆಂಬರ್ 23ರವರೆಗೂ ನಿತ್ಯ 2,600 ಕ್ಯೂಸೆಕ್ಸ್ ನೀರನ್ನು ತಮಿಳುನಾಡಿಗೆ ಬಿಡುಗಡೆ ಮಾಡಬೇಕೆಂದು ಸೂಚಿಸಿತು.

No Comments

Leave A Comment