Log In
BREAKING NEWS >
ಕರಾವಳಿಯಲ್ಲಿ ಹೆಚ್ಚಿದ ಬಿಸಿಲಿನ ತಾಪಮಾನ-ಸಾವು ಸ೦ಭವಿಸುವ ಸಾಧ್ಯತೆ-ಎಚ್ಚರ ಬಿಸಿಲಿನಲ್ಲಿ ಹೊರಗೆ ಬರಲೇ ಬೇಡಿ....

ಮಹಾರಾಷ್ಟ್ರ: ಔಷಧ ಕಾರ್ಖಾನೆಯಲ್ಲಿ ಅಗ್ನಿ ಅವಘಡ, ನಾಲ್ವರು ಸಾವು, ಏಳು ಮಂದಿಗೆ ಗಾಯ

ರಾಯಗಢ: ಮಹಾರಾಷ್ಟ್ರದ ರಾಯಗಢ ಜಿಲ್ಲೆಯ ಔಷಧ ಕಾರ್ಖಾನೆಯೊಂದರಲ್ಲಿ ಶುಕ್ರವಾರ ಸಂಭವಿಸಿದ ಅಗ್ನಿ ಅವಘಡದಲ್ಲಿ ಕನಿಷ್ಠ ನಾಲ್ವರು ಸಾವನ್ನಪ್ಪಿದ್ದು, ಏಳು ಜನರು ಗಾಯಗೊಂಡಿದ್ದಾರೆ. ನಾಪತ್ತೆಯಾಗಿರುವ ಏಳು ಮಂದಿಗಾಗಿ ಶೋಧ ಕಾರ್ಯಾಚರಣೆ ನಡೆಯುತ್ತಿದೆ ಎಂದು ಅಧಿಕಾರಿಯೊಬ್ಬರು ಶನಿವಾರ ತಿಳಿಸಿದ್ದಾರೆ.

ಬೆಳಗ್ಗೆ 11 ಗಂಟೆ ಸುಮಾರಿಗೆ ರಾಯಗಢದ ಮಹಾಡ್ ಎಂಐಡಿಸಿಯಲ್ಲಿರುವ ಬ್ಲೂ ಜೆಟ್ ಹೆಲ್ತ್‌ಕೇರ್‌ನಲ್ಲಿ ಬೆಂಕಿ ಕಾಣಿಸಿಕೊಂಡಿದೆ ಎಂದು ರಾಷ್ಟ್ರೀಯ ವಿಪತ್ತು ನಿರ್ವಹಣಾ ಪಡೆಯ (ಎನ್‌ಡಿಆರ್‌ಎಫ್) ಅಧಿಕಾರಿ ತಿಳಿಸಿದ್ದಾರೆ.

ಕಾರ್ಖಾನೆಯಲ್ಲಿ ಬೆಂಕಿ ಕಾಣಿಸಿಕೊಂಡ ನಂತರ ನಾಪತ್ತೆಯಾದ 11 ಜನರಲ್ಲಿ ಬೆಳಿಗ್ಗೆ 7 ಗಂಟೆಯವರೆಗೆ ನಾಲ್ವರ ಶವಗಳನ್ನು ಹೊರತೆಗೆಯಲಾಗಿದೆ. ನಾಪತ್ತೆಯಾಗಿರುವ ಏಳು ಜನರ ಪತ್ತೆಗಾಗಿ  ಶೋಧ ಕಾರ್ಯಾಚರಣೆ ಇನ್ನೂ ನಡೆಯುತ್ತಿದೆ ಎಂದು ಅವರು ಹೇಳಿದರು.

ಶಾರ್ಟ್ ಸರ್ಕ್ಯೂಟ್‌ನಿಂದ ಬೆಂಕಿ ಕಾಣಿಸಿಕೊಂಡಿದೆ ಎಂಬುದು ಪ್ರಾಥಮಿಕ ತನಿಖೆಯಿಂದ ತಿಳಿದುಬಂದಿದೆ ಅಧಿಕಾರಿ ತಿಳಿಸಿದ್ದಾರೆ. ಶಾರ್ಟ್ ಸರ್ಕ್ಯೂಟ್ ನಿಂದ ಕಾರ್ಖಾನೆಯಲ್ಲಿ ಬೆಂಕಿ ವ್ಯಾಪಿಸಿದ್ದು, ಬಳಿಕ ರಾಸಾಯನಿಕಗಳನ್ನು ಒಳಗೊಂಡಿರುವ ಬ್ಯಾರೆಲ್ ಗಳಲ್ಲಿನ ಸ್ಫೋಟಕ್ಕೆ ಕಾರಣವೆಂದು ತಿಳಿದುಬಂದಿದೆ. ಈ ಘಟನೆ ಕುರಿತು ಹೆಚ್ಚಿನ ತನಿಖೆ ನಡೆಯುತ್ತಿದೆ ಎಂದು ಅವರು ತಿಳಿಸಿದ್ದಾರೆ.

No Comments

Leave A Comment