Log In
BREAKING NEWS >
ನವೆ೦ಬರ್ 27ರ೦ದು ಕಲ್ಯಾಣಪುರ ಶ್ರೀವೆ೦ಕಟರಮಣ ದೇವಸ್ಥಾನದಲ್ಲಿ ದೀಪೋತ್ಸವ ಕಾರ್ಯಕ್ರಮ ಜರಗಲಿದೆ...

ಬಂಡೀಪುರ ಅರಣ್ಯ ಪ್ರದೇಶದಲ್ಲಿ ಗುಂಡಿನ ಚಕಮಕಿ: ಓರ್ವ ಬೇಟೆಗಾರ ಸಾವು

ಮೈಸೂರು: ಬಂಡೀಪುರ ಹುಲಿ ಸಂರಕ್ಷಿತ ಅರಣ್ಯ ಪ್ರದೇಶದಲ್ಲಿ ಬೇಟೆಗಾರರು ಹಾಗೂ ಅರಣ್ಯ ಇಲಾಖೆ ಸಿಬ್ಬಂದಿ ನಡುವೆ ಗುಂಡಿನ ಚಕಮಕಿ ನಡೆದಿದ್ದು, ಗುಂಡಿನ ಚಕಮಕಿಯಲ್ಲಿ ಓರ್ವ ಬೇಟೆಗಾರ ಮೃತಪಟ್ಟಿರುವ ಘಟನೆ ಭಾನುವಾರ ನಡೆದಿದೆ.

ಮೃತರನ್ನು ಭೀಮನಬೀಡು ಗ್ರಾಮದ ನಿವಾಸಿ ಮನು (35) ಎಂದು ಗುರುತಿಸಲಾಗಿದೆ .ಮದ್ದೂರು ಅರಣ್ಯ ವಲಯದಲ್ಲಿ 8-10 ಮಂದಿಯ ಗುಂಪು ಬೇಟೆಗೆ ಬಂದಿದ್ದರು. ಕಡವೆ, ಕಾಡುಹಂದಿಗಳನ್ನು ಬೇಟೆಯಾಡಲು 8-10 ಜನರ ಗುಂಪು ಬಂದಿತ್ತು ಎನ್ನಲಾಗಿದೆ. ಈ ವೇಳೆ ಅರಣ್ಯ ಇಲಾಖೆಯ ಸಿಬ್ಬಂದಿ ಗಸ್ತಿನಲ್ಲಿದ್ದರು. ಆಗ ಅರಣ್ಯ ಇಲಾಖೆ ಸಿಬ್ಬಂದಿ ಮೇಲೆ ನಾಡಬಂದೂಕುಗಳಿಂದ ಕಳ್ಳಬೇಟೆಗೆ ಬಂದ ಗುಂಪು ದಾಳಿ ಮಾಡಲು ಮುಂದಾಗಿತ್ತು.

ತಕ್ಷಣವೇ ಎಚ್ಚೆತ್ತ ಅರಣ್ಯ ಇಲಾಖೆ ಸಿಬ್ಬಂದಿ ಕೂಡ ಮರು ದಾಳಿಗೆ ಮುಂದಾಗಿದ್ದರು. ಈ ವೇಳೆ ಬೇಟೆಗೆ ಬಂದ ಓರ್ವ ಯುವಕ ಸಾವನ್ನಪ್ಪಿದ್ದಾನೆ. ಈ ಬಗ್ಗೆ ಮುಂದಿನ ಕ್ರಮ ಕೈಗೊಳ್ಳಲಾಗುತ್ತದೆ ಎಂದು ಬಂಡೀಪುರ ಸಿಎಫ್ಒ ರಮೇಶ್ ಕುಮಾರ್ ತಿಳಿಸಿದ್ದಾರೆ.

ಘಟನೆ ನಡೆದ ಬಳಿಕ ಉಳಿದ ಬೇಟೆಗಾರರು ಸ್ಥಳದಿಂದ ಪರಾರಿಯಾಗಿದ್ದಾರೆ. ಘಟನೆ ಸ್ಥಳಕ್ಕೆ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಪರಾರಿಯಾಗಿರುವ ಆರೋಪಿಗಳ ಬಂಧನಕ್ಕೆ ಅಧಿಕಾರಿಗಳು ಬಲೆ ಬೀಸಿದ್ದಾರೆ.

No Comments

Leave A Comment