Log In
BREAKING NEWS >
````````````ನಾಡಿನ ಸಮಸ್ತ ಜನತೆಗೆ,ನಮ್ಮ ಎಲ್ಲಾ ಜಾಹೀರಾತುದಾರರಿಗೆ,ಅಭಿಮಾನಿಗಳಿಗೆ ಹಾಗೂ ಓದುಗರಿಗೆ ಶ್ರೀ ಗೌರಿ-ಗಣೇಶನ ಹಬ್ಬದ ಶುಭಾಶಯಗಳು```````

ವಿದ್ಯುತ್ ಕಂಬಕ್ಕೆ ಬೈಕ್ ಢಿಕ್ಕಿ: ಸವಾರಿಬ್ಬರು ಸಾವು

ಕೊಡಗು:ನ.7, ವಿದ್ಯುತ್ ಕಂಬಕ್ಕೆ ಬೈಕ್ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು ಸವಾರರು ಸ್ಥಳದಲ್ಲೇ ಮೃತಪಟ್ಟ ಧಾರುಣ ಘಟನೆ ಕೊಡಗಿನ ಸುಂಟಿಕೊಪ್ಪ ಸಮೀಪದ ಬಿರ್ಚಿವುಡ್ ರೆಸಾರ್ಟ್ ಸಮೀಪ ನ.6 ರ ಸೋಮವಾರ ರಾತ್ರಿ ನಡೆದಿರುವ ಪ್ರಕರಣ ತಡವಾಗಿ ಬೆಳಕಿಗೆ ಬಂದಿದೆ.

ಸುಂಟಿಕೊಪ್ಪದ ಮದುರಮ ಬಡಾವಣೆ ನಿವಾಸಿಗಳಾದ ಉದಯ(25) ಚಂದನ್(26) ಅಪಘಾತದಲ್ಲಿ ಮೃತಪಟ್ಟ ದುರ್ಧೈವಿಗಳು ಎಂದು ಗುರುತಿಸಲಾಗಿದೆ. ಈ ಇಬ್ಬರು ಇಲ್ಲಿನ ಕುಶಾಲನಗರದಿಂದ ಸುಂಟಿಕೊಪ್ಪಕ್ಕೆ ಬರುವಾಗ ಈ ಅವಘಡ ಸಂಭವಿಸಿದ್ದು, ಬೈಕ್ ಲೈಟ್ ಕಂಬಕ್ಕೆ ಢಿಕ್ಕಿ ಹೊಡೆದು ಸವಾರರು ಸ್ಥಳದಲ್ಲೇ ಮೃತಪಟ್ಟಿದ್ದಾರೆ.

ಸುಂಟಿಕೊಪ್ಪ ಪೊಲೀಸ್ ಠಾಣೆಯಲ್ಲಿ ಈ ಬಗ್ಗೆ ಪ್ರಕರಣ ದಾಖಲಾಗಿದ್ದು,ತನಿಖೆ ಮುಂದುವರೆದಿದೆ.

No Comments

Leave A Comment