ಉಡುಪಿ ಶ್ರೀಲಕ್ಷ್ಮೀವೆ೦ಕಟೇಶ ದೇವಸ್ಥಾನದಲ್ಲಿ ಜನವರಿ 29ರಿ೦ದ 125 ದಿನಗಳಕಾಲ ನಿರ೦ತರ ಅಹೋರಾತ್ರೆ ಭಜನಾ ಕಾರ್ಯಕ್ರಮವು ಜರಗಲಿದೆ. ಭಜನಾ ಕಾರ್ಯಕ್ರಮವನ್ನು ಕಾಶೀಮಠ ಶ್ರೀಶ್ರೀಸ೦ಯಮೀ೦ದ್ರ ತೀರ್ಥಶ್ರೀಪಾದರು ದೀಪಪ್ರಜ್ವಲನೆ ಮಾಡುವುದರೊ೦ದಿಗೆ ಭಜನಾ ಕಾರ್ಯಕ್ರಮಕ್ಕೆ ಚಾಲನೆ ನೀಡಲಿದ್ದಾರೆ.
ಛತ್ತೀಸ್‌ಗಢ ಚುನಾವಣೆ: ಮತಗಟ್ಟೆ ಬಳಿ ಪೊಲೀಸರ ಮೇಲೆ ನಕ್ಸಲರ ಗುಂಡಿನ ದಾಳಿ
ಸುಕ್ಮಾ: ಛತ್ತೀಸ್‌ಗಢದಲ್ಲಿ ಮೊದಲ ಹಂತದ ಮತದಾನ ನಡೆಯುತ್ತಿದ್ದು, ರಾಜ್ಯದ ಬಂದಾ ಮತಗಟ್ಟೆ ಬಳಿ ನಿಯೋಜಿಸಿದ ಜಿಲ್ಲಾ ಮೀಸಲು ಪಡೆ ಸಿಬ್ಬಂದಿ ಮೇಲೆ ನಕ್ಸಲರು ಗುಂಡಿನ ದಾಳಿ ನಡೆಸಿದ್ದಾರೆ ಎಂದು ಪೊಲೀಸರು ಮಂಗಳವಾರ ತಿಳಿಸಿದ್ದಾರೆ. ಭದ್ರತಾ ಪಡೆಗಳು ಕೂಡಾ ಪ್ರತಿದಾಳಿ ನಡೆಸಿದ್ದು, ನಕ್ಸಲರು ತಮ್ಮ ದಾಳಿ ನಿಲ್ಲಿಸುವ ಮುನ್ನ 10 ನಿಮಿಷಗಳ ಕಾಲ ಗುಂಡಿನ ಚಕಮಕಿ ನಡೆಸಿದರು ಎಂದು ಸುಕ್ಮಾ ಪೊಲೀಸರು ತಿಳಿಸಿದ್ದಾರೆ.
ಜಿಲ್ಲಾ ಮೀಸಲು ಪಡೆ ಸಿಬ್ಬಂದಿ ಬಂದಾ ಮತಗಟ್ಟೆಯಿಂದ ಸುಮಾರು 2 ಕಿಲೋಮೀಟರ್‌ಗಳಷ್ಟು ದೂರದಲ್ಲಿ ನಿಂತಿದ್ದರಿಂದ ನಕ್ಸಲರು ಗುಂಡಿನ ದಾಳಿ ನಡೆಸಿದ್ದಾರೆ. ಗುಂಡಿನ ಚಕಮಕಿ ವೇಳೆ ಎಲ್ಲಾ ಯೋಧರು ಸುರಕ್ಷಿತವಾಗಿದ್ದು, ಮತದಾನ ಪ್ರಕ್ರಿಯೆ ನಡೆಯುತ್ತಿದೆ ಎಂದು ಪೊಲೀಸರು ತಿಳಿಸಿರುವುದಾಗಿ ಎಎನ್ ಐ ಸುದ್ದಿಸಂಸ್ಥೆ ವರದಿ ಮಾಡಿದೆ.
ಛತ್ತೀಸ್‌ಗಢ ವಿಧಾನಸಭಾ ಚುನಾವಣೆಯ ಮೊದಲ ಹಂತದ ಮತದಾನದಲ್ಲಿ 20 ಕ್ಷೇತ್ರಗಳಲ್ಲಿ ಮಧ್ಯಾಹ್ನ 1 ಗಂಟೆಯವರೆಗೆ ಶೇಕಡಾ 44 ಕ್ಕಿಂತ ಹೆಚ್ಚು ಮತದಾನವಾಗಿದೆ ಎಂದು ಚುನಾವಣಾಧಿಕಾರಿಯೊಬ್ಬರು ತಿಳಿಸಿದ್ದಾರೆ.
ಮತ್ತೊಂದು ಘಟನೆಯಲ್ಲಿ ನಕ್ಸಲೀಯರು ನಡೆಸಿದ ಐಇಡಿ ಸ್ಫೋಟದಲ್ಲಿ ಸಿಆರ್‌ಪಿಎಫ್ ಕಮಾಂಡೋ ಗಾಯಗೊಂಡಿದ್ದಾರೆ. ಚುನಾವಣಾ ಸಮಯದಲ್ಲಿ ಭದ್ರತೆ ಖಚಿತಪಡಿಸಿಕೊಳ್ಳಲು ಸಿಆರ್ ಪಿಎಫ್ ಆ ಪ್ರದೇಶದಲ್ಲಿ ಮಹತ್ವದ ಕಾರ್ಯಾಚರಣೆ ಕೈಗೊಳ್ಳುತ್ತಿದೆ.