ನಾಡಿನ ಸಮಸ್ತ ಜನತೆಗೆ ,ನಮ್ಮ ಎಲ್ಲಾ ಗ್ರಾಹಕರಿಗೆ,ಜಾಹೀರಾತುದಾರರಿಗೆ "ಕ್ರಿಸ್ಮಸ್" ಹಬ್ಬ ಹಾಗೂ ಹೊಸವರುಷದ ಶುಭಾಶಯಗಳು...
ಬಿಜೆಪಿ ಟಿಕೆಟ್ ವಂಚನೆ ಹಗರಣ: ಚೈತ್ರಾ ಕುಂದಾಪುರ ಗ್ಯಾಂಗ್ ವಿರುದ್ದ ಪೊಲೀಸರಿಂದ 800 ಪುಟಗಳ ಚಾರ್ಜ್ ಶೀಟ್ ಸಲ್ಲಿಕೆ
ಬೆಂಗಳೂರು: ಚೈತ್ರಾ ಕುಂದಾಪುರ ಗ್ಯಾಂಗ್ನಿಂದ ಉದ್ಯಮಿಗೆ ಕೋಟ್ಯಾಂತರ ರು. ವಂಚನೆ ಪ್ರಕರಣಕ್ಕೆ ಸಂಬಂಧಿಸಿದಂತೆ 9 ಆರೋಪಿಗಳ ವಿರುದ್ಧ ಸಿಸಿಬಿ ಚಾರ್ಜ್ಶೀಟ್ ಸಲ್ಲಿಸಿದೆ. 1ನೇ ಎಸಿಎಂಎಂ ನ್ಯಾಯಾಲಯಕ್ಕೆ ಚಾರ್ಜ್ಶೀಟ್ ಸಲ್ಲಿಸಿದೆ. 75 ಮಂದಿ ಸಾಕ್ಷಿಗಳ ಹೇಳಿಕೆ ದಾಖಲಿಸಿ ಸುಮಾರು 800 ಪುಟಗಳ ಚಾರ್ಜ್ಶೀಟ್ ಸಲ್ಲಿಸಿದೆ.
ಕೇಂದ್ರ ನಗರ ಅಪರಾಧ ವಿಭಾಗ ಮೊದಲ ಹೆಚ್ಚುವರಿ ಮುಖ್ಯ ಮೆಟ್ರೋಪಾಲಿಟನ್ ಮ್ಯಾಜಿಸ್ಟ್ರೇಟ್ ಗೆ ಚಾರ್ಜ್ ಶೀಟ್ ಸಲ್ಲಿಸಿದೆ ಎಂದು ಮೂಲಗಳು ತಿಳಿಸಿವೆ. ಪ್ರಕರಣಕ್ಕೆ ಸಂಬಂಧಿಸಿದಂತೆ 75 ಸಾಕ್ಷಿಗಳ ಹೇಳಿಕೆಗಳನ್ನು ದಾಖಲಿಸಿಕೊಳ್ಳಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
4.11 ಕೋಟಿ ನಗದು ವಶಪಡಿಸಿಕೊಂಡಿರುವ ಪೊಲೀಸರು ಆರೋಪಿಗಳ ವಿರುದ್ಧ ಪ್ರಾಥಮಿಕ, ಸಾಂದರ್ಭಿಕ ಹಾಗೂ ಡಿಜಿಟಲ್ ಸಾಕ್ಷ್ಯಗಳನ್ನು ಸಂಗ್ರಹಿಸಿದ್ದರು. ಉದ್ಯಮಿ ಗೋವಿಂದ ಬಾಬು ಪೂಜಾರಿ 10 ವಿಡಿಯೋ ಹಾಗೂ ಆಡಿಯೋ ದಾಖಲೆಗಳನ್ನು ಪೊಲೀಸರಿಗೆ ಒಪ್ಪಿಸಿದ್ದರು.
ಪ್ರಕರಣ ಎಲ್ಲಾ ಆರೋಪಿಗಳು ಸದ್ಯ ಬೆಂಗಳೂರಿನ ಪರಪ್ಪನ ಅಗ್ರಹಾರದ ಕೇಂದ್ರ ಕಾರಾಗೃಹದಲ್ಲಿದ್ದಾರೆ. ಹಗರಣದ ಸೂಕ್ಷ್ಮತೆಯನ್ನು ಪರಿಗಣಿಸಿ ನ್ಯಾಯಾಲಯಗಳು ಆರೋಪಿಗಳಿಗೆ ಇದುವರೆಗೆ ಜಾಮೀನು ನಿರಾಕರಿಸಿದೆ.
ಚೈತ್ರಾ ಕುಂದಾಪುರ ಅವರಿಂದ ಸುಮಾರು 17 ಟಿಕೆಟ್ ಆಕಾಂಕ್ಷಿಗಳು 185 ಕೋಟಿ ರು ಹಣ ಕಳೆದುಕೊಂಡಿರುವ ಬಗ್ಗೆ ನನ್ನ ಬಳಿ ಮಾಹಿತಿ ಇದೆ ಎಂದು ಕಾಂಗ್ರೆಸ್ ವಕ್ತಾರ ಎಂ.ಲಕ್ಷ್ಮಣ್ ಆರೋಪಿಸಿದ್ದಾರೆ. ಚೈತ್ರಾ ಕುಂದಾಪುರಗೆ ಬಿಜೆಪಿಯ ಉನ್ನತ ನಾಯಕರೊಂದಿಗೆ ನೇರ ಸಂಪರ್ಕವಿದ್ದು ಇದರ ಬಗ್ಗೆ ತನಿಖೆಯಾಗಬೇಕು ಎಂದು ಒತ್ತಾಯಿಸಿದರು.