ಉಡುಪಿ ಶ್ರೀಲಕ್ಷ್ಮೀವೆ೦ಕಟೇಶ ದೇವಸ್ಥಾನದಲ್ಲಿ ನವೆ೦ಬರ್ 13ರ೦ದು ವಿಶ್ವರೂಪದರ್ಶನ ಕಾರ್ಯಕ್ರಮವು ಬೆಳಿಗ್ಗೆ 5ಗ೦ಟೆಗೆ ಜರಗಿತು.ನವೆ೦ಬರ್ 18ಹಾಗೂ 19ರ೦ದು ಲಕ್ಷ ದೀಪೋತ್ಸವವು ಜರಗಲಿದೆ.
ಲೈಂಗಿಕ ದೌರ್ಜನ್ಯ ಪ್ರಕರಣ: ಮುರುಘಾ ಶ್ರೀಗಳಿಗೆ ಷರತ್ತು ಬದ್ಧ ಜಾಮೀನು
ಬೆಂಗಳೂರು: ಅಪ್ರಾಪ್ತ ಮಕ್ಕಳ ಮೇಲೆ ಲೈಂಗಿಕ ದೌರ್ಜನ್ಯ ಆರೋಪ ಪ್ರಕರಣಕ್ಕೆ ಸಂಬಂಧಿಸಿದಂತೆ ಚಿತ್ರದುರ್ಗದ ಮುರುಘಾ ಮಠದ ಡಾ. ಶಿವಮೂರ್ತಿ ಶ್ರೀಗಳಿಗೆ ಕರ್ನಾಟಕ ಹೈಕೋರ್ಟ್ ಜಾಮೀನು ನೀಡಿದೆ.
ಮುರುಘಾಶ್ರೀ ಸಲ್ಲಿಸಿದ್ದ ಜಾಮೀನು ಅರ್ಜಿಯ ವಿಚಾರಣೆ ನಡೆಸಿದ ಹೈಕೋರ್ಟ್ ಶ್ರೀಗಳಿಗೆ ಏಳು ಷರತ್ತನ್ನು ವಿಧಿಸಿ ಜಾಮೀನು ನೀಡಿದೆ. ಅದರಂತೆ ಮುರುಘಾ ಶ್ರೀಗಳು ತಮ್ಮ ಪಾಸ್ ಪೋರ್ಟ್ ಅನ್ನು ಕೋರ್ಟ್ ವಶಕ್ಕೆ ನೀಡಬೇಕಿದೆ. ಇಬ್ಬರು ಶ್ಯೂರಿಟಿಗಳನ್ನು ಒದಗಿಸಬೇಕು. ಇನ್ನು ಚಿತ್ರದುರ್ಗಕ್ಕೆ ಹೋಗದಂತೆ ಷರತ್ತು ವಿಧಿಸಿದೆ.
ಮುಂದೆ ಇಂತಹ ಕೃತ್ಯಗಳು ಮತ್ತೆ ಪುನರಾವರ್ತನೆ ಆಗಬಾರದು. ಕೋರ್ಟ್ ವಿಚಾರಣೆಗೆ ವಿಡಿಯೋ ಕಾನ್ಫರೇನ್ಸ್ ಮೂಲಕ ಹಾಜರಾಗಬೇಕು ಎಂದು ಕೋರ್ಟ್ ಹೇಳಿದೆ.
ಮುರುಘಾ ಶ್ರೀಗೆ ಜಾಮೀನು ಸಿಕ್ಕರೂ ಮತ್ತೊಂದು ಅರ್ಜಿ ವಿಚಾರಣೆ ಬಾಕಿ ಇರುವ ಹಿನ್ನೆಲೆಯಲ್ಲಿ ಅವರಿಗೆ ಬಿಡುಗಡೆ ಭಾಗ್ಯವಿಲ್ಲ.
ಮುರುಘಾ ಶ್ರೀಗಳ ವಿರುದ್ಧ ಪೋಕ್ಸೊ ಕಾಯ್ದೆ ಅಡಿ ಪ್ರಕರಣ ದಾಖಲಿಸಲಾಗಿದ್ದು, ಕಳೆದ ವರ್ಷ ಸೆಪ್ಟೆಂಬರ್ 1 ರಂದು ಬಂಧಿಸಿದ್ದು, ಒಂದು ವರ್ಷದಿಂದ ಚಿತ್ರದುರ್ಗ ಜೈಲಿನಲ್ಲಿ ನ್ಯಾಯಾಂಗ ಬಂಧನದಲ್ಲಿದ್ದಾರೆ.
ಶಿವಮೂರ್ತಿ ಶರಣರ ವಿರುದ್ಧ ಪೋಕ್ಸೊ (ಲೈಂಗಿಕ ಅಪರಾಧಗಳಿಂದ ಮಕ್ಕಳ ರಕ್ಷಣೆ) ಕಾಯಿದೆ–2012, ಭಾರತೀಯ ದಂಡ ಸಂಹಿತೆ–1860, ಧಾರ್ಮಿಕ ಸಂಸ್ಥೆಗಳ ದುರುಪಯೋಗ ತಡೆ ಕಾಯಿದೆ-1988, ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ವರ್ಗದ ಮೇಲಿನ ದೌರ್ಜನ್ಯ ತಡೆ ಕಾಯಿದೆ–1989 ಮತ್ತು ಬಾಲ ನ್ಯಾಯ (ಮಕ್ಕಳ ಸಂರಕ್ಷಣೆ ಹಾಗೂ ಆರೈಕೆ) ಕಾಯಿದೆ–2015ರ ವಿವಿಧ ಸೆಕ್ಷನ್‌ಗಳ ಅಡಿಯಲ್ಲಿ ಪ್ರತ್ಯೇಕ ಪ್ರಕರಣ ದಾಖಲಿಸಲಾಗಿದೆ.