ಉಡುಪಿ ಶ್ರೀಲಕ್ಷ್ಮೀವೆ೦ಕಟೇಶ ದೇವಸ್ಥಾನದಲ್ಲಿ ಜನವರಿ 29ರಿ೦ದ 125 ದಿನಗಳಕಾಲ ನಿರ೦ತರ ಅಹೋರಾತ್ರೆ ಭಜನಾ ಕಾರ್ಯಕ್ರಮವು ಜರಗಲಿದೆ. ಭಜನಾ ಕಾರ್ಯಕ್ರಮವನ್ನು ಕಾಶೀಮಠ ಶ್ರೀಶ್ರೀಸ೦ಯಮೀ೦ದ್ರ ತೀರ್ಥಶ್ರೀಪಾದರು ದೀಪಪ್ರಜ್ವಲನೆ ಮಾಡುವುದರೊ೦ದಿಗೆ ಭಜನಾ ಕಾರ್ಯಕ್ರಮಕ್ಕೆ ಚಾಲನೆ ನೀಡಲಿದ್ದಾರೆ.

ಆಸ್ಟ್ರೇಲಿಯಾಗೆ 5 ಬಾರಿ ವಿಶ್ವಕಪ್ ಗೆದ್ದುಕೊಟ್ಟ ನಾಯಕಿ ಮೆಗ್ ಲ್ಯಾನಿಂಗ್ ಅಂತಾರಾಷ್ಟ್ರೀಯ ಕ್ರಿಕೆಟ್ ಗೆ ನಿವೃತ್ತಿ

ಮೆಲ್ಬರ್ನ್‌: ಆಸ್ಟ್ರೇಲಿಯಾ ಮಹಿಳಾ ಕ್ರಿಕೆಟ್‌ ತಂಡದ ನಾಯಕಿ ಮೆಗ್ ಲ್ಯಾನಿಂಗ್‌ ಅವರು ಅಂತಾರಾಷ್ಟ್ರೀಯ ಕ್ರಿಕೆಟ್‌ಗೆ ಗುರುವಾರ ನಿವೃತ್ತಿ ಘೋಷಿಸಿದ್ದಾರೆ.

ಹೌದು.. ಆಸ್ಟ್ರೇಲಿಯಾ ಮಹಿಳಾ ತಂಡಕ್ಕೆ ಐದು ಬಾರಿ ವಿಶ್ವಕಪ್ ಗೆದ್ದುಕೊಟ್ಟ ಕೀರ್ತಿ ಹೊಂದಿರುವ ನಾಯಕಿ ಮೆಗ್ ಲ್ಯಾನಿಂಗ್ ಅಂತಾರಾಷ್ಟ್ರೀಯ ಕ್ರಿಕೆಟ್‌ಗೆ ಗುರುವಾರ ನಿವೃತ್ತಿ ಘೋಷಿಸಿದ್ದಾರೆ. ಈ ಬಗ್ಗೆ ಮಾಹಿತಿ ನೀಡಿರುವ 31 ವರ್ಷದ ಮೆಗ್ ಲ್ಯಾನಿಂಗ್,  ‘ಅಂತಾರಾಷ್ಟ್ರೀಯ ಕ್ರಿಕೆಟ್‌ನಿಂದ ನಿರ್ಗಮಿಸುವ ನಿರ್ಧಾರ ಕಠಿಣವಾದದ್ದು. ಆದರೆ, ಇದು ಸರಿಯಾದ ಸಮಯ ಎನಿಸಿದೆ. ನನ್ನಿಂದ ಏನೆಲ್ಲ ಸಾಧಿಸಲು ಸಾಧ್ಯವಾಯಿತೋ ಆ ಬಗ್ಗೆ ಹೆಮ್ಮೆ ಇದೆ. ಈ ಪಯಣದುದ್ದಕ್ಕೂ ಸಹ ಆಟಗಾರರೊಂದಿಗೆ ಕಳೆದ ಪ್ರತಿ ಕ್ಷಣವನ್ನೂ ಪ್ರೀತಿಸುತ್ತೇನೆ’ ಎಂದು ಹೇಳಿಕೆ ನೀಡಿದ್ದಾರೆ.

ಮೆಗ್ ಲ್ಯಾನಿಂಗ್ ನಿವೃತ್ತಿ ಬಗ್ಗೆ ಮಾತನಾಡಿರುವ ಕ್ರಿಕೆಟ್‌ ಆಸ್ಟ್ರೇಲಿಯಾ ಸಿಇಒ ನಿಕ್‌ ಹಾಕ್ಲೇ, ಮೆಗ್‌ ಅವರ ನಾಯಕತ್ವದಲ್ಲಿ ಆಸ್ಟ್ರೇಲಿಯಾ ಮಹಿಳಾ ಕ್ರಿಕೆಟ್‌ ತಂಡವು ಜಾಗತಿಕ ಮಟ್ಟದಲ್ಲಿ ಪ್ರಭುತ್ವ ಸ್ಥಾಪಿಸಿತ್ತು ಎಂದು ಮೆಗ್ ನಾಯಕತ್ವವನ್ನು ಶ್ಲಾಘಿಸಿದ್ದಾರೆ.

2014ರಲ್ಲಿ ತಮ್ಮ 21ನೇ ವಯಸ್ಸಿನಲ್ಲಿ ತಂಡದ ನಾಯಕತ್ವ ವಹಿಸಿಕೊಳ್ಳುವುದಕ್ಕೂ ಮುನ್ನ 2012ರಲ್ಲಿ ಟಿ20 ವಿಶ್ವಕಪ್‌, 2012ರಲ್ಲಿ ಏಕದಿನ ವಿಶ್ವಕಪ್‌ ಗೆದ್ದ ತಂಡದಲ್ಲಿ ಆಡಿದ್ದರು. ನಾಯಕಿಯಾದ ಬಳಿಕ 2022ರಲ್ಲಿ ಏಕದಿನ ವಿಶ್ವಕಪ್‌ ಹಾಗೂ ಕಾಮನ್‌ವೆಲ್ತ್‌ ಚಿನ್ನದ ಪದಕ, 2014, 2018, 2020 ಮತ್ತು 2023ರಲ್ಲಿ ಟಿ20 ವಿಶ್ವಕಪ್‌ ಜಯಿಸಿದ್ದರು. ಮೆಗ್‌ ನಾಯಕತ್ವದಲ್ಲಿ 2018 ರಿಂದ 2021ರ ಅವಧಿಯಲ್ಲಿ ಆಸ್ಟ್ರೇಲಿಯಾ ಸತತ 26 ಏಕದಿನ ಪಂದ್ಯಗಳಲ್ಲಿ ಜಯ ಸಾಧಿಸಿತ್ತು. ಇದು ದಾಖಲೆಯಾಗಿದೆ. ಮೂರೂ ಮಾದರಿಯಲ್ಲಿ ಒಟ್ಟು 241 ಪಂದ್ಯಗಳಲ್ಲಿ ಆಡಿದ್ದ ಮೆಗ್‌, 8,352 ರನ್‌ ಕಲೆಹಾಕಿದ್ದಾರೆ.

ಪ್ರಸ್ತುತ ಬಿಗ್ ಬ್ಯಾಶ್ ಲೀಗ್ ನಲ್ಲಿ ಮೆಗ್ ಮೆಲ್ಬೋರ್ನ್ ಸ್ಟಾರ್ಸ್‌ನ ನಾಯಕತ್ವ ವಹಿಸಿದ್ದಾರೆ.

kiniudupi@rediffmail.com

No Comments

Leave A Comment