ನಾಡಿನ ಸಮಸ್ತ ಜನತೆಗೆ ,ನಮ್ಮ ಎಲ್ಲಾ ಗ್ರಾಹಕರಿಗೆ,ಜಾಹೀರಾತುದಾರರಿಗೆ "ಕ್ರಿಸ್ಮಸ್" ಹಬ್ಬ ಹಾಗೂ ಹೊಸವರುಷದ ಶುಭಾಶಯಗಳು...
PSI ಮರುಪರೀಕ್ಷೆ ನಡೆಸುವ ರಾಜ್ಯ ಸರ್ಕಾರದ ನಿರ್ಧಾರಕ್ಕೆ ಹೈಕೋರ್ಟ್ ಅಸ್ತು!
ಬೆಂಗಳೂರು: ಪಿಎಸ್ ಐ ಮರುಪರೀಕ್ಷೆಗೆ ಹೈಕೋರ್ಟ್ ಶುಕ್ರವಾರ ಆದೇಶ ನೀಡಿದೆ. 2021ರಲ್ಲಿ ನಡೆದ ಪಿಎಸ್ ಐ ನೇಮಕಾತಿ ಪರೀಕ್ಷೆಯಲ್ಲಿ ವ್ಯಾಪಕ ಅಕ್ರಮ ನಡೆದು ಪರೀಕ್ಷಾರ್ಥಿಗಳು ದೂರು ಕೊಟ್ಟ ಹಿನ್ನೆಲೆಯಲ್ಲಿ ಹಗರಣ ಬೆಳಕಿಗೆ ಬಂದಿತ್ತು.
ಪ್ರಕರಣ ಹೈಕೋರ್ಟ್ ಮೆಟ್ಟಿಲೇರಿತ್ತು. ಇಂದು ಮಹತ್ವದ ಆದೇಶ ನೀಡಿರುವ ನ್ಯಾಯಾಲಯ ಸ್ವತಂತ್ರ ಸಂಸ್ಥೆಯಿಂದ ಮರು ಪರೀಕ್ಷೆ ನಡೆಸುವಂತೆ ಆದೇಶ ನೀಡಿದೆ. 55 ಸಬ್ ಇನ್ಸ್ ಪೆಕ್ಟರ್ ಹುದ್ದೆಗೆ ಪ್ರವೇಶ ಪರೀಕ್ಷೆ ಎರಡು ವರ್ಷಗಳ ಹಿಂದೆ ನಡೆದಿತ್ತು.
ಹಗರಣದ ಪ್ರಮುಖ ಆರೋಪಿ ರುದ್ರಗೌಡ ಪಾಟೀಲ್ ಮೊನ್ನೆಯಷ್ಟೇ ತಲೆಮರೆಸಿಕೊಂಡಿದ್ದು ಆತನ ಪತ್ತೆ ಇನ್ನೂ ಸಿಕ್ಕಿಲ್ಲ.