ಚಿಕ್ಕಮಗಳೂರು: ಡಿಸೆಂಬರ್ 14 ರಂದು ದತ್ತಮಾಲಾ ಧಾರಿಗಳಿಂದ ದತ್ತ ಪಾದುಕೆ ದರ್ಶನ, ಜಿಲ್ಲೆಯಲ್ಲಿ ಹೈ ಅಲರ್ಟ್
ಮಂಗಳೂರು:ಎಂಡಿಎಂಎ ಮಾದಕ ವಸ್ತು ಮಾರಾಟ : ಇಬ್ಬರ ಬಂಧನ…!
ಮಂಗಳೂರು: ನಗರದಲ್ಲಿ ಅಕ್ರಮವಾಗಿ ಎಂಡಿಎಂಎ ಮಾದಕ ವಸ್ತುವನ್ನು ಸಾರ್ವಜನಿಕರಿಗೆ ಮಾರಾಟ ಮಾಡುತ್ತಿದ್ದ ಇಬ್ಬರು ವ್ಯಕ್ತಿಗಳನ್ನು ಉಳ್ಳಾಲ ಪೊಲೀಸ್ ಠಾಣಾ ವ್ಯಾಪ್ತಿಯ ತಲಪಾಡಿ ಕೆ ಸಿ ರೋಡ್ ನ ರಾಷ್ಟ್ರೀಯ ಹೆದ್ದಾರಿ 66ರ ಬಳಿಯಿಂದ ಪೊಲೀಸರು ವಶಕ್ಕೆ ಪಡೆದಿದ್ದಾರೆ ಎಂದು ತಿಳಿದು ಬಂದಿದೆ.
ಬಂಧಿತ ಆರೋಪಿಗಳು ಕೇರಳ ಮೂಲದ ಮುಸ್ತಫಾ (37) ಮತ್ತು ಶಂಶುದ್ದೀನ್ ಎ (38) ಎಂದು ತಿಳಿದು ಬಂದಿದೆ.
ಎಂಡಿಎಂಎ ಮಾದಕ ವಸ್ತುವನ್ನು ಸಾರ್ವಜನಿಕರಿಗೆ ಮಾರಾಟ ಮಾಡುತ್ತಿದ್ದಾರೆಂದು ಬಂದ ಖಚಿತ ಮಾಹಿತಿ ಮೇರೆಗೆ ಸ್ಥಳಕ್ಕೆ ದಾಳಿ ನಡೆಸಿದ ಮಂಗಳೂರು ಸಿಸಿಬಿ ಪೊಲೀಸರು ಇಬ್ಬರು ಆರೋಪಿಗಳನ್ನು ದಸ್ತಗಿರಿ ಮಾಡಿ, ಆರೋಪಿಗಳಿಂದ 75 ಸಾವಿರ ರೂ ಮೌಲ್ಯದ 15 ಗ್ರಾಂ ನಿಷೇಧಿತ ಎಂಡಿಎಂಎ ಮಾದಕ ವಸ್ತು, ಡಿಜಿಟಲ್ ತೂಕ ಮಾಪನ, ಹಾಗೂ ಮೊಬೈಲ್ ಫೋನ್ ಗಳನ್ನು ವಶಪಡಿಸಿಕೊಳ್ಳಲಾಗಿದ್ದು, ವಶಪಡಿಸಿಕೊಂಡ ಸೊತ್ತುಗಳ ಒಟ್ಟು ಮೌಲ್ಯ- 95,000 ರೂ ಎಂದು ಅಂದಾಜಿಸಲಾಗಿದೆ.
ಇನ್ನು ಮಂಗಳೂರು ಪೊಲೀಸ್ ಆಯುಕ್ತ ಅನುಪಮ್ ಅಗರ್ವಾಲ್ ಐಪಿಎಸ್ ರವರ ಮಾರ್ಗದರ್ಶನದಂತೆ ಕಾನೂನು ಮತ್ತು ಸುವ್ಯವಸ್ಥೆಯ ಡಿಸಿಪಿಸಿದ್ದಾರ್ಥ ಗೋಯಲ್ ಐಪಿಎಸ್ ಮತ್ತು ಅಪರಾಧ ಮತ್ತು ಸಂಚಾರ ವಿಭಾಗದ ಡಿಸಿಪಿ ದಿನೇಶ್ ಕುಮಾರ್ ಅವರ ನಿರ್ದೇಶನದಂತೆ ಮಂಗಳೂರು ಸಿಸಿಬಿ ಘಟಕದ ಎಸಿಪಿ ಪಿ.ಎ.ಹೆಗಡೆ ರವರ ನೇತೃತ್ವದಲ್ಲಿ ಕಾರ್ಯಚರಣೆ ನಡೆದಿದೆ ಎಂದು ತಿಳಿಯಲಾಗಿದೆ.