ನಾಡಿನ ಸಮಸ್ತ ಜನತೆಗೆ ,ನಮ್ಮ ಎಲ್ಲಾ ಗ್ರಾಹಕರಿಗೆ,ಜಾಹೀರಾತುದಾರರಿಗೆ "ಕ್ರಿಸ್ಮಸ್" ಹಬ್ಬ ಹಾಗೂ ಹೊಸವರುಷದ ಶುಭಾಶಯಗಳು...

Karnataka Weather: ವಾರಾಂತ್ಯದಲ್ಲಿ ರಾಜ್ಯದ ಈ ಜಿಲ್ಲೆಗಳಲ್ಲಿ ವ್ಯಾಪಕ ಮಳೆ

ಬೆಂಗಳೂರು: ಭಾರತೀಯ ಹವಾಮಾನ ಇಲಾಖೆ (ಐಎಂಡಿ) ಕರ್ನಾಟಕದಾದ್ಯಂತ ಶನಿವಾರ ಭಾರಿ ಮಳೆಯಾಗುವ ಮುನ್ಸೂಚನೆ ನೀಡಿದೆ. ರಾಜ್ಯ ರಾಜಧಾನಿ ಬೆಂಗಳೂರಿನಲ್ಲೂ ಭಾರಿ ಮಳೆಯಾಗಲಿದೆ.

ಕರಾವಳಿ ಜಿಲ್ಲೆಗಳಾದ ದಕ್ಷಿಣ ಕನ್ನಡ, ಉತ್ತರ ಕನ್ನಡ ಮತ್ತು ಉಡುಪಿ ಜಿಲ್ಲೆಗಳಲ್ಲಿ ಗುಡುಗು, ಮಿಂಚು ಸಹಿತ ಮಳೆಯಾಗಲಿದೆ.

ಮಧ್ಯ ಕರ್ನಾಟಕದ ಜಿಲ್ಲೆಗಳಾದ ದಾವಣಗೆರೆ, ಚಿತ್ರದುರ್ಗ, ದಕ್ಷಿಣ ಕರ್ನಾಟಕದ ಬೆಂಗಳೂರು ಗ್ರಾಮಾಂತರ, ಚಾಮರಾಜನಗರ, ತುಮಕೂರು, ಶಿವಮೊಗ್ಗ, ಮಂಡ್ಯ, ಮೈಸೂರು, ಚಿಕ್ಕಬಳ್ಳಾಪುರ, ಹಾಸನ ಮತ್ತು ಕೊಡಗು ಜಿಲ್ಲೆಗಳಲ್ಲಿ ಉತ್ತಮ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ನೆಚ್ಚರಿಕೆ ನೀಡಿದೆ.

ಉತ್ತರ ಕರ್ನಾಟಕದ ಬೆಳಗಾವಿ, ಬೀದರ್, ಧಾರವಾಡ, ಗದಗ, ಹಾವೇರಿ, ಕೊಪ್ಪಳ, ವಿಜಯಪುರ ಜಿಲ್ಲೆಗಳಲ್ಲಿ ಗುಡುಗು, ಮಿಂಚು ಸಹಿತ ಮಳೆಯಾಗಲಿದೆ.

No Comments

Leave A Comment