ಉಡುಪಿ ಶ್ರೀಲಕ್ಷ್ಮೀವೆ೦ಕಟೇಶ ದೇವಸ್ಥಾನದಲ್ಲಿ ನವೆ೦ಬರ್ 13ರ೦ದು ವಿಶ್ವರೂಪದರ್ಶನ ಕಾರ್ಯಕ್ರಮವು ಬೆಳಿಗ್ಗೆ 5ಗ೦ಟೆಗೆ ಜರಗಲಿದೆ. ಮತ್ತು 18ಹಾಗೂ 19ರ೦ದು ಲಕ್ಷ ದೀಪೋತ್ಸವವು ಜರಗಲಿದೆ....
Karnataka Weather: ವಾರಾಂತ್ಯದಲ್ಲಿ ರಾಜ್ಯದ ಈ ಜಿಲ್ಲೆಗಳಲ್ಲಿ ವ್ಯಾಪಕ ಮಳೆ
ಬೆಂಗಳೂರು: ಭಾರತೀಯ ಹವಾಮಾನ ಇಲಾಖೆ (ಐಎಂಡಿ) ಕರ್ನಾಟಕದಾದ್ಯಂತ ಶನಿವಾರ ಭಾರಿ ಮಳೆಯಾಗುವ ಮುನ್ಸೂಚನೆ ನೀಡಿದೆ. ರಾಜ್ಯ ರಾಜಧಾನಿ ಬೆಂಗಳೂರಿನಲ್ಲೂ ಭಾರಿ ಮಳೆಯಾಗಲಿದೆ.
ಕರಾವಳಿ ಜಿಲ್ಲೆಗಳಾದ ದಕ್ಷಿಣ ಕನ್ನಡ, ಉತ್ತರ ಕನ್ನಡ ಮತ್ತು ಉಡುಪಿ ಜಿಲ್ಲೆಗಳಲ್ಲಿ ಗುಡುಗು, ಮಿಂಚು ಸಹಿತ ಮಳೆಯಾಗಲಿದೆ.
ಮಧ್ಯ ಕರ್ನಾಟಕದ ಜಿಲ್ಲೆಗಳಾದ ದಾವಣಗೆರೆ, ಚಿತ್ರದುರ್ಗ, ದಕ್ಷಿಣ ಕರ್ನಾಟಕದ ಬೆಂಗಳೂರು ಗ್ರಾಮಾಂತರ, ಚಾಮರಾಜನಗರ, ತುಮಕೂರು, ಶಿವಮೊಗ್ಗ, ಮಂಡ್ಯ, ಮೈಸೂರು, ಚಿಕ್ಕಬಳ್ಳಾಪುರ, ಹಾಸನ ಮತ್ತು ಕೊಡಗು ಜಿಲ್ಲೆಗಳಲ್ಲಿ ಉತ್ತಮ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ನೆಚ್ಚರಿಕೆ ನೀಡಿದೆ.
ಉತ್ತರ ಕರ್ನಾಟಕದ ಬೆಳಗಾವಿ, ಬೀದರ್, ಧಾರವಾಡ, ಗದಗ, ಹಾವೇರಿ, ಕೊಪ್ಪಳ, ವಿಜಯಪುರ ಜಿಲ್ಲೆಗಳಲ್ಲಿ ಗುಡುಗು, ಮಿಂಚು ಸಹಿತ ಮಳೆಯಾಗಲಿದೆ.