ದ.ಕ. ಜಿಲ್ಲೆಯ ಮೂವರಿಗೆ ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ರಾಷ್ಟ್ರೀಯ ಪ್ರಶಸ್ತಿ...ಪ್ರಧಾನ ಮಂತ್ರಿ ಯೋಜನೆಗಳಿಗೆ ಮರುನಾಮಕರಣ ಮಾಡದಂತೆ ರಾಜ್ಯಗಳಿಗೆ ಕೇಂದ್ರ ಸರಕಾರದ ಆಗ್ರಹ...VHP ಕಾರ್ಯಕ್ರಮದಲ್ಲಿ ವಿವಾದಾತ್ಮಕ ಹೇಳಿಕೆ: ಸುಪ್ರೀಂಕೋರ್ಟ್ ಕೊಲಿಜಿಯಂ ಮುಂದೆ ನ್ಯಾ. ಶೇಖರ್ ಯಾದವ್ ಹಾಜರಾಗುವ ಸಾಧ್ಯತೆ

ಪದ್ಮಪ್ರಿಯ ನಾಪತ್ತೆ ಹಾಗೂ ಆತ್ಮಹತ್ಯೆ ಪ್ರಕರಣ : ಅತುಲ್ ರಾವ್ ಗೆ ಜೈಲು ಶಿಕ್ಷೆ ಮತ್ತು ದಂಡ

ಉಡುಪಿ : ಮಾಜಿ ಶಾಸಕ ರಘುಪತಿ ಭಟ್ ಅವರ ಪತ್ನಿ ಪದ್ಮಪ್ರಿಯ ನಾಪತ್ತೆ ಹಾಗೂ ಆತ್ಮಹತ್ಯೆ ಪ್ರಕರಣದಲ್ಲಿ ಆರೋಪಿ ಅತುಲ್ ರಾವ್ ಗೆ ಒಂದು ವರ್ಷ ಜೈಲು ಮತ್ತು ದಂಡ ವಿಧಿಸಲಾಗಿದೆ ಎಂದು ತಿಳಿದು ಬಂದಿದೆ.

ಉಡುಪಿ ಜಿಲ್ಲಾ ಸಿಜೆಎಂ ನ್ಯಾಯಾಲಯದಿಂದ ಮಹತ್ವದ ಆದೇಶ ಎಂದು ತಿಳಿಯಲಾಗಿದೆ.

ಮೋಸ, ವಂಚನೆ ,ನಕಲಿ ದಾಖಲೆ ಸೃಷ್ಟಿ ಆರೋಪದಡಿ ದೂರು ದಾಖಲಾಗಿತ್ತು, ಜೂನ್ 10, 2008 ರಂದು ಈ ಪ್ರಕರಣ ನಡೆದಿತ್ತು ‌

ದೆಹಲಿಯಲ್ಲಿ ಪದ್ಮಪ್ರಿಯ ಅವರ ಮೃತದೇಹ ಆತ್ಮಹತ್ಯೆ ಮಾಡಿಕೊಂಡ ಸ್ಥಿತಿಯಲ್ಲಿ ಪತ್ತೆಯಾಗಿತ್ತು.ಅತುಲ್ ರಾವ್ ಪದ್ಮಪ್ರಿಯ ದೆಹಲಿಗೆ ತೆರಳಲು ಅನುಕೂಲ ಮಾಡಿಕೊಟ್ಟಿದ್ದ ಎನ್ನಲಾಗಿದೆ.

ಪ್ರಕರಣದಲ್ಲಿ ಮಣಿಪಾಲ ಠಾಣಾ ಪೊಲೀಸ್ ಹಾಗೂ ಸಿ ಓ ಡಿ ತನಿಖೆ ನಡೆಸಿದ್ದರು.2009ರಲ್ಲಿ ಅಂತಿಮ ಚಾರ್ಜ್ ಶೀಟ್ ಸಲ್ಲಿಸಲಾಗಿತ್ತು

ಅಂದು ಶಾಸಕರಾಗಿದ್ದ ರಘುಪತಿ ಭಟ್ ನೀಡಿದ ದೂರಿನ ಆಧಾರದಲ್ಲಿ ಪ್ರಕರಣ ದಾಖಲಾಗಿತ್ತು.

ಪದ್ಮಪ್ರಿಯ ಅಪಹರಣವಾಗಿದೆ ಎಂಬಂತೆ ಬಿಂಬಿಸಿ ಆಕೆಯನ್ನು ದೆಹಲಿಗೆ ಕರೆದೊಯ್ದಿದ್ದ ಅತುಲ್‌.ಪದ್ಮಪ್ರಿಯ ದೆಹಲಿಗೆ ತೆರಳಲು ಅತುಲ್ ನಕಲಿ ದಾಖಲೆ ಸೃಷ್ಟಿಸಿದ್ದ ಎಂದು ತಿಳಿಯಲಾಗಿದೆ.

ಈಗ ಈ ಪ್ರಕರಣದಲ್ಲಿ ಉಡುಪಿ ಜಿಲ್ಲಾ ನ್ಯಾಯಾಲಯ ಅತುಲ್ ರಾವ್ ಗೆ ಒಂದು ವರ್ಷ ಜೈಲು ಮತ್ತು ದಂಡ ವಿಧಿಸಿದೆ.

No Comments

Leave A Comment