ದ.ಕ. ಜಿಲ್ಲೆಯ ಮೂವರಿಗೆ ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ರಾಷ್ಟ್ರೀಯ ಪ್ರಶಸ್ತಿ...ಪ್ರಧಾನ ಮಂತ್ರಿ ಯೋಜನೆಗಳಿಗೆ ಮರುನಾಮಕರಣ ಮಾಡದಂತೆ ರಾಜ್ಯಗಳಿಗೆ ಕೇಂದ್ರ ಸರಕಾರದ ಆಗ್ರಹ...VHP ಕಾರ್ಯಕ್ರಮದಲ್ಲಿ ವಿವಾದಾತ್ಮಕ ಹೇಳಿಕೆ: ಸುಪ್ರೀಂಕೋರ್ಟ್ ಕೊಲಿಜಿಯಂ ಮುಂದೆ ನ್ಯಾ. ಶೇಖರ್ ಯಾದವ್ ಹಾಜರಾಗುವ ಸಾಧ್ಯತೆ
ನಾಯಿ ಕಚ್ಚಿದ ಪ್ರಕರಣ: ನಟ ದರ್ಶನ್ ಗೆ ನೋಟಿಸ್ ಜಾರಿ
ಬೆಂಗಳೂರು: ಮಹಿಳೆಗೆ ನಾಯಿ ಕಚ್ಚಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಚಾಲೆಂಜಿಂಗ್ ಸ್ಟಾರ್ ದರ್ಶನ್ ಅವರಿಗೆ ಆರ್’ಆರ್ ನಗರ ಪೊಲೀಸರು ನೋಟಿಸ್ ಜಾರಿ ಮಾಡಿದ್ದಾರೆ.
ಮೂರು ದಿನದ ಒಳಗೆ ವಿಚಾರಣೆಗೆ ಹಾಜರಾಗುವಂತೆ ನೋಟಿಸ್’ನಲ್ಲಿ ಸೂಚನೆ ನೀಡಿದ್ದಾರೆಂದು ತಿಳಿದುಬಂದಿದೆ.
ಪ್ರಕರಣ ಸಂಬಂಧ ನಾಯಿಯ ಕೇರ್ ಟೇಕರ್ ಹೇಮಂತ್ ಅವರನ್ನು ವಿಚಾರಣೆ ಮಾಡಿರುವ ಪೊಲೀಸರು, ಇದೀಗ ದರ್ಶನ್ ಅವರಿಗೆ ನೋಟಿಸ್ ಜಾರಿ ಮಾಡಿದ್ದಾರೆ.
ದರ್ಶನ್ ಮನೆಯ ನಾಯಿಗಳು ಮಹಿಳೆಯೊಬ್ಬರ ಮೇಲೆ ಎರಗಿ ಕಚ್ಚಿದ ಸಂಬಂಧ ಐಪಿಸಿ 289ರ ಅಡಿ ನಾಯಿ (Dog) ನೋಡಿಕೊಳ್ಳುತ್ತಿದ್ದವನ ಮೇಲೆ ಮತ್ತು ನಟ ದರ್ಶನ್ ವಿರುದ್ಧ ಕೇಸ್ ದಾಖಲಾಗಿತ್ತು.
ದೂರುದಾರ ಅಮಿತಾ ಜಿಂದಾಲ್ ಅವರು, ಕಳೆದ ಅಕ್ಟೋಬರ್ 28 ರಂದು ಕಾರ್ಯಕ್ರಮವೊಂದಕ್ಕೆ ತೆರಳುವ ವೇಳೆ ನಟ ದರ್ಶನ್ ಅವರ ಮನೆಯ ಎದುರಿನ ಖಾಲಿ ಸ್ಥಳದಲ್ಲಿದ್ದ ತಮ್ಮ ಕಾರು ನಿಲ್ಲಿಸಿ ತೆರಳಿದ್ದರು. ಕಾರ್ಯಕ್ರಮ ಮುಗಿಸಿ ಕಾರು ತೆಗೆಯಲು ಬಂದಾಗ ಮೂರು ನಾಯಿಗಳ ಪೈಕಿ ಎರಡನ್ನು ಕಟ್ಟಲಾಗಿತ್ತು. ಒಂದು ನಾಯಿ ದಾಳಿ ನಡೆಸಿದೆ ಎಂದು ದೂರು ನೀಡಿದ್ದರು.