ಉಡುಪಿ ಶ್ರೀಲಕ್ಷ್ಮೀವೆ೦ಕಟೇಶ ದೇವಸ್ಥಾನದಲ್ಲಿ ಜನವರಿ 29ರಿ೦ದ 125 ದಿನಗಳಕಾಲ ನಿರ೦ತರ ಅಹೋರಾತ್ರೆ ಭಜನಾ ಕಾರ್ಯಕ್ರಮವು ಜರಗಲಿದೆ. ಭಜನಾ ಕಾರ್ಯಕ್ರಮವನ್ನು ಕಾಶೀಮಠ ಶ್ರೀಶ್ರೀಸ೦ಯಮೀ೦ದ್ರ ತೀರ್ಥಶ್ರೀಪಾದರು ದೀಪಪ್ರಜ್ವಲನೆ ಮಾಡುವುದರೊ೦ದಿಗೆ ಭಜನಾ ಕಾರ್ಯಕ್ರಮಕ್ಕೆ ಚಾಲನೆ ನೀಡಲಿದ್ದಾರೆ.
ತೆಲಂಗಾಣ ಕಾಂಗ್ರೆಸ್ ಆರು ಗ್ಯಾರಂಟಿ ಘೋಷಣೆ- ಪ್ರತಿ ತಿಂಗಳು ಅತ್ತೆಗೆ 4,000 ರೂ. ಸೊಸೆಗೆ 2,500 ರೂ.
ಹೈದರಾಬಾದ್: ನ 11: ಇದೀಗ ಪಂಚರಾಜ್ಯ ಚುನಾವಣೆಯಲ್ಲಿ ಕಾಂಗ್ರೇಸ್‌ನ ಗ್ಯಾರಂಟಿಗಳು ಸಖತ್ ಸದ್ದು ಮಾಡ್ತಿವೆ. ತೆಲಂಗಾಣದಲ್ಲಿ ಅಧಿಕಾರದ ಗದ್ದುಗೆ ಏರಲು ಕರ್ನಾಟಕ ಮಾದರಿಯಲ್ಲೇ ಕಾಂಗ್ರೆಸ್ ಪಕ್ಷ ಗ್ಯಾರಂಟಿಗಳ ಮೊರೆ ಹೋಗಿದೆ.
ಚುನಾವಣೆಯ ಹಿನ್ನಲೆ ತೆಲಂಗಾಣ ಕಾಂಗ್ರೆಸ್ ಅಧ್ಯಕ್ಷ ರೇವಂತ್ ರೆಡ್ಡಿ ಆರು ಗ್ಯಾರಂಟಿಗಳನ್ನು ಘೋಷಿಸಿದ್ದಾರೆ. ಪ್ರತಿ ತಿಂಗಳು ಅತ್ತೆಗೆ 4,000 ರೂ. ಸೊಸೆಗೆ 2,500 ರೂ. ಪ್ರತಿ ಹೆಣ್ಣುಮಗುವಿನ ಖಾತೆಗೆ ಪ್ರತಿ ತಿಂಗಳು 2,500 ರೂ. (ಮಹಾಲಕ್ಷ್ಮಿ ಯೋಜನೆ),ಪಿಂಚಣಿ ಮೊತ್ತ 2,000 ರೂ.ನಿಂದ 4,000 ರೂ.ಗೆ ಹೆಚ್ಚಳ, 500 ರೂಪಾಯಿಗೆ ಒಂದು ಗ್ಯಾಸ್ ಸಿಲಿಂಡರ್, ಮನೆ ನಿರ್ಮಾಣಕ್ಕೆ 5 ಲಕ್ಷ ರೂ. ನೆರವು ಹೀಗೆ ತೆಲಂಗಾಣ ಕಾಂಗ್ರೆಸ್‍ನಲ್ಲಿ ಆರು ಗ್ಯಾರಂಟಿಯನ್ನು ಘೋಷಣೆ ಮಾಡಿದೆ.
ಕಾಮಾರೆಡ್ಡಿ ಕ್ಷೇತ್ರದಲ್ಲಿ ರೇವಂತ್ ರೆಡ್ಡಿ ಪರ ಸಿಎಂ ಸಿದ್ದರಾಮಯ್ಯ ಪ್ರಚಾರ ನಡೆಸಿದ್ದರು.ಕಾಂಗ್ರೆಸ್ ಅಧಿಕಾರಕ್ಕೆ ಬಂದ ನೂರು ದಿನದಲ್ಲಿ ಗ್ಯಾರಂಟಿಗಳನ್ನು ಜಾರಿ ಮಾಡಲಾಗುತ್ತೆ ಎಂಬ ಭರವಸೆಯನ್ನು ಸಿಎಂ ಸಿದ್ದರಾಮಯ್ಯ ನೀಡಿದರು. ಕೆಸಿಆರ್ ಕರ್ನಾಟಕಕ್ಕೆ ಬಂದು ಗ್ಯಾರಂಟಿಗಳ ಜಾರಿಯನ್ನು ನೋಡಲಿ ಎಂದು ಹೇಳಿದರು.