Log In
BREAKING NEWS >
ನವೆ೦ಬರ್ 27ರ೦ದು ಕಲ್ಯಾಣಪುರ ಶ್ರೀವೆ೦ಕಟರಮಣ ದೇವಸ್ಥಾನದಲ್ಲಿ ದೀಪೋತ್ಸವ ಕಾರ್ಯಕ್ರಮ ಜರಗಲಿದೆ...

ಉಡುಪಿಯಲ್ಲಿ ಬೆಳಕಿನ ಹಬ್ಬ ದೀಪಾವಳಿಯ ಹೊಸ್ತಿಲಲ್ಲೇ ಭಯಾನಕ ಘಟನೆ ಚಾಕುವಿನಿಂದ ಇರಿದು ಒಂದೇ ಕುಟುಂಬದ ನಾಲ್ವರ ಬರ್ಬರ ಹತ್ಯೆ

ಉಡುಪಿ: ಉಡುಪಿಯ ಹಂಪನಕಟ್ಟೆ ಸಮೀಪದ ನೇಜಾರಿನ ತೃಪ್ತಿ ಲೇಔಟ್‌ನಲ್ಲಿ ಭಾನುವಾರ ಒಂದೇ ಕುಟುಂಬದ ನಾಲ್ವರನ್ನು ಬರ್ಬರವಾಗಿ ಹತ್ಯೆ ಮಾಡಲಾಗಿದೆ.

ಚಾಕುವಿನಿಂದ ಇರಿದು ಒಂದೇ ಕುಟುಂಬದ ನಾಲ್ವರ ಬರ್ಬರ ಹತ್ಯೆ ನಡೆದಿರುವಂತಹ ಘಟನೆ ಉಡುಪಿ ತಾಲೂಕಿನ ನೇಜಾರು ಸಮೀಪದ ತೃಪ್ತಿನಗರದಲ್ಲಿ ನಡೆದಿದೆ. ತಾಯಿ, ಮೂವರು ಮಕ್ಕಳನ್ನು ಕೊಲೆಗೈದು ದುಷ್ಕರ್ಮಿ ಪರಾರಿ ಆಗಿದ್ದಾನೆ.

ಹಸೀನಾ( 48), ಮಕ್ಕಳಾದ ಅಫ್ಸಾನ್(23), ಅಯ್ನಾಜ್ (20), ಅಸೀಮ್ (14) ಕೊಲೆಯಾದವರು. ಮೃತ ಹಸೀನಾ ಅವರ ಅತ್ತೆಗೆ ಗಂಭೀರ ಗಾಯಗಳಾಗಿದ್ದು ಆಸ್ಪತ್ರೆಗೆ ದಾಖಲಿಸಲಾಗಿದೆ.

ನಾಲ್ವರನ್ನು ಚೂರಿಯಿಂದ ಇರಿದು ಕೊಲೆ ಮಾಡಲಾಗಿದೆ. ಯಾವ ಉದ್ದೇಶಕ್ಕೆ ಕೊಲೆಯಾಗಿದೆ ಎಂಬುದು ತನಿಖೆಯಿಂದ ತಿಳಿಯಬೇಕಿದೆ. ಮನೆಯಲ್ಲಿ ಯಾವ ವಸ್ತುಗಳು ಕಳವು ನಡೆದಿಲ್ಲ. ಎಲ್ಲ ಆಯಾಮಗಳಿಂದ ತನಿಖೆ ನಡೆಸುತ್ತಿದ್ದು, ಶೀಘ್ರದಲ್ಲೇ ಆರೋಪಿಗಳನ್ನು ಬಂಧಿಸಲಾಗುವುದು ಎಂದು ಎಸ್‌ಪಿ ಅರುಣ್ ತಿಳಿಸಿದ್ದಾರೆ.

ಇಂದು ಮುಂಜಾನೆ 8.30 ರ ವೇಳೆಯಲ್ಲಿ ಘಟನೆ ನಡೆದಿದೆ. ಮಾಸ್ಕ್ ಹಾಕಿಕೊಂಡು ಬಂದು ಏಕಾಏಕಿ ಮನೆಗೆ ನುಗ್ಗಿದ್ದಾರೆ. ಮೊದಲು ಮಹಿಳೆ ಹಾಗೂ ಮಕ್ಕಳಾದ ಹಸಿನಾ, ಅಫಫಾನ್, ಐನಾಜ್​ಗೆ ಚಾಕುವಿನಿಂದ ಇರಿಯಲಾಗಿದೆ. ಸದ್ದು ಕೇಳಿ ಆಟವಾಡುತ್ತಿದ್ದ ಆಸೀಮ್ ಹೊರ ಬರುತ್ತಿದ್ದಂತೆ ಇರಿದು ಕೊಂದಿದ್ದಾರೆ.

ಬೊಬ್ಬೆ ಕೇಳಿ ಹೊರಗಡೆ ಬಂದ ಪಕ್ಕದ ಮನೆ ಯುವತಿಯನ್ನು ಬೆದರಿಸಿ ಸ್ಥಳದಿಂದ ಕಾಲ್ಕಿತ್ತಿದ್ದಾರೆ. ಮನೆಯೊಳಗಿದ್ದ ಅತ್ತೆಗೂ ತೀವ್ರ ತರದ ಗಾಯಗಳಾಗಿವೆ. ಪತಿ ವಿದೇಶದಲ್ಲಿ ಉದ್ಯೋಗ ಮಾಡುತ್ತಿದ್ದಾರೆ.

ಸ್ಥಳಕ್ಕೆ ಎಸ್​.ಪಿ ಅರುಣ್ ಕುಮಾರ್ ಭೇಟಿ ನೀಡಿ ಪರಿಶೀಲನೆ ಮಾಡಿದ್ದಾರೆ.

No Comments

Leave A Comment