ದ.ಕ. ಜಿಲ್ಲೆಯ ಮೂವರಿಗೆ ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ರಾಷ್ಟ್ರೀಯ ಪ್ರಶಸ್ತಿ...ಪ್ರಧಾನ ಮಂತ್ರಿ ಯೋಜನೆಗಳಿಗೆ ಮರುನಾಮಕರಣ ಮಾಡದಂತೆ ರಾಜ್ಯಗಳಿಗೆ ಕೇಂದ್ರ ಸರಕಾರದ ಆಗ್ರಹ...VHP ಕಾರ್ಯಕ್ರಮದಲ್ಲಿ ವಿವಾದಾತ್ಮಕ ಹೇಳಿಕೆ: ಸುಪ್ರೀಂಕೋರ್ಟ್ ಕೊಲಿಜಿಯಂ ಮುಂದೆ ನ್ಯಾ. ಶೇಖರ್ ಯಾದವ್ ಹಾಜರಾಗುವ ಸಾಧ್ಯತೆ

ಚಿಟ್ಟಾಣಿ ಸಂಸ್ಮರಣಾ ಯಕ್ಷಗಾನ ಸಪ್ತಾಹ: ಹಿರಿಯ ಹವ್ಯಾಸಿ ಕಲಾವಿದರಿಬ್ಬರಿಗೆ ಪ್ರಶಸ್ತಿ ಪ್ರದಾನ

ಉಡುಪಿ:ಶ್ರೀಕೃಷ್ಣಮಠದ ರಾಜಾಂಗಣದಲ್ಲಿ,ಪರ್ಯಾಯ ಶ್ರೀಕೃಷ್ಣಾಪುರ ಮಠದ ಆಶ್ರಯದಲ್ಲಿ,ಶ್ರೀವೀರಾಂಜನೇಯ ಯಕ್ಷಮಿತ್ರ ಮಂಡಳಿ,ಬಂಗಾರಮಕ್ಕಿ ಮತ್ತು ಚಿಟ್ಟಾಣಿ ಅಭಿಮಾನಿ ಬಳಗ ಉಡುಪಿ ಇವರ ಸಹಯೋಗದೊಂದಿಗೆ ನಡೆದ ಚಿಟ್ಟಾಣಿ ಸಂಸ್ಮರಣಾ ಯಕ್ಷಗಾನ ಸಪ್ತಾಹ ಕಾರ್ಯಮದ ಸಮಾರೋಪ ಸಮಾರಂಭದಲ್ಲಿ ಪರ್ಯಾಯ ಶ್ರೀಕೃಷ್ಣಾಪುರ ಮಠಾಧೀಶರಾದ ಶ್ರೀವಿದ್ಯಾಸಾಗರತೀರ್ಥ ಶ್ರೀಪಾದರು,ಪದ್ಮಶ್ರೀ ಚಿಟ್ಟಾಣಿ ರಾಮಚಂದ್ರ ಹೆಗಡೆ ಪ್ರಶಸ್ತಿಯನ್ನು ಹಿರಿಯ ಹವ್ಯಾಸಿ ಕಲಾವಿದರಾದ ಪ್ರೊ.ಎಂ.ಎಲ್.ಸಾಮಗ ಇವರಿಗೆ ಮತ್ತು ಟಿ,ವಿ.ರಾವ್ ಪ್ರಶಸ್ತಿಯನ್ನು ಹವ್ಯಾಸಿ ಕಲಾವಿದೆ ಬಿ.ಕೆ.ಸುಮತಿ ರಾವ್ ಇವರಿಗೆ ಪ್ರದಾನ ಮಾಡಿ ಯಕ್ಷಗಾನದಲ್ಲಿ ತಮ್ಮದೇ ಛಾಪನ್ನು ಮೂಡಿಸಿ ಇತರರನ್ನು ಪ್ರೋತ್ಸಾಹಿಸಿದ ಚಿಟ್ಟಾಣಿಯವರ ಹೆಸರಿನಲ್ಲಿ ಇಂತಹ ಕಾರ್ಯಕ್ರಮಗಳನ್ನು ನಡೆಸುತ್ತಿರುವ ಅಭಿಮಾನಿಗಳು ಮತ್ತು ಪ್ರೇಕ್ಷಕರಿಗೂ ಭಗವಂತನ ಅನುಗ್ರಹವಾಗಲಿ ಎಂದು ಹಾರೈಸಿದರು.

ಸಮಾರಂಭದಲ್ಲಿ ಅಭ್ಯಾಗತರಾಗಿ ಹೈಟೆಕ್ ಮೆಡಿಕೇರ್ ಆಸ್ಪತ್ರೆಯ ಡಾ.ಟಿ.ಎಸ್.ರಾವ್ ಅವರು ಭಾಗವಹಿಸಿ ಉಡುಪಿ ಯಕ್ಷಗಾನ ಕಲಾರಂಗದ ಅಧ್ಯಕ್ಷರಾದ ಎಂ.ಗಂಗಾಧರ್ ರಾವ್,ಬಳಗದ ಅಧ್ಯಕ್ಷರಾದ ತಲ್ಲೂರು ಶಿವರಾಮ ಶೆಟ್ಟಿ,ಕಾರ್ಯದರ್ಶಿ ಎಂ.ಗೋಪಿಕೃಷ್ಣ ರಾವ್,ಸುಬ್ರಹ್ಮಣ್ಯ ಚಿಟ್ಟಾಣಿ ಉಪಸ್ಥಿತರಿದ್ದರು.

No Comments

Leave A Comment