ನಾಡಿನ ಸಮಸ್ತ ಜನತೆಗೆ ,ನಮ್ಮ ಎಲ್ಲಾ ಗ್ರಾಹಕರಿಗೆ,ಜಾಹೀರಾತುದಾರರಿಗೆ "ಕ್ರಿಸ್ಮಸ್" ಹಬ್ಬ ಹಾಗೂ ಹೊಸವರುಷದ ಶುಭಾಶಯಗಳು...

ಹಿಮಾಚಲ ಪ್ರದೇಶ:ಲೆಪ್ಚಾದಲ್ಲಿ ಯೋಧರೊಂದಿಗೆ ದೀಪಾವಳಿ ಆಚರಿಸಿದ ಪ್ರಧಾನಿ ಮೋದಿ

ಲೆಪ್ಚಾ (ಹಿಮಾಚಲ ಪ್ರದೇಶ): ಪ್ರತೀ ವರ್ಷ ದೀಪಾವಳಿ ಹಬ್ಬದ ವೇಳೆ ದೇಶದ ಗಡಿ ಕಾಯುವ ವೀರ ಯೋಧರ ಜೊತೆ ಹಬ್ಬ ಆಚರಿಸುವ ಪ್ರಧಾನಿ ಮೋದಿ, ಈ ಬಾರಿ ಕೂಡಾ ತಮ್ಮ ಪರಿಪಾಠವನ್ನು ಮುಂದುವರೆಸಿದ್ದಾರೆ. ಹಿಮಾಚಲ ಪ್ರದೇಶದ ಲೆಪ್ಚಾದಲ್ಲಿ ಪ್ರಧಾನಿ ಮೋದಿ ಅವರು ಭಾರತೀಯ ಸೇನೆಯ ಯೋಧರ ಜೊತೆ ದೀಪಾವಳಿ ಹಬ್ಬ ಆಚರಿಸಿದ್ದಾರೆ.

2022ರಲ್ಲಿ ಭಾರತ ಮತ್ತು ಪಾಕಿಸ್ತಾನ ಗಡಿಯ ಕಾರ್ಗಿಲ್‌ನಲ್ಲಿ ಸೈನಿಕರ ಜೊತೆ ದೀಪಾವಳಿ ಆಚರಣೆ ಮಾಡಿದ್ದ ಪ್ರಧಾನಿ ಮೋದಿ, 2023ರಲ್ಲಿ ಭಾರತ ಮತ್ತು ಚೀನಾ ಗಡಿಯ ಹಿಮಾಚಲ ಪ್ರದೇಶದ ಲೆಪ್ಚಾದಲ್ಲಿ ದೀಪಾವಳಿ ಸಂಭ್ರಮಾಚರಣೆ ನಡೆಸುವ ಮೂಲಕ ದೇಶದ ಗಮನ ಸೆಳೆದಿದ್ದಾರೆ.

ಭಾನುವಾರ ಬೆಳಗ್ಗೆಯೇ ಹಿಮಾಚಲ ಪ್ರದೇಶದ ಲೆಪ್ಚಾ ತಲುಪಿದ ಪ್ರಧಾನಿ ಮೋದಿ, ಗಡಿ ಭಾಗದ ಸೈನಿಕರಿಗೆ ಸಿಹಿ ಹಂಚಿ, ಉಡುಗೊರೆಗಳನ್ನು ನೀಡಿದರು. ಬಳಿಕ ಅವರೊಂದಿಗೆ ಜೊತೆ ಸಂವಾದ ನಡೆಸಿದರು.

 

ಈ ಕುರಿತಾದ ಫೋಟೋಗಳನ್ನೂ ಪ್ರಧಾನಿ ಮೋದಿ ಅವರು ಸಾಮಾಜಿಕ ಜಾಲತಾಣ ಟ್ವಿಟರ್ ನಲ್ಲಿ ಟ್ವೀಟ್ (ಎಕ್ಸ್) ಮಾಡಿದ್ದಾರೆ.

No Comments

Leave A Comment