ಉಡುಪಿಯ ತೆ೦ಕಪೇಟೆಯ ಶ್ರೀಲಕ್ಷ್ಮೀವೆ೦ಕಟೇಶ ದೇವಸ್ಥಾನದಲ್ಲಿ ಭಜನಾ ಶತಮಾನೋತ್ತರ ರಜತ ಮಹೋತ್ಸವದ ಅ೦ಗವಾಗಿ ಜನವರಿ 29ಬುಧವಾರದಿ೦ದ ಜೂನ್ 3ರ ತನಕ 125ದಿನಗಳ ಕಾಲ ನಿರ೦ತರ ಅಹೋರಾತ್ರಿ ಭಜನಾ ಭಜನಾ ಕಾರ್ಯಕ್ರಮವನ್ನು ಬುಧವಾರದ೦ದು ಕಾಶೀ ಮಠಾಧೀಶರಾದ ಶ್ರೀಮದ್ ಶ್ರೀಸ೦ಯಮೀ೦ದ್ರ ತೀರ್ಥಶ್ರೀಪಾದರು ಅದ್ದೂರಿ ಚಾಲನೆ ನೀಡಿದರು......
ಪ್ರಭಾಸ್ ನಟನೆಯ ‘ಸಲಾರ್: ಭಾಗ 1’ ಚಿತ್ರದ ಹೊಸ ಪೋಸ್ಟರ್ ರಿಲೀಸ್; ಟ್ರೇಲರ್ ಬಿಡುಗಡೆ ದಿನಾಂಕ ಘೋಷಣೆ
ಮುಂಬೈ: ದೀಪಾವಳಿಯನ್ನು ಹೆಚ್ಚು ವಿಶೇಷವಾಗಿಸಲು ‘ಸಲಾರ್: ಭಾಗ 1- ಕದನ ವಿರಾಮ’ ಚಿತ್ರತಂಡ ನಟ ಪ್ರಭಾಸ್ ಅವರ ಹೊಸ ಪೋಸ್ಟರ್ ಅನ್ನು ಹಂಚಿಕೊಂಡಿದ್ದು, ಟ್ರೈಲರ್ ಬಿಡುಗಡೆ ದಿನಾಂಕವನ್ನು ಘೋಷಿಸಿದ್ದಾರೆ.
ಅಧಿಕೃತ ಇನ್‌ಸ್ಟಾಗ್ರಾಮ್ ಖಾತೆಯಲ್ಲಿ ಚಿತ್ರ ನಿರ್ಮಾಣ ಸಂಸ್ಥೆ ಹೊಂಬಾಳೆ ಫಿಲ್ಮ್ಸ್ ಅಭಿಮಾನಿಗಳಿಗೆ ಸಿಹಿ ಸಿದ್ದಿಯೊಂದನ್ನು ನೀಡಿದೆ. ಹೊಸ ಪೋಸ್ಟರ್‌ನಲ್ಲಿ ಪ್ರಭಾಸ್ ಕಾರಿನ ಮೇಲೆ ಕೈಯಲ್ಲಿ ಗನ್ ಹಿಡಿದು ನಿಂತಿದ್ದಾರೆ.
ಪೋಸ್ಟರ್ ಅನ್ನು ಹಂಚಿಕೊಂಡಿರುವ ಹೊಂಬಾಳೆ ಫಿಲ್ಮ್ಸ್, ‘ಸ್ಫೋಟಕ ಸಂಭ್ರಮಾಚರಣೆಗೆ ಸಜ್ಜಾಗಿರಿ ಸಲಾರ್ ಚಿತ್ರದ ಟ್ರೇಲರ್ ಡಿಸೆಂಬರ್ 1 ರಂದು ರಾತ್ರಿ 7.19ಕ್ಕೆ ಸ್ಫೋಟಗೊಳ್ಳಲಿದೆ. ಎಲ್ಲರಿಗೂ ದೀಪಾವಳಿ ಹಬ್ಬದ ಶುಭಾಶಯಗಳು’ ಎಂದು ಬರೆದಿದೆ.
ಪ್ರಶಾಂತ್ ನೀಲ್ ನಿರ್ದೇಶನದ ಬಹುನಿರೀಕ್ಷಿತ ಚಿತ್ರದ ಟ್ರೇಲರ್ ಡಿಸೆಂಬರ್ 1 ರಂದು ಬಿಡುಗಡೆಗೆ ಸಿದ್ಧವಾಗಿದೆ.
ಈ ಸುದ್ದಿಯನ್ನು ಹಂಚಿಕೊಂಡ ತಕ್ಷಣ, ಪ್ರಭಾಸ್ ಅಭಿಮಾನಿಗಳು ಶುಭಾಶಯಗಳ ಮಳೆಯನ್ನೇ ಹರಿಸಿದ್ದಾರೆ.
ಬಳಕೆದಾರರಲ್ಲಿ ಒಬ್ಬರು, ‘ನಿಮ್ಮ ಮಾಸ್ ಕಂಬ್ಯಾಕ್‌ಗಾಗಿ ನಿರೀಕ್ಷಿಸಲಾಗುತ್ತಿದೆ ಅಣ್ಣಾ’ ಎಂದು ಬರೆದಿದ್ದಾರೆ. ಇನ್ನೊಬ್ಬ ಬಳಕೆದಾರರು, ‘ಇದು ಜಗತ್ತನ್ನು ಆಳುವ ಸಮಯ…’ ಎಂದಿದ್ದಾರೆ.
ಸಲಾರ್: ಭಾಗ 1- ಕದನ ವಿರಾಮವು ಭಾರತೀಯ ಚಿತ್ರರಂಗದ ಎರಡು ಶಕ್ತಿ ಕೇಂದ್ರಗಳಾದ ಕೆಜಿಎಫ್ ನಿರ್ದೇಶಕ ಪ್ರಶಾಂತ್ ನೀಲ್ ಮತ್ತು ‘ಬಾಹುಬಲಿ’ ಖ್ಯಾತಿಯ ನಟ ಪ್ರಭಾಸ್ ಅವರ ದೊಡ್ಡ ಸಹಯೋಗವಾಗಿದೆ. ಈ ಮೆಗಾ ಆ್ಯಕ್ಷನ್-ಪ್ಯಾಕ್ಡ್ ಸಿನಿಮೀಯ ಚಮತ್ಕಾರವನ್ನು ಉಂಟುಮಾಡಲು ಮೊದಲ ಬಾರಿಗೆ ಇಬ್ಬರು ಒಟ್ಟಿಗೆ ಬರುತ್ತಿದ್ದಾರೆ.
ಚಿತ್ರದಲ್ಲಿ ಪೃಥ್ವಿರಾಜ್ ಸುಕುಮಾರನ್, ಶ್ರುತಿ ಹಾಸನ್ ಮತ್ತು ಜಗಪತಿ ಬಾಬು ಪ್ರಮುಖ ಪಾತ್ರಗಳಲ್ಲಿ ನಟಿಸಿದ್ದಾರೆ. ಹೊಂಬಾಳೆ ಫಿಲ್ಮ್ಸ್ ಅಡಿಯಲ್ಲಿ ವಿಜಯ್ ಕಿರಗಂದೂರು ಚಿತ್ರವನ್ನು ನಿರ್ಮಿಸಿದ್ದಾರೆ.
ಡಿಸೆಂಬರ್ 22 ರಂದು ತೆಲುಗು, ಕನ್ನಡ, ಮಲಯಾಳಂ, ತಮಿಳು ಮತ್ತು ಹಿಂದಿ ಸೇರಿದಂತೆ 5 ಭಾಷೆಗಳಲ್ಲಿ ಸಲಾರ್ ಸಿನಿಮಾ ದೇಶದಾದ್ಯಂತ ಚಿತ್ರಮಂದಿರಗಳಲ್ಲಿ ಬಿಡುಗಡೆಯಾಗಲಿದೆ