ನಾಡಿನ ಸಮಸ್ತ ಜನತೆಗೆ ,ನಮ್ಮ ಎಲ್ಲಾ ಗ್ರಾಹಕರಿಗೆ,ಜಾಹೀರಾತುದಾರರಿಗೆ "ಕ್ರಿಸ್ಮಸ್" ಹಬ್ಬ ಹಾಗೂ ಹೊಸವರುಷದ ಶುಭಾಶಯಗಳು...

ಮಂಗಳೂರು: ಹಾಸ್ಟೆಲ್ ಕಟ್ಟಡದಿಂದ ಹಾರಿ MBBS ವಿದ್ಯಾರ್ಥಿನಿ ಆತ್ಮಹತ್ಯೆ

ಮಂಗಳೂರು:ನಗರದ ಖಾಸಗಿ ಶಿಕ್ಷಣ ಸಂಸ್ಥೆಯೊಂದರ ಎಂಬಿಬಿಎಸ್ ವ್ಯಾಸಂಗ ಮಾಡುತ್ತಿದ್ದ ವಿದ್ಯಾರ್ಥಿನಿಯೊಬ್ಬಳು ಹಾಸ್ಟೆಲ್ ಕಟ್ಟಡದ ಆರನೇ ಮಹಡಿಯಿಂದ ಹಾರಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಮೆಡಿಕಲ್ ಕಾಲೇಜು ಆವರಣದಲ್ಲಿ ನಡೆದಿದೆ.

ಮೃತಪಟ್ಟ ವಿದ್ಯಾರ್ಥಿನಿಯನ್ನು ಮೊದಲ ವರ್ಷದ ಎಂಬಿಬಿಎಸ್ ವ್ಯಾಸಂಗ ಮಾಡುತ್ತಿದ್ದ ಬೆಳಗಾವಿ ಜಿಲ್ಲೆಯ ಅಥಣಿಯ ಪ್ರಕೃತಿ ಶೆಟ್ಟಿ(20) ಎನ್ನಲಾಗಿದೆ.

ನಸುಕಿನ ವೇಳೆ ಮೂರು ಗಂಟೆ ವೇಳೆಗೆ ಈಕೆ ಕಾಲೇಜಿನ ಹಾಸ್ಟೆಲ್ ಕಟ್ಟಡದ ಆರನೇ ಮಹಡಿಯಿಂದ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎನ್ನಲಾಗಿದೆ. ತಾನು ದಪ್ಪಗಿದ್ದೇನೆ ಎಂದು ಮಾನಸಿಕ ಖಿನ್ನತೆಗೊಳಗಾಗಿ ಆಕೆ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ ಎಂದು ತಿಳಿದುಬಂದಿದೆ.

No Comments

Leave A Comment