Log In
BREAKING NEWS >
````````````ನಾಡಿನ ಸಮಸ್ತ ಜನತೆಗೆ,ನಮ್ಮ ಎಲ್ಲಾ ಜಾಹೀರಾತುದಾರರಿಗೆ,ಅಭಿಮಾನಿಗಳಿಗೆ ಹಾಗೂ ಓದುಗರಿಗೆ ಶ್ರೀ ಗೌರಿ-ಗಣೇಶನ ಹಬ್ಬದ ಶುಭಾಶಯಗಳು```````

‘ಟೈಗರ್ 3’: ಚಿತ್ರಮಂದಿರದೊಳಗೆ ಪಟಾಕಿ ಸಿಡಿಸಿ ಹುಚ್ಚಾಟ ಮೆರೆದ ಸಲ್ಮಾನ್ ಖಾನ್ ಅಭಿಮಾನಿಗಳು

ಬಾಲಿವುಡ್ ಸೂಪರ್ ಸ್ಟಾರ್ ಸಲ್ಮಾನ್ ಖಾನ್ ಹಾಗೂ ಕತ್ರಿನಾ ಕೈಫ್ ಅಭಿನಯದ ಬಹು ನಿರೀಕ್ಷಿತ ‘ಟೈಗರ್ 3’ ವೀಕ್ಷಣೆ ವೇಳೆ ಅಭಿಮಾನಿಗಳು ಹುಚ್ಚಾಟ ಮೆರೆದಿದ್ದಾರೆ.

ಚಿತ್ರಮಂದಿರದೊಳಗೆ ಪಟಾಕಿ ಸಿಡಿಸಿ ಅವಾಂತರಕ್ಕೆ ಕಾರಣರಾಗಿದ್ದಾರೆ. ಮಹಾರಾಷ್ಟ್ರದ ಮಾಲೆಗಾಂವ್ ನಲ್ಲಿ ಈ ಘಟನೆ ನಡೆದಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಇದರ ವಿಡಿಯೋ ಗಳು ವೈರಸ್ ಆಗಿವೆ.

ಮೋಹನ್ ಚಿತ್ರಮಂದಿರದೊಳಗೆ ಸಂಭ್ರಮಾಚರಣೆ ನಡೆಸುತ್ತಿದ್ದ ಸಲ್ಮಾನ್ ಖಾನ್ ಅಭಿಮಾನಿಗಳು ಪಟಾಕಿ ಸಿಡಿಸಿದ್ದಾರೆ. ಇದರಿಂದ ಸಿನಿಮಾ ನೋಡುತ್ತಿದ್ದವರ ಮೇಲೆ ಪಟಾಕಿ ಕಿಡಿಗಳು ಬಿದ್ದಿದ್ದು, ಚಿತ್ರಮಂದಿರದಿಂದ ಓಡಲು ಶುರು ಮಾಡಿದ್ದಾರೆ. ಈ ವೇಳೆ ಕಾಲ್ತುಳಿತದ ಸನ್ನಿವೇಶ ನಿರ್ಮಾಣವಾಯಿತು ಎಂದು ಅಪರಿಚಿತರೊಬ್ಬರು ಸಾಮಾಜಿಕ ಜಾಲತಾಣ ಎಕ್ಸ್ ನಲ್ಲಿ ಹಂಚಿಕೊಂಡಿದ್ದಾರೆ.

ಈ  ಪ್ರಕರಣಕ್ಕೆ ಸಂಬಂಧಿಸಿದಂತೆ ಎಫ್‌ಐಆರ್ ದಾಖಲಾಗಿದ್ದು, ಇಬ್ಬರನ್ನು ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

No Comments

Leave A Comment