ದ.ಕ. ಜಿಲ್ಲೆಯ ಮೂವರಿಗೆ ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ರಾಷ್ಟ್ರೀಯ ಪ್ರಶಸ್ತಿ...ಪ್ರಧಾನ ಮಂತ್ರಿ ಯೋಜನೆಗಳಿಗೆ ಮರುನಾಮಕರಣ ಮಾಡದಂತೆ ರಾಜ್ಯಗಳಿಗೆ ಕೇಂದ್ರ ಸರಕಾರದ ಆಗ್ರಹ...VHP ಕಾರ್ಯಕ್ರಮದಲ್ಲಿ ವಿವಾದಾತ್ಮಕ ಹೇಳಿಕೆ: ಸುಪ್ರೀಂಕೋರ್ಟ್ ಕೊಲಿಜಿಯಂ ಮುಂದೆ ನ್ಯಾ. ಶೇಖರ್ ಯಾದವ್ ಹಾಜರಾಗುವ ಸಾಧ್ಯತೆ

ಒಂದೇ ಕುಟುಂಬದ ನಾಲ್ವರ ಹತ್ಯೆ ಅತ್ಯಂತ ಅಮಾನುಷ ಕೃತ್ಯವಾಗಿದ್ದು ತೀವ್ರ ಖಂಡನೀಯ : ಪ್ರಖ್ಯಾತ್ ಶೆಟ್ಟಿ

ಉಡುಪಿ: ನಗರದ ಸಮೀಪದ ನೇಜಾರು ತೃಪ್ತಿ ಲೇ ಔಟ್ ನ ಮನೆಯೊಂದಕ್ಕೆ ನುಗ್ಗಿ ವ್ಯಕ್ತಿಯೊಬ್ಬ ತಾಯಿ ಮತ್ತು ಮೂವರು ಮಕ್ಕಳನ್ನು ಬರ್ಬರವಾಗಿ ಹತ್ಯೆಗೈದಿರುವುದು ಜಿಲ್ಲೆಯ ಇತಿಹಾಸದಲ್ಲೇ ಅತ್ಯಂತ ಭೀಕರ ಹತ್ಯಾಕಾಂಡವಾಗಿದ್ದು ಪ್ರತಿಯೊಬ್ಬರಲ್ಲಿ ಆತಂಕ ಸೃಷ್ಟಿಸುವಂತೆ ಮಾಡಿದೆ ಎಂದು ಉಡುಪಿ ಜಿಲ್ಲಾ ಕಾಂಗ್ರೆಸ್ ಉಪಾಧ್ಯಕ್ಷರಾದ ಪ್ರಖ್ಯಾತ್ ಶೆಟ್ಟಿ ಆಘಾತ ವ್ಯಕ್ತಪಡಿಸಿದ್ದಾರೆ.

ಬೇರೆ ರಾಜ್ಯಗಳಲ್ಲಿ ಹಾಗೂ ಕರ್ನಾಟಕದ ಬೇರೆ ಜಿಲ್ಲೆಗಳಲ್ಲಿ ಇಂತಹ ಕ್ರೂರ ಕೊಲೆಗಳು ನಡೆದಿರುವುದು ಮಾಧ್ಯಮಗಳಿಂದ ಕೇಳೀದ್ದು, ಅಂತಹುದೇ ಘಟನೆ ಸುಶಿಕ್ಷತರ ಜಿಲ್ಲೆಯಾದ ಉಡುಪಿಯಲ್ಲಿ ನಡೆದಿರುವುದು ಅತ್ಯಂತ ಕಳವಳಕಾರಿಯಾಗಿದೆ. ಇಡೀ ಕುಟುಂಬವನ್ನೇ ಭೀಕರ ರೀತಿಯಲ್ಲಿ ಕೊಲೆ ಮಾಡಿ ಸರ್ವನಾಶ ಮಾಡಿರುವುದು ಆರೋಪಿಯು ಎಂತಹ ಕ್ರೂರ ಮನಸ್ಥಿತಿಯನ್ನು ಹೊಂದಿದ್ದಾನೆ ಎನ್ನುವುದು ಊಹಿಸಲು ಕೂಡ ಸಾಧ್ಯವಿಲ್ಲದಂತಾಗಿದೆ. ಈ ಘಟನೆಯನ್ನು ನೋಡುವಾಗ ನಿಜವಾಗಿಯೂ ಪ್ರತಿಯೊಬ್ಬರಲ್ಲೂ ಆತಂಕ ಮೂಡಲು ಕಾರಣವಾಗಿದೆ. ಒಂದೇ ಕುಟುಂಬದ ನಾಲ್ವರ ಹತ್ಯೆ ಅತ್ಯಂತ  ಅಮಾನುಷ ಕೃತ್ಯವಾಗಿದ್ದು ತೀವ್ರ ಖಂಡನೀಯವಾಗಿದೆ.

ಈ ಪ್ರಕರಣದ ಬಗ್ಗೆ ಪೋಲಿಸರು ಈಗಾಗಲೇ ತನಿಖೆಯನ್ನು ಚುರುಕುಗೊಳಿಸಿದ್ದು, ಆದಷ್ಟು ಬೇಗ ಆರೋಪಿಯನ್ನು ಪತ್ತೆ ಹಚ್ಚುವ ಕೆಲಸ ಮಾಡಬೇಕಿದೆ. ಈ ಕೃತ್ಯ ಇಡೀ ಜಿಲ್ಲೆಗೆ ದೊಡ್ಡ ಕಳಂಕವಾಗಿದ್ದು ಪೊಲೀಸ್ ಇಲಾಖೆ ಕೊಲೆಗಾರನನ್ನು ಹಿಡಿದು ಕೊಲೆಗೆ ನೈಜ ಕಾರಣವನ್ನು ಕಂಡು ಹುಡುಕುವುದರ ಮೂಲಕ ಮೃತರ ಕುಟುಂಬಕ್ಕೆ ನ್ಯಾಯ ಒದಗಿಸುವ ಕೆಲಸ ಮಾಡಬೇಕಾಗಿದೆ. ಹಂತಕನನ್ನು ಶೀಘ್ರವಾಗಿ ಪತ್ತೆ ಹಚ್ಚುವುದರ ಮೂಲಕ ಜಿಲ್ಲೆಯ ನಾಗರಿಕರಿಗೆ ರಕ್ಷಣೆಯ ಭರವಸೆ ನೀಡುವ ಕೆಲಸ ನಡೆಯಬೇಕಾಗಿದೆ ಎಂದು ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

No Comments

Leave A Comment