Log In
BREAKING NEWS >
``````````````ನಾಡಿನ ಸಮಸ್ತ ಜನತೆಗೆ,ನಮ್ಮ ಎಲ್ಲಾ ಜಾಹೀರಾತುದಾರರಿಗೆ,ಓದುಗರಿಗೆ ,ಅಭಿಮಾನಿಗಳಿಗೆ "ಶ್ರೀಅನ೦ತವೃತದ"ಶುಭಾಶಯಗಳು......

ಮಾಜಿ ಸಿಎಂ ಆಗಿ ವಿದ್ಯುತ್ ಕಳ್ಳತನ ಮಾಡುವ ದಾರಿದ್ರ್ಯ ಬಂದಿದ್ದು ದುರಂತ: ಎಚ್ ಡಿಕುಮಾರಸ್ವಾಮಿ ವಿರುದ್ಧ ಕಾಂಗ್ರೆಸ್ ವಾಗ್ದಾಳಿ

ಬೆಂಗಳೂರು: ಮಾಜಿ ಸಿಎಂ ಹಾಗೂ ಜೆಡಿಎಸ್ ರಾಜ್ಯಾಧ್ಯಕ್ಷ ಕುಮಾರಸ್ವಾಮಿ ಅಕ್ರಮವಾಗಿ ವಿದ್ಯುತ್ ಕಳ್ಳತನ ಮಾಡಿದ್ದಾರೆ ಎಂದು ಕಾಂಗ್ರೆಸ್ ಗಂಭೀರ ಆರೋಪ ಮಾಡಿದೆ.

ಹೌದು.. ಎಚ್ ಡಿ ಕುಮಾರಸ್ವಾಮಿ ಅವರು ತಮ್ಮ ಜೆ ಪಿ ನಗರದ ನಿವಾಸದ ದೀಪಾವಳಿಯ ದೀಪಾಲಂಕಾರಕ್ಕೆ ನೇರವಾಗಿ ವಿದ್ಯುತ್ ಕಂಬದಿಂದ ಅಕ್ರಮ ವಿದ್ಯುತ್ ಸಂಪರ್ಕ ಪಡೆದಿದ್ದಾರೆ ಎಂದು ಕಾಂಗ್ರೆಸ್ ಆರೋಪಿಸಿದೆ. ಈ ಬಗ್ಗೆ ವಿಡಿಯೋ ಸಹಿತ ಸುದೀರ್ಘ ಟ್ವೀಟ್ ಮಾಡಿದ್ದು, ‘ಜಗತ್ತಿನ ಏಕೈಕ ಮಹಾಪ್ರಾಮಾಣಿಕ ಹೆಚ್.ಡಿ ಕುಮಾರಸ್ವಾಮಿಯವರ ಜೆ ಪಿ ನಗರದ ನಿವಾಸದ ದೀಪಾವಳಿಯ ದೀಪಾಲಂಕಾರಕ್ಕೆ ನೇರವಾಗಿ ವಿದ್ಯುತ್ ಕಂಬದಿಂದ ಅಕ್ರಮ ವಿದ್ಯುತ್ ಸಂಪರ್ಕ ಪಡೆದಿದ್ದಾರೆ. ಒಬ್ಬ ಮಾಜಿ ಸಿಎಂ ಆಗಿ ವಿದ್ಯುತ್ ಕಳ್ಳತನ ಮಾಡುವ ದಾರಿದ್ರ್ಯ ಬಂದಿದ್ದು ದುರಂತ! ಕುಮಾರಸ್ವಾಮಿ  ಅವರೇ ನಮ್ಮ ಸರ್ಕಾರ ಗೃಹಜ್ಯೋತಿಯಲ್ಲಿ 200 ಯೂನಿಟ್ ಉಚಿತ ಕೊಡುತ್ತಿದೆಯೇ ಹೊರತು 2000 ಯೂನಿಟ್ ಅಲ್ಲ! ತಮಗೆ ಅಷ್ಟೊಂದು ದಾರಿದ್ರ್ಯ ಬಂದಿದ್ದರೆ ಗೃಹಜ್ಯೋತಿ ಯೋಜನೆಗೆ ಒಂದು ಅರ್ಜಿ ಹಾಕಬಹುದಿತ್ತಲ್ಲ.. ಒಹ್, ತಿಳಿದಿರಲಿಲ್ಲ ಗೃಹಜ್ಯೋತಿಯಲ್ಲಿ ಒಬ್ಬರಿಗೆ ಒಂದೇ ಮೀಟರ್ ಗೆ ಅವಕಾಶವಿದೆ, ತಮ್ಮ ಹೆಸರಲ್ಲಿ ಹಲವು ಮೀಟರ್ ಗಳಿವೆಯಲ್ಲವೇ! ಎಂದು ಕಿಡಿಕಾರಿದೆ.

ನಿಮ್ಮದೇ ಶೈಲಿಯ ಪ್ರಶ್ನೆ ಕೇಳಬೇಕೆಂದರೆ, ರಾಜ್ಯ ಬರ ಎದುರಿಸುತ್ತಿರುವಾಗ ನಿಮ್ಮ ಮನೆ ಮಾತ್ರ ಜಗಮಗಿಸಬೇಕೆ? ರೈತರ ಪಾಲಿನ ವಿದ್ಯುತ್ ಕಳ್ಳತನ ಮಾಡಿ ಮೋಜು ಮಾಡಬೇಕೆ? ನಿಮ್ಮ ಮನೆಯ ದೀಪಾವಳಿಗೆ ರಾಜ್ಯದ ಜನರ “ದಿವಾಳಿ”ಯನ್ನು ಬಯಸುತ್ತಿದ್ದೀರಾ? ವಿದ್ಯುತ್ತನ್ನೇ ಬಿಡದೆ ಲೂಟಿ ಮಾಡುವ ತಾವು ರಾಜ್ಯವನ್ನು ಇನ್ನೆಷ್ಟು ಲೂಟಿ ಮಾಡಿರಬಹುದು? ಎಂದು ಕಿಡಿಕಾರಿದೆ.

No Comments

Leave A Comment