``````````````ನಾಡಿನ ಸಮಸ್ತ ಜನತೆಗೆ,ನಮ್ಮ ಎಲ್ಲಾ ಜಾಹೀರಾತುದಾರರಿಗೆ,ಓದುಗರಿಗೆ ,ಅಭಿಮಾನಿಗಳಿಗೆ "ಶ್ರೀಅನ೦ತವೃತದ"ಶುಭಾಶಯಗಳು......
ಅಯೋಧ್ಯೆ ರಾಮ ಮಂದಿರ ಉದ್ಘಾಟನೆ ಕಾರ್ಯಕ್ರಮದಲ್ಲಿ ಭಾಗಿಯಾಗಲು ವಿಹೆಚ್ ಪಿಯಿಂದ 10 ಕೋಟಿ ಕುಟುಂಬಗಳಿಗೆ ಆಹ್ವಾನ
ಅಯೋಧ್ಯೆ: ಅಯೋಧ್ಯೆಯ ರಾಮ ಮಂದಿರದಲ್ಲಿ ಮೂರ್ತಿ ಪ್ರತಿಷ್ಠಾಪನೆ ಕಾರ್ಯಕ್ರಮದಲ್ಲಿ ಭಾಗಿಯಾಗಲು ವಿಶ್ವ ಹಿಂದೂ ಪರಿಷತ್ 10 ಕೋಟಿ ಕುಟುಂಬಗಳಿಗೆ ಆಹ್ವಾನ ನೀಡುವುದಾಗಿ ಹೇಳಿದೆ.
ಜ.22 ರಂದು ಅಯೋಧ್ಯೆಯಲ್ಲಿ ರಾಮಲಲ್ಲಾ ಮೂರ್ತಿ ಪ್ರತಿಷ್ಠಾಪನೆಯಾಗಲಿದೆ.
ನವದೆಹಲಿಯಲ್ಲಿ ನ.12 ರಂದು ಸುದ್ದಿಗೋಷ್ಠಿಯನ್ನುದ್ದೇಶಿಸಿ ಮಾತನಾಡಿರುವ ವಿಹೆಚ್ ಪಿ ಕೇಂದ್ರ ಕಾರ್ಯಾಧ್ಯಕ್ಷ ಅಲೋಕ್ ಕುಮಾರ್, ಅಕ್ಷತೆಯನ್ನೊಳಗೊಂಡ ಕಳಶ ಈಗಾಗಲೇ ದೇಶಾದ್ಯಂತ ತಲುಪಿಸಲಾಗುತ್ತಿದೆ.
ವಿಶ್ವಹಿಂದೂ ಪರಿಷತ್ ನ ಕಾರ್ಯಕರ್ತರು, ಹಿಂದೂ ಸಂಘಟನೆಗಳ ಕಾರ್ಯಕರ್ತರು ಜ.1 ರಿಂದ ಜ.15 ವರೆಗೆ ದೇಶದ ಗ್ರಾಮ, ನಗರಗಳಿಗೆ ತೆರಳಿ ಹಿಂದೂ ಕುಟುಂಬಗಳಿಗೆ ಆಹ್ವಾನ ನೀಡಲಿದ್ದಾರೆ ಎಂದು ಅಲೋಕ್ ಕುಮಾರ್ ಮಾಹಿತಿ ನೀಡಿದ್ದಾರೆ.
ವಿದೇಶಗಳಲ್ಲಿರುವ ಹಿಂದೂ ಕುಟುಂಬಗಳಿಗೆ ಆಹ್ವಾನ ನೀಡುವುದಕ್ಕಾಗಿ ಇದೇ ಮಾದರಿಯ ಕಾರ್ಯಕ್ರಮವನ್ನು ಆಯೋಜಿಸಲಾಗುತ್ತಿದೆ ಎಂದು ಅವರು ಹೇಳಿದ್ದಾರೆ.