ನಾಡಿನ ಸಮಸ್ತ ಜನತೆಗೆ ,ನಮ್ಮ ಎಲ್ಲಾ ಗ್ರಾಹಕರಿಗೆ,ಜಾಹೀರಾತುದಾರರಿಗೆ "ಕ್ರಿಸ್ಮಸ್" ಹಬ್ಬ ಹಾಗೂ ಹೊಸವರುಷದ ಶುಭಾಶಯಗಳು...

ಎಚ್‌ಎಸ್‌ಆರ್‌ಪಿ ನಂಬರ್‌ ಪ್ಲೇಟ್‌ ಅಳವಡಿಸಲು ಇನ್ನು 3 ದಿನ ಮಾತ್ರ ಬಾಕಿ

ಬೆಂಗಳೂರು:ನ ,14: ಕರ್ನಾಟಕದಲ್ಲಿ ಎಲ್ಲ ಹಳೆಯ ವಾಹನಗಳಿಗೆ ಅತಿ ಸುರಕ್ಷಿತ ನೋಂದಣಿ ಫಲಕ (ಹೈ ಸೆಕ್ಯುರಿಟಿ ರಿಜಿಸ್ಪ್ರೇಷನ್‌ ನಂಬರ್‌ ಪ್ಲೇಟ್‌HSRP) ಕಡ್ಡಾಯವಾಗಿ ಅಳವಡಿಸಬೇಕು ಎಂದು ಈಗಾಗಲೇ ರಾಜ್ಯ ಸರ್ಕಾರ ಅಧಿಸೂಚನೆ ಹೊರಡಿಸಿದ್ದು, ನಂಬರ್‌ ಪ್ಲೇಟ್‌ ಅಳವಡಿಸಲು ಮೂರು ದಿನ ಮಾತ್ರ ಬಾಕಿ ಇದೆ.

ಎಚ್‌ಎಸ್‌ಆರ್‌ಪಿ ನಂಬರ್‌ ಪ್ಲೇಟ್‌ಗಾಗಿ ಅರ್ಜಿ ಸಲ್ಲಿಸಲು ಇನ್ನು ಮೂರು ದಿನಗಳು ಮಾತ್ರ ಉಳಿದಿದ್ದು, ತಪ್ಪಿದ್ದಲ್ಲಿ 500ರಿಂದ 1000 ರೂ. ದಂಡವನ್ನು ಕಟ್ಟಬೇಕಾಗುತ್ತದೆ.

2019ರ ಏಪ್ರಿಲ್‌ 1ಕ್ಕಿಂತ ಮೊದಲು ನೋಂದಾಯಿಸಲ್ಪಟ್ಟ ಎಲ್ಲ ವಾಹನಗಳಿಗೆ ಅತಿ ಸುರಕ್ಷಿತ ನೋಂದಣಿ ಫಲಕವನ್ನು ಕಡ್ಡಾಯವಾಗಿ ಅಳವಡಿಸಬೇಕು ಎಂದು ಆಗಸ್ಟ್‌ 17ರಂದು ರಾಜ್ಯ ಸರ್ಕಾರ ಅಧಿಸೂಚನೆ ಹೊರಡಿಸಿತ್ತು.

ಇನ್ನು ಅದೇ ರೀತಿ ಆ.18ರಂದು ಸಾರಿಗೆ ಮತ್ತು ರಸ್ತೆ ಸುರಕ್ಷತೆ ಆಯುಕ್ತರು ಸುತ್ತೋಲೆ ಹೊರಡಿಸಿದ್ದರು. ಹೀಗಾಗಿ ಎಲ್ಲ ವಾಹನಗಳಿಗೆ ಅತಿ ಸುರಕ್ಷಿತ ನೋಂದಣಿ ಫಲಕವನ್ನು ಕಡ್ಡಾಯವಾಗಿ ಅಳವಡಿಸಬೇಕಾಗಿದೆ.

No Comments

Leave A Comment