ನಾಡಿನೆಲ್ಲೆಡೆಯಲ್ಲಿ ದೇವಸ್ಥಾನ ಹಾಗೂ ದೇವಿ ದೇವಾಲಯಗಳಲ್ಲಿ ನವರಾತ್ರೆಯ ಸ೦ಭ್ರಮ....ಸಮಸ್ತ ಓದುಗರಿಗೆ,ನಮ್ಮ ಜಾಹೀರಾತುದಾರರಿಗೆ,ಅಭಿಮಾನಿಗಳಿಗೆ ನವರಾತ್ರೆಯ ಶುಭಾಶಯಗಳು
kannada biggboss season10: ಮತ್ತೋರ್ವ ಬಿಗ್ ಬಾಸ್ ಸ್ಪರ್ಧಿ ವಿರುದ್ಧ ಎಫ್ಐಆರ್
ಬೆಂಗಳೂರು: ಕನ್ನಡ ಬಿಗ್ ಬಾಸ್ ಸೀಸನ್ 10 ನಲ್ಲಿ ಮತ್ತೋರ್ವ ಬಿಗ್ ಬಾಸ್ ಸ್ಪರ್ಧಿಗೆ ಸಂಕಷ್ಟ ಎದುರಾಗಿದೆ.
ತನಿಷಾ ಕುಪ್ಪಂಡ ವಿರುದ್ಧ ಬೆಂಗಳೂರು ಹೊರವಲಯದ ಕುಂಬಳಗೋಡು ಪೊಲೀಸ್ ಠಾಣೆಯಲ್ಲಿ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ (ಎಸ್‌ಸಿ/ಎಸ್‌ಟಿ) ದೌರ್ಜನ್ಯ ಕಾಯ್ದೆಯಡಿ ಪ್ರಕರಣ ದಾಖಲಾಗಿದೆ.
ಅಖಿಲ ಕರ್ನಾಟಕ ಬೋವಿ ಸಮಾಜದ ರಾಜ್ಯಾಧ್ಯಕ್ಷೆ ಪಿ.ಪದ್ಮ ತನಿಷಾ ಕುಪ್ಪುಂದ ವಿರುದ್ಧ ದೂರು ದಾಖಲಿಸಿದ್ದಾರೆ. ಬಾಸ್ ರಿಯಾಲಿಟಿ ಶೋ ನಲ್ಲಿ ಅವಹೇಳನಕಾರಿ ಪದ ಬಳಕೆ ಮಾಡುವ ಮೂಲಕ ಬೋವಿ ಜನಾಂಗಕ್ಕೆ ನಟಿ ತನಿಷಾ ಕುಪ್ಪಂಡ ಅವಮಾನ ಮಾಡಿದ್ದಾರೆ ಎಂದು ದೂರಿನಲ್ಲಿ ಆರೋಪಿಸಲಾಗಿದೆ.
ಇತ್ತೀಚೆಗೆ ಕನ್ನಡ ಬಿಗ್ ಬಾಸ್ ಶೋ ನ ಸ್ಪರ್ಧಿ ವರ್ತೂರು ಸಂತೋಷ್ ಅವರನ್ನು ಹುಲಿ ಉಗುರಿನ ಪೆಂಡೆಂಟ್ ಧರಿಸಿದ್ದ ಆರೋಪದಲ್ಲಿ ಬಂಧಿಸಲಾಗಿತ್ತು. ತನಿಷಾ ಕುಪ್ಪುಂಡ ವಿರುದ್ದ ದೂರು ದಾಖಲಿಸಿ ಕ್ರಮ ಕೈಗೊಂಡು ಬಿಗ್ ಬಾಸ್ ಮನೆಯಿಂದ ಹೊರ ಹಾಕಬೇಕು ಎಂದು ಆಗ್ರಹಿಸಲಾಗಿದೆ.