ನಾಡಿನೆಲ್ಲೆಡೆಯಲ್ಲಿ ದೇವಸ್ಥಾನ ಹಾಗೂ ದೇವಿ ದೇವಾಲಯಗಳಲ್ಲಿ ನವರಾತ್ರೆಯ ಸ೦ಭ್ರಮ....ಸಮಸ್ತ ಓದುಗರಿಗೆ,ನಮ್ಮ ಜಾಹೀರಾತುದಾರರಿಗೆ,ಅಭಿಮಾನಿಗಳಿಗೆ ನವರಾತ್ರೆಯ ಶುಭಾಶಯಗಳು

ದಳಪತಿಗಳಿಗೆ ಬಿಗ್ ಶಾಕ್: ಜೆಡಿಎಸ್ ನ ಇಬ್ಬರು ಮಾಜಿ ಶಾಸಕರು ಕಾಂಗ್ರೆಸ್ ಸೇರ್ಪಡೆ

ಬೆಂಗಳೂರು:  ಸಿಎಂ ಸಿದ್ದರಾಮಯ್ಯ, DCM ಡಿ.ಕೆ.ಶಿವಕುಮಾರ್ ಸಮ್ಮುಖದಲ್ಲಿ ಮಾಜಿ ಶಾಸಕರಾದ ಮಂಜುನಾಥ್​, ಗೌರಿ ಶಂಕರ್​ ಕಾಂಗ್ರೆಸ್ ಸೇರ್ಪಡೆಯಾಗಿದ್ದಾರೆ.

ಬೆಂಗಳೂರಿನ ಕೆಪಿಸಿಸಿ ಕಚೇರಿಯಲ್ಲಿ ನಡೆದ ಪಕ್ಷ ಸೇರ್ಪಡೆ ಕಾರ್ಯಕ್ರಮದಲ್ಲಿ ಬೆಂಬಲಿಗರ ಜೊತೆ ಮಂಜುನಾಥ್​, ಗೌರಿಶಂಕರ್ ಕಾಂಗ್ರೆಸ್ ಸೇರಿದರು. ಗೌರಿಶಂಕರ್ ಸೇರ್ಪಡೆ ಕಾರ್ಯಕ್ರಮಕ್ಕೆ ತುಮಕೂರು ನಾಯಕರೇ ಗೈರಾಗಿದ್ದಾರೆ.

ಸಿದ್ದರಾಮಯ್ಯ ಅವರ ಕಾಲು ಮುಟ್ಟಿ ಆಶೀರ್ವಾದ ಪಡೆದ ಮಾಜಿ ಶಾಸಕರಾದ ಗೌರಿ ಶಂಕರ್ ಮತ್ತು ಮಂಜುನಾಥ್ 2018ರಲ್ಲಿ ಬೊಮ್ಮನಹಳ್ಳಿ ವಿಧಾನಸಭಾ ಕ್ಷೇತ್ರದಿಂದ ಜೆಡಿಎಸ್ ಅಭ್ಯರ್ಥಿಯಾಗಿದ್ದ ಪ್ರಸಾದ್ ಗೌಡ ಕಾಂಗ್ರೆಸ್ ಸೇರ್ಪಡೆಯಾದರು.

ಬಿಜೆಪಿ-ಜೆಡಿಎಸ್‌ ಮೈತ್ರಿಯಾದ ಬಳಿಕ ಜೆಡಿಎಸ್‌ ನಾಯಕರು ಪಕ್ಷ ಬಿಡುತ್ತಿರುವ ವೇಗ ಹೆಚ್ಚಾಗಿದೆ. ಇದೀಗ ಲೋಕಸಭಾ ಚುನಾವಣೆಯ ಸಿದ್ಧತೆ ಹೊತ್ತಲ್ಲಿ ತುಮಕೂರಿನಲ್ಲಿ ಜೆಡಿಎಸ್‌ಗೆ ಬಿಗ್‌ ಶಾಕ್‌ ಎದುರಾಗಿದೆ.

No Comments

Leave A Comment