Log In
BREAKING NEWS >
ಉಡುಪಿ ನಗರದಲ್ಲಿನ ಗ್ರಾಹಕರ ಅಚ್ಚುಮೆಚ್ಚಿನ ಪ್ರಸಿದ್ಧ ಜವಳಿಮಳಿಗೆಯಾದ "ಕಲ್ಸ೦ಕ ಗಿರಿಜಾ ಸಿಲ್ಕ್"ನಲ್ಲಿ ಗ್ರಾಹಕರಿಗಾಗಿ ಜೂನ್ 1ರಿ೦ದ ಮಳೆಗಾಲದ ಮಹೋನ್ನತ ಭಾರೀ ರಿಯಾಯಿತಿ ದರದಲ್ಲಿ ವಸ್ತ್ರಗಳ ಮಾರಾಟ ಆರ೦ಭ.

ಉಡುಪಿ: One way ಲವ್ ನಾಲ್ವರ ಬರ್ಬರ ಹತ್ಯೆ ಗೆ ಕಾರಣ– 10 ಕ್ಕೂ ಹೆಚ್ಚು ಮಂದಿ ವಶಕ್ಕೆ, ಶಂಕಿತ ಆರೋಪಿ ಪ್ರವೀಣ್ ಚೌಗಲೆ ತೀವ್ರ ವಿಚಾರಣೆ: ಎಸ್ಪಿ ಡಾ.ಅರುಣ್


ಉಡುಪಿ:ಮೂವರು ಮಕ್ಕಳು ಸೇರಿದಂತೆ ನಾಲ್ವರ ಬರ್ಬರ ಹತ್ಯೆ ಪ್ರಕರಣದ ತನಿಖೆಯಲ್ಲಿ ಪೊಲೀಸರು ಮಹತ್ವದ ಘಟ್ಟ ತಲುಪಿದ್ದಾರೆ. ಸಿಸಿಟಿವಿ ದೃಶ್ಯಾವಳಿ ಹಾಗೂ ಫೋನ್ ಕರೆಗಳ ದಾಖಲೆಗಳ ಆಧಾರದ ಮೇಲೆ ಮಹಾರಾಷ್ಟ್ರದ ಸಾಂಗ್ಲಿ ಮೂಲದ ವ್ಯಕ್ತಿಯನ್ನು ಮಂಗಳವಾರ ಬೆಳಗಾವಿಯ ಜಿಲ್ಲೆಯ ರಾಯಭಾಗ ತಾಲೂಕಿನ ಕುಡಚಿಯಲ್ಲಿ ವಶಕ್ಕೆ ಪಡೆದಿರುವ ಶಂಕಿತ ಆರೋಪಿ ಪ್ರವೀಣ್ ಅರುಣ್ ಚೌಗಲೆ(39) ಎಂಬಾತನನ್ನು ತೀವ್ರ ವಿಚಾರಣೆಗೆ ಒಳಪಡಿಸಲಾಗಿದೆ ಎಂದು ಉಡುಪಿ ಜಿಲ್ಲಾ ಪೊಲೀಸ್ ಅಧೀಕ್ಷಕ ಡಾ.ಕೆ.ಅರುಣ್ ತಿಳಿಸಿದ್ದಾರೆ.

ಉಡುಪಿ ಎಸ್ಪಿ ಕಚೇರಿಯಲ್ಲಿಂದು ಮಾಧ್ಯಮದವರಿಗೆ ಮಾಹಿತಿ ನೀಡಿದ ಅವರು, ವಿಚಾರಣೆಯಲ್ಲಿ ಈ ಕೊಲೆ ಪ್ರಕರಣದಲ್ಲಿ ಆತನ ಪಾತ್ರ ಕಂಡುಬಂದಲ್ಲಿ ಆತನನ್ನು ಬಂಧಿಸಿ ಕಾನೂನು ಪ್ರಕಾರ ನ್ಯಾಯಾಲಯಕ್ಕೆ ಹಾಜರುಪಡಿಸಲಾಗುವುದು ಎಂದರು

ಪ್ರಕರಣಕ್ಕೆ ಸಂಬಂಧಿಸಿ ಐದು ತಂಡಗಳನ್ನು ರಚನೆ ಮಾಡಿ ವಿವಿಧ ಆಯಮಗಳಲ್ಲಿ ತನಿಖೆ ನಡೆಸಲಾಗಿತ್ತು. ಮಾಹಿತಿಯಂತೆ ಆರೋಪಿಯನ್ನು ಕುಡುಚಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ವಶಕ್ಕೆ ಪಡೆದು ಉಡುಪಿಗೆ ಕರೆದುಕೊಂಡು ಬರಲಾಗಿದೆ. ಇದೀಗ ಆತನನ್ನು ವಿಚಾರಣೆಗೊಳಪಡಿಸಿದ್ದು ಇನ್ನಷ್ಟೇ ಹೆಚ್ಚಿನ ಮಾಹಿತಿ ತಿಳಿದು ಬರಬೇಕಾಗಿದೆ ಎಂದರು.

ಕೆಲವೊಂದು ತಾಂತ್ರಿಕ ಹಾಗೂ ಗುಪ್ತಚರ ಮಾಹಿತಿಯಂತೆ ಈ ವ್ಯಕ್ತಿ ಮೇಲೆ ಅನುಮಾನಗೊಂಡು ವಶಕ್ಕೆ ಪಡೆದುಕೊಳ್ಳಲಾಗಿದೆ ಆತನ ವಿಚಾರಣೆಯಿಂದ ಕೊಲೆಗೆ ಕಾರಣ ಸೇರಿದಂತೆ ಹಲವು ಮಾಹಿತಿಗಳು ದೊರೆಯಲಿದೆ. ವಿಚಾರಣೆ ಮುಗಿದ ಬಳಿಕ ಕಾನೂನು ಪ್ರಕಾರ ಆತನನ್ನು ನ್ಯಾಯಕ್ಕೆ ಹಾಜರುಪಡಿಸಲಾಗುವುದು ಎಂದು ಅವರು ತಿಳಿಸಿದರು.

ಪ್ರಕರಣದ ತನಿಖಾಧಿಕಾರಿ ವರದಿ ನೀಡಿದ ಬಳಿಕ ಹೆಚ್ಚಿನ ಮಾಹಿತಿ ಮಾಧ್ಯಮಗಳಿಗೆ ಬಿಡುಗಡೆ ಮಾಡಲಾಗುವುದು. ನಮ್ಮ ಮಾಹಿತಿ ಪ್ರಕಾರ ಆತ ಸಿ.ಐ.ಎಸ್.ಎಫ್. ಹಾಗೂ ಸಿ.ಆರ್.ಪಿ.ಎಫ್.ನಲ್ಲಿ ಇರಲಿಲ್ಲ ಎಂಬುದು ತಿಳಿದು ಬಂದಿದೆ. ಆತ ಸಿವಿಲ್ ಪೊಲೀಸ್ ನಲ್ಲಿ ಕರ್ತವ್ಯ ನಿರ್ವಹಿಸಿರಬಹುದು ಎಂಬ ಮಾಹಿತಿ ದೊರೆತಿದೆ. ಆ ಬಗ್ಗೆ ಪರಿಶೀಲನೆ ನಡೆಸಲಾಗುತ್ತಿದೆ ಎಂದವರು ಹೇಳಿದರು.

ಈ ಪ್ರಕರಣಕ್ಕೆ ಸಂಬಂಧಿಸಿದಂತೆ ನಾವು 15 ರಿಂದ 20 ಮಂದಿ ಶಂಕಿತರನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಿದ್ದೇವೆ. ಅದೇ ರೀತಿ ಪ್ರವೀಣನನ್ನು ಕೂಡ ವಶಕ್ಕೆ ಪಡೆದುಕೊಂಡು ವಿಚಾರಣೆ ನಡೆಸುತ್ತಿದ್ದೇವೆ ಎಂದು ಎಸ್ಪಿ ಮಾಹಿತಿ ನೀಡಿದರು.

ವನ್ ವೇ ಲವ್ ವೇ ಈ ಭೀಕರ ಕೊಲೆಗೆ ಕಾರಣವಾಗಿದೆ ಎನ್ನಲಾಗಿದೆ. ಹಲವು ಸಮಯದಿ೦ದಲೂ ಈತನು ಫೋನ್ ಕರೆಮಾಡಿ ಕಿರಿಕ್ ಮಾಡುತ್ತಿದ್ದ ಎನ್ನಲಾಗಿದೆ.

No Comments

Leave A Comment