Log In
BREAKING NEWS >
ಕರಾವಳಿಯಲ್ಲಿ ಹೆಚ್ಚಿದ ಬಿಸಿಲಿನ ತಾಪಮಾನ-ಸಾವು ಸ೦ಭವಿಸುವ ಸಾಧ್ಯತೆ-ಎಚ್ಚರ ಬಿಸಿಲಿನಲ್ಲಿ ಹೊರಗೆ ಬರಲೇ ಬೇಡಿ....

ಸಿಎಸ್ ಆರ್ ಫಂಡಿಂಗ್ ಬಗ್ಗೆ ಯತೀಂದ್ರ ಪ್ರಸ್ತಾಪಿಸಿದ್ದು, ಆರೋಪ ಸಾಬೀತಾದರೆ ರಾಜಕೀಯ ನಿವೃತ್ತಿ: ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಸಿಎಸ್ ಆರ್ ಫಂಡಿಂಗ್ ಬಗ್ಗೆ ನನ್ನ ಪುತ್ರ ಡಾ ಯತೀಂದ್ರ ಪ್ರಸ್ತಾಪಿಸಿದ್ದು ಎಂದು ಸಿಎಂ ಸಿದ್ದರಾಮಯ್ಯ ಮಾಧ್ಯಮ ಪ್ರತಿನಿಧಿಗಳಿಗೆ ಪ್ರತಿಕ್ರಿಯಿಸಿದ್ದಾರೆ.

ಡಾ ಯತೀಂದ್ರ ಸಿದ್ದರಾಮಯ್ಯ ಮೊಬೈಲ್ ನಲ್ಲಿ ಮಾತನಾಡಿರುವ ವಿಡಿಯೊ ಮಾಧ್ಯಮಗಳಲ್ಲಿ ತೀವ್ರ ಸುದ್ದಿಯಾಗಿ ವಿರೋಧ ಪಕ್ಷಗಳು ಟೀಕಿಸುತ್ತಿರುವ ಸಂದರ್ಭದಲ್ಲಿ ಪ್ರತಿಕ್ರಿಯಿಸಿರುವ ಸಿಎಂ ಸಿದ್ದರಾಮಯ್ಯ ಶಾಲೆಗಳನ್ನು ದುರಸ್ತಿ ಮಾಡಲಾಗುತ್ತಿದೆ.  ಅದಕ್ಕೆ ಸಿಎಸ್ ಆರ್ ಫಂಡ್ ಒದಗಿಸುವ ಬಗ್ಗೆ ಮಾತನಾಡಿದ್ದಾರೆ ಹೊರತು ವರ್ಗಾವಣೆ ಬಗ್ಗೆ ಅಲ್ಲ ಎಂದು ಸ್ಪಷ್ಟಪಡಿಸಿದರು.

ಐದು ಹೆಸರು ಮಾತ್ರ ಎಂದು ಮೊಬೈಲ್ ನಲ್ಲಿ ಯತೀಂದ್ರ ಹೇಳಿದ್ದರ ಬಗ್ಗೆ ಕೇಳಿದಾಗ ಐದು ಹೆಸರು ಅಂದರೆ ವರ್ಗಾವಣೆ ಮಾಡುವ ಹೆಸರುಗಳೆಂದರ್ಥವೇ, ಇದನ್ನು ಭಾರೀ ದೊಡ್ಡದಾಗಿ ವಿವಾದ ಮಾಡುತ್ತಿದ್ದಾರಷ್ಟೆ ಎಂದರು.

ರಾಜಕೀಯ ನಿವೃತ್ತಿ: ನನ್ನ 40 ವರ್ಷಗಳ ರಾಜಕೀಯ ಜೀವನದಲ್ಲಿ ಯಾವುದೇ ದಂಧೆ, ಹಗರಣಗಳಲ್ಲಿ ಭಾಗಿಯಾಗಿಲ್ಲ. ಕುಮಾರಸ್ವಾಮಿ ರಾಜಕೀಯಕ್ಕಾಗಿ ಏನೆಲ್ಲಾ ಆರೋಪ ಮಾಡಬಹುದು, ಮಾಡಿಕೊಳ್ಳಲಿ, ಕುಮಾರಸ್ವಾಮಿ ಆರೋಪಗಳ ಬಗ್ಗೆ ಬೇಕಾದರೆ ತನಿಖೆ ಮಾಡಿಕೊಳ್ಳಲಿ, ನನ್ನ ರಾಜಕೀಯ ಜೀವನದಲ್ಲಿ ವರ್ಗಾವಣೆ ದಂಧೆ ಮಾಡಿಲ್ಲ. ವರ್ಗಾವಣೆ ದಂಧೆ ಮಾಡಿದ್ದು ಸಾಬೀತಾದರೆ ರಾಜಕೀಯ ನಿವೃತ್ತಿ ಪಡೆಯುತ್ತೇನೆ ಎಂದರು.

ಶ್ಯಾಡೋ ಸಿಎಂ: ವರ್ಗಾವಣೆ ದಂಧೆ ವಿಚಾರದಲ್ಲಿ ಮಾತನಾಡಿರುವ ವಿಡಿಯೊ ಎಂದು ಹೇಳಲಾದ ಸಿಎಂ ಸಿದ್ದರಾಮಯ್ಯ ಪುತ್ರ ಡಾ ಯತೀಂದ್ರ ಮಾತನಾಡಿರುವ ವಿಡಿಯೊ ವ್ಯಾಪಕವಾಗಿ ವೈರಲ್ ಆಗುತ್ತಿದ್ದಂತೆ ಬಿಜೆಪಿ ಟ್ವೀಟ್ ಮೂಲಕ ಸರ್ಕಾರವನ್ನು ಮತ್ತು ಸಿಎಂ ಸಿದ್ದರಾಮಯ್ಯನವರನ್ನು ಟೀಕಿಸಿದೆ.

ಸಿದ್ದರಾಮಯ್ಯನವರು ನಾಮಕಾವಸ್ತೆ ಸಿಎಂ ಅಷ್ಟೆ, ಅವರ ಹೆಸರಿನಲ್ಲಿ ಡಾ ಯತೀಂದ್ರ ಸರ್ಕಾರದ ಆಡಳಿತದಲ್ಲಿ ಹಸ್ತಕ್ಷೇಪ ಮಾಡುತ್ತಿದ್ದಾರೆ. ಸರ್ಕಾರದಲ್ಲಿ ವರ್ಗಾವಣೆ ದಂಧೆ ಮಿತಿಮೀರಿದೆ ಎಂದು ಆರೋಪಿಸಿದೆ.

No Comments

Leave A Comment