ದ.ಕ. ಜಿಲ್ಲೆಯ ಮೂವರಿಗೆ ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ರಾಷ್ಟ್ರೀಯ ಪ್ರಶಸ್ತಿ...ಪ್ರಧಾನ ಮಂತ್ರಿ ಯೋಜನೆಗಳಿಗೆ ಮರುನಾಮಕರಣ ಮಾಡದಂತೆ ರಾಜ್ಯಗಳಿಗೆ ಕೇಂದ್ರ ಸರಕಾರದ ಆಗ್ರಹ...VHP ಕಾರ್ಯಕ್ರಮದಲ್ಲಿ ವಿವಾದಾತ್ಮಕ ಹೇಳಿಕೆ: ಸುಪ್ರೀಂಕೋರ್ಟ್ ಕೊಲಿಜಿಯಂ ಮುಂದೆ ನ್ಯಾ. ಶೇಖರ್ ಯಾದವ್ ಹಾಜರಾಗುವ ಸಾಧ್ಯತೆ
ಉಡುಪಿಯಲ್ಲೊಂದು ಘೋರ ದುರಂತ: ಆಟವಾಡುತ್ತಿದ್ದಾಗ ಕಳಚಿ ಬಿದ್ದ ಗೇಟ್: 3 ವರ್ಷದ ಮಗು ಸಾವು
ಉಡುಪಿ: ಗೆಸ್ಟ್ ಹೌಸ್ ಒಂದರ ಗೇಟ್ ಕಳಚಿ ಬಿದ್ದು ಆಲ್ಲೇ ಆಟವಾಡುತ್ತಿದ್ದ ಮಗು ದಾರುಣವಾಗಿ ಪ್ರಾಣ ಕಳೆದುಕೊಂಡ ಘಟನೆ ಉಡುಪಿಯಲ್ಲಿ ನಡೆದಿದೆ.
ಕೋಟತಟ್ಟು ಗ್ರಾಮ ಪಂಚಾಯತ್ ವ್ಯಾಪ್ತಿಯ ಪಡುಕರೆಯಲ್ಲಿ ಘಟನೆ ನಡೆದಿದ್ದು ಸುಧೀರ್ ಮೊಗವೀರ ಅವರ ಪುತ್ರ ಸುಶಾಂತ್ (3) ಮೃತಪಟ್ಟ ಮಗು . ಪುಟ್ಟ ಮಗು ಸುಶಾಂತ್ ಪ್ರತಿನಿತ್ಯವೂ ಮನೆಯ ಪಕ್ಕದ ಗೆಸ್ಟ್ ಹೌಸ್ ಬಳಿ ಆಟವಾಡುತ್ತಿದ್ದ. ಮಂಗಳವಾರ ಅಚಾನಕ್ ಆಗಿ ಗೆಸ್ಟ್ ಹೌಸ್‌ನ ಗೇಟ್ ಕಳಚಿ ಬಿದ್ದಿದ್ದು, ಆಟವಾಗುತ್ತಿದ್ದ ಮಗುವಿನ ಮೇಲೆ ಬಿದ್ದಿದೆ.
ಗಂಭೀರವಾಗಿ ಗಾಯಗೊಂಡಿದ್ದ ಮಗುವನ್ನು ತಕ್ಷಣ ಆಸ್ಪತ್ರೆಗೆ ಕರೆದೊಯ್ಯಲಾಯಿತಾದರೂ ಅದು ಬದುಕುಳಿಯಲಿಲ್ಲ. ಗೆಸ್ಟ್ ಹೌಸ್ ನವರ ಬೇಜವಾಬ್ದಾರಿತನದ ಈ ದುರಂತ ಸಂಭವಿಸಿದೆ ಎಂದು ಸ್ಥಳೀಯರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಕೋಟ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.