ಇಬ್ಬರು ಉಗ್ರರು ಅಡಗಿರುವ ಶಂಕೆ: ಜಮ್ಮುವಿನಲ್ಲಿ ಎನ್ಕೌಂಟರ್ ಆರಂಭ
ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ ರೌಜರಿಯಲ್ಲಿ ಇಬ್ಬರು ಉಗ್ರರು ಅಡಗಿ ಕುಳಿತಿರುವ ಶಂಕೆಗಳು ವ್ಯಕ್ತವಾಗಿರುವ ಹಿನ್ನೆಲೆಯಲ್ಲಿ ಭದ್ರತಾ ಪಡೆಗಳು ಎನ್ಕೌಂಟರ್ ಆರಂಭಿಸಿದ್ದಾರೆ.
ರಜೌರಿಯ ಕಲಕೋಟೆ ತಹಸಿಲ್‌ನ ಬಾಜಿ ಮಾಲ್ ಪ್ರದೇಶದಲ್ಲಿ ಭದ್ರತಾಪಡೆಗಳು ಹಾಗೂ ಉಗ್ರರ ನಡುವೆ ಭಾರೀ ಗುಂಡಿನ ಚಕಮಕಿ ನಡೆಯುತ್ತಿದೆ ಎಂದು ತಿಳಿದುಬಂದಿದೆ.
ಸ್ಥಳದಲ್ಲಿ ಇಬ್ಬರು ಉಗ್ರರು ಅಡಗಿ ಕುಳಿತಿದ್ದು, ಯೋಧರ ಮೇಲೆ ಗುಂಡಿನ ದಾಳಿ ನಡೆಸುತ್ತಿದ್ದಾರೆ. ಉಗ್ರರು ಗುಂಡಿನ ದಾಳಿ ನಡೆಸುತ್ತಿರುವ ಹಿನ್ನೆಲೆಯಲ್ಲಿ ಉಗ್ರರನ್ನು ಭದ್ರತಾ ಪಡೆಗಳು ಸುತ್ತುವರೆದಿದ್ದು, ಎರಡೂ ಕಡೆಯಿಂದ ಗುಂಡಿನ ಚಕಮಕಿ ಮುಂದುವರಿದಿದೆ. ಸೇನಾಪಡೆಗಳು ಉಗ್ರರಿಗೆ ತಕ್ಕ ಪ್ರತ್ಯುತ್ತರ ನೀಡುತ್ತಿವೆ.