ಉಡುಪಿ ಶ್ರೀಲಕ್ಷ್ಮೀವೆ೦ಕಟೇಶ ದೇವಸ್ಥಾನದಲ್ಲಿ ಜನವರಿ 29ರಿ೦ದ 125 ದಿನಗಳಕಾಲ ನಿರ೦ತರ ಅಹೋರಾತ್ರೆ ಭಜನಾ ಕಾರ್ಯಕ್ರಮವು ಜರಗಲಿದೆ. ಭಜನಾ ಕಾರ್ಯಕ್ರಮವನ್ನು ಕಾಶೀಮಠ ಶ್ರೀಶ್ರೀಸ೦ಯಮೀ೦ದ್ರ ತೀರ್ಥಶ್ರೀಪಾದರು ದೀಪಪ್ರಜ್ವಲನೆ ಮಾಡುವುದರೊ೦ದಿಗೆ ಭಜನಾ ಕಾರ್ಯಕ್ರಮಕ್ಕೆ ಚಾಲನೆ ನೀಡಲಿದ್ದಾರೆ.
ರಜೌರಿಯಲ್ಲಿ ಉಗ್ರರ ವಿರುದ್ಧ ಎನ್ಕೌಂಟರ್: ಕನ್ನಡಿಗ ಕ್ಯಾಪ್ಟನ್ ಪ್ರಾಂಜಲ್ ಸೇರಿದಂತೆ ನಾಲ್ವರು ಯೋಧರು ಹುತಾತ್ಮ, ಮುಂದುವರೆದ ಕಾರ್ಯಾಚರಣೆ
ಶ್ರೀಗರ: ಜಮ್ಮು ಮತ್ತು ಕಾಶ್ಮೀರದ ರಜೌರಿ ಜಿಲ್ಲೆಯಲ್ಲಿ ಸೇನಾಪಡ ಮತ್ತು ಉಗ್ರರ ನಡುವೆ ಬುಧವಾರ ನಡೆದ ಗುಂಡಿನ ಚಕಮಕಿಯಲ್ಲಿ ಕನ್ನಡಿಗ ಕ್ಯಾಪ್ಟನ್ ಎಂ.ವಿ.ಪ್ರಾಂಜಲ್ ಸೇರಿ ನಾಲ್ವರು ಯೋಧರು ಹುತಾತ್ಮರಾಗಿದ್ದು, ಮತ್ತಿಬ್ಬರು ಯೋಧರು ಗಾಯಗೊಂಡಿದ್ದಾರೆಂದು ತಿಳಿದುಬಂದಿದೆ.
ರಜೌರಿಯ ಅರಣ್ಯ ಪ್ರದೇಶದಲ್ಲಿ ಉಗ್ರರು ಅಡಗಿ ಕುಳಿತಿದ್ದಾರೆಂಬ ಖಚಿತ ಮಾಹಿತಿ ಲಭ್ಯವಾದ ಹಿನ್ನೆಲೆಯಲ್ಲಿ ಭದ್ರತಾ ಪಡೆಗಳು ಹಾಗೂ ಪೊಲೀಸರು ನಿನ್ನೆ ಜಂಟಿ ಕಾರ್ಯಾಚರಣೆ ಆರಂಭಿಸಿದ್ದವು.
ಈ ವೇಳೆ ಅಡಗಿ ಕುಳಿತಿದ್ದ ಉಗ್ರರು ಏಕಾಏಕಿ ಸೇನಾಪಡೆಗಳ ಮೇಲೆ ಗುಂಡಿನ ದಾಳಿ ನಡೆಸಿದ್ದಾರೆ. ಪರಿಣಾಮ ಇಬ್ಬರು ಸೇನಾಧಿಕಾರಿಗಳು ಹಾಗೂ ಇಬ್ಬರು ಸೈನಿಕರು ಹುತಾತ್ಮರಾಗಿದ್ದಾರೆ. ಈ ನಡುವೆ ಅಡಗಿ ಕುಳಿತಿರುವ ಉಗ್ರರಿಗಾಗಿ ಕಾರ್ಯಾಚರಣೆ ಮುಂದುವರೆದಿದೆ ಎಂದು ವರದಿಗಳು ತಿಳಿಸಿವೆ.
ಮೈಸೂರು ಮೂಲದ ಕ್ಯಾಪ್ಟನ್ ಎಂ.ವಿ.ಪ್ರಾಂಜಲ್ ಅವರ ತಂದೆ ವೆಂಕಟೇಶ್ ಅವರು ಮಂಗಳೂರಿನ MRPL ಸಂಸ್ಥೆಯಲ್ಲಿ ಎಂಡಿ ಆಗಿದ್ದರು. ಹೀಗಾಗಿ ಮಂಗಳೂರು ಹೊರವಲಯದ ಕಾಟಿಪಳ್ಳದಲ್ಲಿ ಕುಟುಂಬ ಸಹಿತ ವೆಂಕಟೇಶ್ ವಾಸವಿದ್ದರು. ಮಂಗಳೂರು, ಬೆಂಗಳೂರಿನಲ್ಲಿ ಶಿಕ್ಷಣ ಪೂರೈಸಿದ ಪ್ರಾಂಜಲ್ ಭಾರತೀಯ ಸೇನೆಗೆ ಸೇರಿದ್ದರು. ಅಲ್ಲದೆ, 63 ರಾಷ್ಟ್ರೀಯ ರೈಫಲ್ಸ್ ಅನ್ನು ಲೀಡ್ ಮಾಡುತ್ತಿದ್ದರು. ಇತ್ತೀಚೆಗೆ ವೆಂಕಟೇಶ್ ಅವರು ಬೆಂಗಳೂರಿಗೆ ವರ್ಗಾವಣೆಗೊಂಡಿದ್ದರಿಂದ ನಂದನವನದಲ್ಲಿ ನೆಲೆಸಿದ್ದರು.
ಈ ನಡುವೆ ರಜೌರಿಯಲ್ಲಿ ಸ್ಥಳೀಯರಿಗೆ ಮನೆ ಬಿಟ್ಟು ಹೊರಗೆ ಬರದಂತೆ ಸೂಚಿಸಲಾಗಿದ್ದು, ಶಾಲೆಗಳಿಗೆ ರಜೆ ನೀಡಲಾಗಿದೆ ಎಂದು ತಿಳಿದುಬಂದಿದೆ.