ದ.ಕ. ಜಿಲ್ಲೆಯ ಮೂವರಿಗೆ ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ರಾಷ್ಟ್ರೀಯ ಪ್ರಶಸ್ತಿ...ಪ್ರಧಾನ ಮಂತ್ರಿ ಯೋಜನೆಗಳಿಗೆ ಮರುನಾಮಕರಣ ಮಾಡದಂತೆ ರಾಜ್ಯಗಳಿಗೆ ಕೇಂದ್ರ ಸರಕಾರದ ಆಗ್ರಹ...VHP ಕಾರ್ಯಕ್ರಮದಲ್ಲಿ ವಿವಾದಾತ್ಮಕ ಹೇಳಿಕೆ: ಸುಪ್ರೀಂಕೋರ್ಟ್ ಕೊಲಿಜಿಯಂ ಮುಂದೆ ನ್ಯಾ. ಶೇಖರ್ ಯಾದವ್ ಹಾಜರಾಗುವ ಸಾಧ್ಯತೆ

ಯುವಕನ ಕತ್ತು ಕೊಯ್ದು ಕೊಲೆ ಮಾಡಿ ಹೆಣದ ಮೇಲೆ ಕುಣಿದು ವಿಕೃತಿ ಮೆರೆದ 16ರ ಬಾಲಕನ ಬಂಧನ

ನವದೆಹಲಿ: 350 ರೂ.ಗಾಗಿ 16 ವರ್ಷದ ಹುಡುಗನೊಬ್ಬ 18 ವರ್ಷದ ಯುವಕನ ಕತ್ತು ಕೊಯ್ತು ಭೀಕರವಾಗಿ ಕೊಲೆ ಮಾಡಿರುವ ಘಟನೆ ದೆಹಲಿಯ ಕಾಲೊನಿಯೊಂದರಲ್ಲಿ ನಡೆದಿದೆ.

ಕೊಲೆ ಮಾಡಿದ ಬಳಿಕ ಹುಡುಗ ಅದೇ ಶವದ ಮೇಲೆ ನೃತ್ಯಮಾಡಿ ವಿಕೃತಿ ಮೆರೆದಿರುವ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ.

ಈಶಾನ್ಯ ದೆಹಲಿಯ ಪ್ರದೇಶದ ಕಾಲೊನಿಯೊಂದರಲ್ಲಿ ಕೊಲೆ ನಡೆದಿದ್ದು, ಸಿಸಿಟಿವಿಯಲ್ಲಿ ದೃಶ್ಯಗಳು ಸೆರೆಯಾಗಿರುವುದಾಗಿ ಪೊಲೀಸರು ತಿಳಿಸಿದ್ದಾರೆ. ಆರೋಪಿ ಹುಡುಗ 18ರ ಯುವಕನಿಗೆ 60ಕ್ಕೂ ಹೆಚ್ಚು ಬಾರಿ ಇರಿದು ಕೊಂದಿದ್ದಾನೆ, ನಂತರ ಶವದ ಮೇಲೆ ನಿಂತು ನೃತ್ಯ ಮಾಡಿ ವಿಕೃತಿ ಮೆರೆದಿದ್ದಾನೆ.

ಪೊಲೀಸರ ಮಾಹಿತಿ ಪ್ರಕಾರ, ಹುಡುಗ ಕಳ್ಳತನ ಮಾಡುವ ಉದ್ದೇಶದಿಂದ ಆ ಪ್ರದೇಶಕ್ಕೆ ಬಂದಿದ್ದ. ಅದಕ್ಕಾಗಿ ಮೊದಲು ಯುವಕನ ಕತ್ತು ಹಿಸುಕಿ ಪ್ರಜ್ಞೆ ತಪ್ಪಿಸಿದ್ದಾನೆ. ನಂತರ ಆತನ ಬಳಿಯಿದ್ದ ಹಣವನ್ನು ದೋಚಿ, ಅನೇಕ ಬಾರಿ ಇರಿದು ಕೊಲೆ ಮಾಡಿದ್ದಾನೆ. ಬಳಿಕ ಒಂದು ಕಿರಿದಾದ ರಸ್ತೆಗೆ ಶವವನ್ನ ಎಳೆದುಕೊಂಡು ಹೋಗಿದ್ದಾನೆ. ಅವನು ಸತ್ತಿದ್ದಾನೆಯೋ ಇಲ್ಲವೋ ಎಂಬುದನ್ನು ಖಚಿತಪಡಿಸಿಕೊಳ್ಳಲು ಪದೇ ಪದೆ ಕುತ್ತಿಗೆಯನ್ನು ಕೊಯ್ದಿದ್ದಾನೆ. ಅಷ್ಟಕ್ಕೇ ನಿಲ್ಲದ ಕ್ರೌರ್ಯ ಆತನ ತಲೆಯನ್ನ ಒದ್ದು, ಶವದ ಮೇಲೆ ನಿಂತು ಕುಣಿದಾಡಿದ್ದಾನೆ. ಈ ಭೀಕರ ದೃಶ್ಯಗಳೆಲ್ಲವೂ ಕ್ಯಾಮೆರಾದಲ್ಲಿ ಸೆರೆಯಾಗಿದೆ ಎಂದು ಹೇಳಿದ್ದಾರೆ.

No Comments

Leave A Comment