ಉಡುಪಿ ಶ್ರೀಲಕ್ಷ್ಮೀವೆ೦ಕಟೇಶ ದೇವಸ್ಥಾನದಲ್ಲಿ ಜನವರಿ 29ರಿ೦ದ 125 ದಿನಗಳಕಾಲ ನಿರ೦ತರ ಅಹೋರಾತ್ರೆ ಭಜನಾ ಕಾರ್ಯಕ್ರಮವು ಜರಗಲಿದೆ. ಭಜನಾ ಕಾರ್ಯಕ್ರಮವನ್ನು ಕಾಶೀಮಠ ಶ್ರೀಶ್ರೀಸ೦ಯಮೀ೦ದ್ರ ತೀರ್ಥಶ್ರೀಪಾದರು ದೀಪಪ್ರಜ್ವಲನೆ ಮಾಡುವುದರೊ೦ದಿಗೆ ಭಜನಾ ಕಾರ್ಯಕ್ರಮಕ್ಕೆ ಚಾಲನೆ ನೀಡಲಿದ್ದಾರೆ.
ಉಡುಪಿ ಶ್ರೀಕೃಷ್ಣಮಠದಲ್ಲಿ ತೆಪ್ಪೋತ್ಸವ , ಲಕ್ಷದೀಪೋತ್ಸವ ಶುಭಾರ೦ಭ…
ಉಡುಪಿ:ಶ್ರೀಕೃಷ್ಣಮಠದಲ್ಲಿ ಅಷ್ಟಮಠಾಧೀಶರ ಉಪಸ್ಥಿತಿಯಲ್ಲಿ ವೈಭವದೊಂದಿಗೆ ತೆಪ್ಪೋತ್ಸವ , ಲಕ್ಷದೀಪೋತ್ಸವವು ಶುಕ್ರವಾರದ ಉತ್ಥಾನ ದ್ವಾದಶಿಯ೦ದು ಪ್ರಾರಂಭಗೊಂಡಿತು. ಶ್ರೀಕೃಷ್ಣಮಠದ ಶ್ರೀಕೃಷ್ಣಾಪುರ ಮಠದ ಶ್ರೀವಿದ್ಯಾಸಾಗರ ತೀರ್ಥಶ್ರೀಪಾದರು,ಪಲಿಮಾರು ಮಠದ ಶ್ರೀವಿದ್ಯಾಧೀಶ ತೀರ್ಥಶ್ರೀಪಾದರು, ಪೇಜಾವರ ಮಠದ ಶ್ರೀವಿಶ್ವಪ್ರಸನ್ನ ತೀರ್ಥಶ್ರೀಪಾದರು, ಕಾಣಿಯೂರು ಮಠದ ಶ್ರೀವಿದ್ಯಾವಲ್ಲಭ ತೀರ್ಥಶ್ರೀಪಾದರು, ಅದಮಾರು ಮಠದ ಶ್ರೀಈಶಪ್ರಿಯ ತೀರ್ಥಶ್ರೀಪಾದರು,ಪಲಿಮಾರು ಮಠದ ಕಿರಿಯ ಯತಿಗಳಾದ ಶ್ರೀವಿದ್ಯಾರಾಜೇಶ್ವರ ತೀರ್ಥಶ್ರೀಪಾದರು, ಶಿರೂರು ಮಠದ ಶ್ರೀವೇದವರ್ಧನ ತೀರ್ಥಶ್ರೀಪಾದರು ಉಪಸ್ಥಿತರಿದ್ದರು. ಸಾವಿರಾರು ಮ೦ದಿ ಭಕ್ತರು ಲಕ್ಷದೀಪೋತ್ಸವದಲ್ಲಿ ಭಾಗಿಯಾಗಿದ್ದರು.